Bible Language

8
:
13

1. {#1ವಿಗ್ರಹಗಳಿಗೆ ಅರ್ಪಿತವಾದ ಆಹಾರದ ಬಗ್ಗೆ ಚರ್ಚೆ } PSವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.
1. Now G1161 as touching G4012 things offered unto idols G1494 , we know G1492 that G3754 we all G3956 have G2192 knowledge G1108 . Knowledge G1108 puffeth up G5448 , but G1161 charity G26 edifieth G3618 .
2. ಇಂಥಿಂಥದ್ದನ್ನು ತಿಳಿದುಕೊಂಡಿದ್ದೇನೆಂದು ಭಾವಿಸುವವನು ತಾನು ತಿಳಿದುಕೊಳ್ಳಬೇಕಾದ ರೀತಿಯಲ್ಲಿ ಇನ್ನೂ ತಿಳಿದುಕೊಂಡಿಲ್ಲ.
2. And G1161 if G1487 any man G5100 think G1380 that he knoweth G1492 any thing G5100 , he knoweth G1097 nothing G3762 yet G3764 as G2531 he ought G1163 to know G1097 .
3. ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನು ದೇವರು ತಿಳಿದುಕೊಂಡಿದ್ದಾನೆ. PE
3. But G1161 if G1487 any man G5100 love G25 God G2316 , the same G3778 is known G1097 of G5259 him G846 .
4. PSಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.
4. As concerning G4012 therefore G3767 the G3588 eating G1035 of those things that are offered in sacrifice unto idols G1494 , we know G1492 that G3754 an idol G1497 is nothing G3762 in G1722 the world G2889 , and G2532 that G3754 there is none G3762 other G2087 God G2316 but G1508 one G1520 .
5. ಆಕಾಶದಲ್ಲಾಗಲಿ ಭೂಮಿಯ ಮೇಲಾಗಲಿ ದೇವರುಗಳೆಂದು ಕರೆಯಲ್ಪಡುವ ವಸ್ತುಗಳಿದ್ದರೆ ಅವು ನಿಜವಾಗಿಯೂ ನಮಗೆ ಮುಖ್ಯವಲ್ಲ. (ಅನೇಕ ವಸ್ತುಗಳನ್ನು ಜನರು “ದೇವರು”ಗಳೆಂತಲೂ “ಪ್ರಭು”ಗಳೆಂತಲೂ ಕರೆಯುತ್ತಾರೆ.)
5. For G1063 though G2532 G1512 there be G1526 that are called G3004 gods G2316 , whether G1535 in G1722 heaven G3772 or G1535 in G1909 earth G1093 , ( as G5618 there be G1526 gods G2316 many G4183 , and G2532 lords G2962 many G4183 ,)
6. ನಮಗಾದರೋ ಒಬ್ಬನೇ ಒಬ್ಬ ದೇವರಿದ್ದಾನೆ. ಆತನು ನಮ್ಮ ತಂದೆ. ಸಮಸ್ತವನ್ನು ಆತನೇ ಸೃಷ್ಟಿ ಮಾಡಿದನು. ನಾವು ಆತನಿಗೋಸ್ಕರ ಜೀವಿಸುತ್ತೇವೆ. ಒಬ್ಬನೇ ಒಬ್ಬ ಪ್ರಭುವಿದ್ದಾನೆ. ಆತನೇ ಯೇಸು ಕ್ರಿಸ್ತನು. ಆತನ ಮೂಲಕವಾಗಿ ಸಮಸ್ತವು ಉಂಟಾಯಿತು. ಆತನ ಮೂಲಕವಾಗಿ ನಾವು ಜೀವವನ್ನು ಹೊಂದಿದ್ದೇವೆ. PE
6. But G235 to us G2254 there is but one G1520 God G2316 , the G3588 Father G3962 , of G1537 whom G3739 are all things G3956 , and G2532 we G2249 in G1519 him G846 ; and G2532 one G1520 Lord G2962 Jesus G2424 Christ G5547 , by G1223 whom G3739 are all things G3956 , and G2532 we G2249 by G1223 him G846 .
7. PSಆದರೆ ಎಲ್ಲಾ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಕೆಲವು ಜನರು ಇಂದಿನವರೆಗೂ ವಿಗ್ರಹಗಳನ್ನು ಆರಾಧಿಸುವ ರೂಢಿಯಲ್ಲಿದ್ದಾರೆ. ಹೀಗಿರಲಾಗಿ, ಜನರು ಮಾಂಸವನ್ನು ತಿನ್ನುವಾಗ ಅದು ವಿಗ್ರಹಕ್ಕೆ ಅರ್ಪಿತವಾದದ್ದೆಂದು ಆಲೋಚಿಸುತ್ತಾರೆ. ಆದರೆ ಮಾಂಸವನ್ನು ತಿನ್ನುವುದು ತಪ್ಪಲ್ಲ ಎಂಬ ದೃಢನಂಬಿಕೆ ಅವರಲ್ಲಿಲ್ಲ. ಆದ್ದರಿಂದ, ಅವರು ಮಾಂಸವನ್ನು ತಿನ್ನುವಾಗ ತಮ್ಮನ್ನು ದೋಷಿಗಳೆಂದು ಭಾವಿಸಿಕೊಳ್ಳುತ್ತಾರೆ.
7. Howbeit G235 there is not G3756 in G1722 every man G3956 that knowledge G1108 : for G1161 some G5100 with conscience G4893 of the G3588 idol G1497 unto G2193 this hour G737 eat G2068 it as G5613 a thing offered unto an idol G1494 ; and G2532 their G848 conscience G4893 being G5607 weak G772 is defiled G3435 .
8. ಆದರೆ ಆಹಾರವು ನಮ್ಮನ್ನು ದೇವರ ಸಮೀಪಕ್ಕೆ ತರಲಾರದು. ನಾವು ಮಾಂಸವನ್ನು ತಿನ್ನದಿದ್ದರೆ, ನಮ್ಮ ಮೇಲೆ ದೇವರಿಗಿರುವ ಮೆಚ್ಚುಗೆಯು ಕಡಿಮೆಯೇನೂ ಆಗುವುದಿಲ್ಲ. ಅದೇ ರೀತಿ, ಮಾಂಸವನ್ನು ತಿಂದರೆ, ನಮ್ಮ ಮೇಲೆ ದೇವರಿಗಿರುವ ಮೆಚ್ಚುಗೆಯು ಹೆಚ್ಚೇನೂ ಆಗುವುದಿಲ್ಲ. PE
8. But G1161 meat G1033 commendeth G3936 us G2248 not G3756 to God G2316 : for G1063 neither G3777 , if G1437 we eat G5315 , are we the better G4052 ; neither G3777 , if G1437 we eat G5315 not G3361 , are we the worse G5302 .
9. PSಆದರೆ ನಿಮ್ಮ ಸ್ವತಂತ್ರದ ಬಗ್ಗೆ ಎಚ್ಚರಿಕೆಯಿಂದಿರಿ. ನಂಬಿಕೆಯಲ್ಲಿ ಬಲಹೀನರಾಗಿರುವ ಜನರನ್ನು ನಿಮ್ಮ ಸ್ವಾತಂತ್ರ್ಯವು ಪಾಪಕ್ಕೆ ಬೀಳಿಸುವ ಸಾಧ್ಯತೆಯಿದೆ.
9. But G1161 take heed G991 lest by any means G3381 this G3778 liberty G1849 of yours G5216 become G1096 a stumblingblock G4348 to them that are weak G770 .
10. ನಿಮಗೆ ತಿಳುವಳಿಕೆ ಇರುವುದರಿಂದ ನೀವು ವಿಗ್ರಹದ ಗುಡಿಯೊಂದರಲ್ಲಿ ಸಂಕೋಚವಿಲ್ಲದೆ ಊಟ ಮಾಡಬಹುದು. ನೀವು ಅಲ್ಲಿ ಊಟ ಮಾಡುವುದನ್ನು ನಂಬಿಕೆಯಲ್ಲಿ ಬಲಹೀನನಾದ ವ್ಯಕ್ತಿಯೊಬ್ಬನು ನೋಡಿ, ವಿಗ್ರಹಗಳಿಗೆ ಅರ್ಪಿತವಾದ ಮಾಂಸವನ್ನು ತಿನ್ನಲು ಪ್ರೋತ್ಸಾಹಗೊಳ್ಳಬಹುದು. ಆದರೆ ಅದನ್ನು ತಿನ್ನಕೊಡದೆಂಬ ಭಾವನೆ ಅವನಲ್ಲಿ ಆಳವಾಗಿ ಬೇರೂರಿದೆ.
10. For G1063 if G1437 any man G5100 see G1492 thee G4571 which hast G2192 knowledge G1108 sit at meat G2621 in G1722 the idol's temple G1493 , shall not G3780 the G3588 conscience G4893 of him G846 which is G5607 weak G772 be emboldened G3618 to eat G2068 those things which are offered to idols G1494 ;
11. ಹೀಗಿರಲಾಗಿ, ಬಲಹೀನ ಸಹೋದರನು ನಿಮ್ಮ ತಿಳುವಳಿಕೆಯ ದೆಸೆಯಿಂದ ಹಾಳಾದನು. ಕ್ರಿಸ್ತನು ಸಹೋದರನಿಗೋಸ್ಕರವಾಗಿ ತನ್ನ ಪ್ರಾಣವನ್ನೇ ಕೊಟ್ಟಿದ್ದಾನೆ.
11. And G2532 through G1909 thy G4674 knowledge G1108 shall the G3588 weak G770 brother G80 perish G622 , for G1223 whom G3739 Christ G5547 died G599 ?
12. ಹೀಗೆ ನಿಮ್ಮ ಸಹೋದರ ಸಹೋದರಿಯರಿಗೆ ವಿರೋಧವಾಗಿ ಪಾಪ ಮಾಡುವಾಗ ಮತ್ತು ಅವರು ತಪ್ಪೆಂದು ಭಾವಿಸುವ ಕಾರ್ಯಗಳನ್ನು ಮಾಡುವಂತೆ ಅವರನ್ನು ಪ್ರೋತ್ಸಾಹಿಸಿ ಅವರಿಗೆ ಕೇಡನ್ನು ಉಂಟುಮಾಡುವಾಗ ನೀವು ಕ್ರಿಸ್ತನಿಗೆ ವಿರೋಧವಾಗಿಯೂ ಪಾಪ ಮಾಡುವವರಾಗಿದ್ದೀರಿ.
12. But G1161 when ye sin G264 so G3779 against G1519 the G3588 brethren G80 , and G2532 wound G5180 their G848 weak G770 conscience G4893 , ye sin G264 against G1519 Christ G5547 .
13. ಹೀಗಿರಲಾಗಿ, ನಾನು ತಿನ್ನುವ ಆಹಾರವು ನನ್ನ ಸಹೋದರನನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ. ನನ್ನ ಸಹೋದರನ ಪಾಪಕ್ಕೆ ನಾನು ಕಾರಣನಾಗಬಾರದೆಂದು ನಾನು ಮಾಂಸ ತಿನ್ನುವುದನ್ನು ನಿಲ್ಲಿಸುತ್ತೇನೆ. PE
13. Wherefore G1355 , if G1487 meat G1033 make my brother to offend G4624 G3450 G80 , I will eat G5315 no G3364 flesh G2907 while the world standeth G1519 G3588 G165 , lest G3363 I make my brother to offend G4624 G3450 G80 .