Bible Language Cross References for the verse John 9:0 in KNV
- 1 ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ--ನೀವು ಈ ಒಡಂಬಡಿ ಕೆಯ ಮಾತುಗಳನ್ನು ಕೇಳಿರಿ;
- 2 ಯೆಹೂದದ ಮನುಷ್ಯರ ಸಂಗಡಲೂ ಯೆರೂಸಲೇಮಿನ ನಿವಾಸಿಗಳ ಸಂಗ ಡಲೂ ಮಾತನಾಡಿ ಅವರಿಗೆ ನೀನು ಹೇಳಬೇಕಾದ ದ್ದೇನಂದರೆ--
- 3 ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
- 4 ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.
- 5 ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
- 6 ತರುವಾಯ ಕರ್ತನು ನನಗೆ ಹೇಳಿದ್ದೇನಂದರೆ--ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸಾರಿ ಹೇಳು, ಹೇಗಂದರೆ--ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ಅವುಗಳನ್ನು ಮಾಡಿರಿ.
- 7 ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,
- 8 ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
- 9 ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
- 10 ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
- 11 ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
- 12 ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು; ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವದೇ ಇಲ್ಲ.
- 13 ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.
- 14 ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
- 15 ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.
- 16 ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
- 17 ಇಸ್ರಾಯೇಲಿನ ಮನೆಯವರೂ ಯೆಹೂದದ ಮನೆಯವರೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ ನಿನ್ನನ್ನು ನೆಟ್ಟ ಸೈನ್ಯ ಗಳ ಕರ್ತನು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾನೆ.
- 18 ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ.
- 19 ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
- 20 ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ.
- 21 ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--
- 22 ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.
- 23 ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
- 1 ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು.
- 2 ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
- 3 ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
- 4 ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು.
- 5 ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು;
- 6 ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
- 7 ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
- 8 ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು.
- 9 ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- 10 ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು
- 11 ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
- 12 ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
- 13 ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ
- 14 ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.
- 15 ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- 16 ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.
- 17 ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
- 18 ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:
- 19 ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
- 20 ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
- 21 ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
- 22 ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
- 23 ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.
- 24 ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
- 25 ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು.
- 26 ಅದು ಮೊಳೆತು ಫಲಕೊಟ್ಟಾಗ ಹಣಜಿ ಸಹ ಕಾಣಿಸಿ ಕೊಂಡಿತು.
- 27 ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.
- 28 ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.
- 29 ಆದರೆ ಅವನು--ಬೇಡ, ನೀವು ಹಣಜಿಯನ್ನು ಕೂಡಿಸುವಾಗ ಅವುಗಳೊಂದಿಗೆ ಗೋದಿಯನ್ನೂ ಕಿತ್ತೀರಿ.
- 30 ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
- 31 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
- 32 ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
- 33 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
- 34 ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.
- 35 ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
- 36 ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
- 37 ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;
- 38 ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
- 39 ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
- 40 ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು.
- 41 ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
- 42 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- 43 ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- 44 ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
- 45 ಪರಲೋಕರಾಜ್ಯವು ಒಳ್ಳೇ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.
- 46 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಂಡನು.
- 47 ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
- 48 ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.
- 49 ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
- 50 ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
- 51 ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
- 52 ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
- 53 ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು.
- 54 ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
- 55 ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
- 56 ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.
- 57 ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.
- 58 ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
- 1 ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
- 2 ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ
- 3 ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ?
- 4 ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
- 5 ಆತನ ಶಿಷ್ಯರು ರೊಟ್ಟಿ ತಕ್ಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಿದ್ದರು.
- 6 ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.
- 7 ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು.
- 8 ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ?
- 9 ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?
- 10 ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?
- 11 ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
- 12 ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.
- 13 ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.
- 14 ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು.
- 15 ಆತನು ಅವರಿಗೆ--ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಿ ದನು.
- 16 ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
- 17 ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
- 18 ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- 19 ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.
- 20 ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
- 21 ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
- 22 ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
- 23 ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
- 24 ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
- 25 ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
- 26 ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- 27 ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.
- 28 ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.