|
|
1. {ಯೋಬನು ಮುಂದುವರಿಸಿದ ಮಾತು} PS ಯೋಬನು ಮಾತನ್ನು ಮುಂದುವರಿಸಿ ಹೀಗೆಂದನು:
|
1. Moreover H3254 Job H347 continued H5375 his parable H4912 , and said H559 ,
|
2. “ನನ್ನ ಜೀವಿತವು ಕೆಲವು ತಿಂಗಳುಗಳ ಮುಂಚೆ ಇದ್ದಂತೆ ಈಗಲೂ ಇದ್ದಿದ್ದರೆ ಎಷ್ಟೋ ಒಳ್ಳೆಯದಿತ್ತು. ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಾ ಪರಿಪಾಲಿಸುತ್ತಿದ್ದನು.
|
2. Oh that H4310 I were H5414 as in months H3391 past H6924 , as in the days H3117 when God H433 preserved H8104 me;
|
3. ಆ ದಿನಗಳಲ್ಲಿ ದೇವರ ದೀಪವು ನನ್ನ ಮೇಲೆ ಪ್ರಕಾಶಿಸುತ್ತಿದ್ದ ಕಾರಣ ನಾನು ಕಾರ್ಗತ್ತಲೆಯಲ್ಲೂ ಸಂಚರಿಸುತ್ತಿದ್ದೆನು.
|
3. When his candle H5216 shined H1984 upon H5921 my head H7218 , and when by his light H216 I walked H1980 through darkness H2822 ;
|
4. ಆ ದಿನಗಳು ನನ್ನ ಜೀವಿತದ ಸುಗ್ಗಿಕಾಲವಾಗಿದ್ದವು; ಆ ದಿನಗಳಲ್ಲಿ ದೇವರ ಸ್ನೇಹವು ನನ್ನೊಂದಿಗೂ ನನ್ನ ಮನೆಯವರೊಂದಿಗೂ ಇತ್ತು.
|
4. As H834 I was H1961 in the days H3117 of my youth H2779 , when the secret H5475 of God H433 was upon H5921 my tabernacle H168 ;
|
5. ಆ ದಿನಗಳಲ್ಲಿ ಸರ್ವಶಕ್ತನಾದ ದೇವರು ಇನ್ನೂ ನನ್ನೊಂದಿಗಿದ್ದನು; ನನ್ನ ಮಕ್ಕಳು ನನ್ನ ಸುತ್ತಲೂ ಇದ್ದರು.
|
5. When the Almighty H7706 was yet H5750 with H5978 me, when my children H5288 were about H5439 me;
|
6. ಆ ದಿನಗಳಲ್ಲಿ ನನ್ನ ಜೀವಿತವು ತುಂಬ ಚೆನ್ನಾಗಿತ್ತು. ನನ್ನ ಮಾರ್ಗಗಳು ಕೆನೆಯಿಂದ ತುಂಬಿರುವಂತೆಯೂ ಬಂಡೆಗಳು ನನಗಾಗಿ ಆಲೀವ್ ಎಣ್ಣೆಯ ನದಿಗಳನ್ನೇ ಹರಿಸುತ್ತಿರುವಂತೆಯೂ ನನ್ನ ಜೀವಿತವಿತ್ತು.
|
6. When I washed H7364 my steps H1978 with butter H2529 , and the rock H6697 poured me out H6694 H5978 rivers H6388 of oil H8081 ;
|
7. “ಆ ದಿನಗಳಲ್ಲಿ ನಾನು ನಗರದ ಹೆಬ್ಬಾಗಿಲಿನ ಬಳಿಗೆ ಹೋಗಿ, ಸಾರ್ವಜನಿಕ ಸಭಾಸ್ಥಳದಲ್ಲಿ ಪಟ್ಟಣದ ಹಿರಿಯರೊಂದಿಗೆ ಕುಳಿತುಕೊಳ್ಳುತ್ತಿದ್ದೆನು.
|
7. When I went out H3318 to the gate H8179 through H5921 the city H7176 , when I prepared H3559 my seat H4186 in the street H7339 !
|
8. ಅಲ್ಲಿದ್ದ ಜನರೆಲ್ಲರೂ ನನ್ನನ್ನು ಗೌರವಿಸುತ್ತಿದ್ದರು; ಯೌವನಸ್ಥರು ನನ್ನನ್ನು ಕಂಡು ಹಿಂದಕ್ಕೆ ಸರಿದು ದಾರಿಮಾಡಿಕೊಡುತ್ತಿದ್ದರು; ವೃದ್ಧರು ಗೌರವದಿಂದ ಎದ್ದುನಿಂತುಕೊಳ್ಳುತ್ತಿದ್ದರು.
|
8. The young men H5288 saw H7200 me , and hid themselves H2244 : and the aged H3453 arose H6965 , and stood up H5975 .
|
9. ಮಾತಾಡುತ್ತಿದ್ದ ಜನನಾಯಕರು ತಮ್ಮ ಬಾಯಿ ಮೇಲೆ ಕೈಯಿಟ್ಟುಕೊಂಡು ಮೌನವಾಗುತ್ತಿದ್ದರು.
|
9. The princes H8269 refrained H6113 talking H4405 , and laid H7760 their hand H3709 on their mouth H6310 .
|
10. ಪ್ರಮುಖನಾಯಕರುಗಳು ಸಹ ನಾಲಿಗೆಯು ಸಿಕ್ಕಿಕೊಂಡಂತೆ ತಮ್ಮ ಧ್ವನಿಯನ್ನು ಕಡಿಮೆಮಾಡುತ್ತಿದ್ದರು.
|
10. The nobles H5057 held H2244 their peace H6963 , and their tongue H3956 cleaved H1692 to the roof of their mouth H2441 .
|
11. ನನ್ನ ಮಾತನ್ನು ಕೇಳಿದವರೆಲ್ಲರೂ ನನ್ನನ್ನು ಪ್ರಶಂಸಿಸುತ್ತಿದ್ದರು; ನಾನು ಮಾಡಿದ್ದನ್ನು ಕಂಡವರೆಲ್ಲರೂ ನನ್ನನ್ನು ಹೊಗಳುತ್ತಿದ್ದರು.
|
11. When H3588 the ear H241 heard H8085 me , then it blessed H833 me ; and when the eye H5869 saw H7200 me , it gave witness H5749 to me:
|
12. ಯಾಕೆಂದರೆ ಬೇಡಿಕೊಂಡ ಬಡವರಿಗೆ ಸಹಾಯ ಮಾಡಿದೆನು; ಗತಿಯಿಲ್ಲದ ಅನಾಥರನ್ನು ರಕ್ಷಿಸಿದೆನು.
|
12. Because H3588 I delivered H4422 the poor H6041 that cried H7768 , and the fatherless H3490 , and him that had none H3808 to help H5826 him.
|
13. ಜನರು ತಮ್ಮ ಸಾವಿನ ಗಳಿಗೆಯಲ್ಲೂ ನನ್ನನ್ನು ಆಶೀರ್ವದಿಸಿದರು. ಕಷ್ಟದಲ್ಲಿದ್ದ ವಿಧವೆಯರಿಗೆ ನನ್ನಿಂದ ಆನಂದವಾಯಿತು.
|
13. The blessing H1293 of him that was ready to perish H6 came H935 upon H5921 me : and I caused the widow H490 's heart H3820 to sing for joy H7442 .
|
14. ನೀತಿಯೇ ನನ್ನ ಉಡುಪಾಗಿತ್ತು; ಅದೇ ನನ್ನ ನಿಲುವಂಗಿಯಾಗಿತ್ತು. ನ್ಯಾಯವು ನನಗೆ ನಿಲುವಂಗಿಯೂ ಪೇಟವಾಗಿಯೂ ಇತ್ತು.
|
14. I put on H3847 righteousness H6664 , and it clothed H3847 me : my judgment H4941 was as a robe H4598 and a diadem H6797 .
|
15. ನಾನು ಕುರುಡನಿಗೆ ಕಣ್ಣಾಗಿಯೂ ಕುಂಟನಿಗೆ ಕಾಲಾಗಿಯೂ ಇದ್ದೆನು.
|
15. I was H1961 eyes H5869 to the blind H5787 , and feet H7272 was I H589 to the lame H6455 .
|
16. ನಾನು ಬಡವರಿಗೆ ತಂದೆಯಂತಿದ್ದೆನು. ತೊಂದರೆಯಲ್ಲಿದ್ದ ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.
|
16. I H595 was a father H1 to the poor H34 : and the cause H7379 which I knew H3045 not H3808 I searched out H2713 .
|
17. ನಾನು ದುಷ್ಟರ ಕೋರೆಗಳನ್ನು ಮುರಿದು ಅವರ ಬಾಯೊಳಗಿಂದ ಬೇಟೆಗಳನ್ನು ಕಿತ್ತು ತರುತ್ತಿದ್ದೆನು.
|
17. And I broke H7665 the jaws H4973 of the wicked H5767 , and plucked H7993 the spoil H2964 out of his teeth H4480 H8127 .
|
18. “ನನ್ನ ಬಗ್ಗೆ ಆಲೋಚಿಸುತ್ತಾ, ‘ನನ್ನ ದಿನಗಳು ಮರಳಿನ ಕಣಗಳಷ್ಟು ಅಸಂಖ್ಯಾತವಾಗಿವೆ; ನಾನು ನನ್ನ ಸ್ವಂತ ಮನೆಯಲ್ಲಿ ಮರಣಹೊಂದುವೆನು.
|
18. Then I said H559 , I shall die H1478 in H5973 my nest H7064 , and I shall multiply H7235 my days H3117 as the sand H2344 .
|
19. ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುತ್ತವೆ; ನನ್ನ ಕೊಂಬೆಗಳು ಇಬ್ಬನಿಯಿಂದ ಹಸಿಯಾಗಿರುತ್ತವೆ;
|
19. My root H8328 was spread out H6605 by H413 the waters H4325 , and the dew H2919 lay all night H3885 upon my branch H7105 .
|
20. ಜನರು ನನ್ನನ್ನು ಹೊಗಳುತ್ತಲೇ ಇರುವರು; ಕೈಯಲ್ಲಿ ಹೊಸಬಿಲ್ಲು ಇರುವಂತೆ ನಾನು ಬಲಿಷ್ಠನಾಗಿದ್ದೇನೆ’ ಎಂದುಕೊಂಡೆನು.
|
20. My glory H3519 was fresh H2319 in H5978 me , and my bow H7198 was renewed H2498 in my hand H3027 .
|
21. “ಆ ದಿನಗಳಲ್ಲಿ ಜನರು ನನಗೆ ಕಿವಿಗೊಡುತ್ತಿದ್ದರು; ನನ್ನ ಆಲೋಚನೆಯನ್ನು ಕೇಳಲು ಮೌನದಿಂದ ಕಾದುಕೊಂಡಿರುತ್ತಿದ್ದರು.
|
21. Unto me men gave ear H8085 , and waited H3176 , and kept silence H1826 at H3926 my counsel H6098 .
|
22. ನನ್ನ ಮಾತುಗಳು ಪರಿಪೂರ್ಣವಾಗಿದ್ದ ಕಾರಣ ಅದಕ್ಕೆ ಬೇರೇನೂ ಸೇರಿಸಲು ಅವರಿಗೆ ಸಾಧ್ಯವಿರಲಿಲ್ಲ. ನನ್ನ ಮಾತುಗಳು ಅವರ ಕಿವಿಗಳಿಗೆ ಕೋಮಲವಾಗಿದ್ದವು.
|
22. After H310 my words H1697 they spoke not again H8138 H3808 and my speech H4405 dropped H5197 upon H5921 them.
|
23. ಮಳೆಗಾಗಿಯೋ ಎಂಬಂತೆ ಅವರು ನನ್ನ ಮಾತುಗಳಿಗಾಗಿ ಎದುರುನೋಡುತ್ತಿದ್ದರು. ವಸಂತ ಕಾಲದಲ್ಲಿ ಬೀಳುವ ಮಳೆಯ ನೀರನ್ನೋ ಎಂಬಂತೆ ಅವರು ನನ್ನ ಮಾತುಗಳನ್ನು ಕುಡಿಯುತ್ತಿದ್ದರು.
|
23. And they waited H3176 for me as for the rain H4306 ; and they opened H6473 their mouth H6310 wide as for the latter rain H4456 .
|
24. ನಾನು ಅವರನ್ನು ಕಂಡು ಮುಗುಳ್ನಗೆ ಬೀರಿದಾಗ ಅವರಿಗೆ ನಂಬುವುದಕ್ಕೇ ಆಗುತ್ತಿರಲಿಲ್ಲ. ನನ್ನ ಸಂತೋಷದ ಮುಖವು ಅವರನ್ನು ಪ್ರೋತ್ಸಾಹಗೊಳಿಸಿತು.
|
24. If I laughed H7832 on H413 them , they believed H539 it not H3808 ; and the light H216 of my countenance H6440 they cast not down H5307 H3808 .
|
25. ನಾನು ನಾಯಕನಾಗಿದ್ದರೂ ಅವರೊಂದಿಗೇ ಇರುತ್ತಿದ್ದೆನು; ಪಾಳೆಯದಲ್ಲಿ ಸೈನ್ಯಗಳೊಂದಿಗಿರುವ ರಾಜನಂತೆ ನಾನು ದುಃಖಿತರನ್ನು ಆದರಿಸುತ್ತಿದ್ದೆನು. PE
|
25. I chose out H977 their way H1870 , and sat H3427 chief H7218 , and dwelt H7931 as a king H4428 in the army H1416 , as H834 one that comforteth H5162 the mourners H57 .
|