Bible Language

Jeremiah 44 (KNV) Kannadam Old BSI Version

1 ಐಗುಪ್ತದ ಮಿಗ್ದೋಲ್‌ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್‌ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--
2 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ನೋಡಿದ್ದೀರಿ.
3 ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ತಾವೂ ತಮ್ಮ ತಂದೆಗಳೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ ಧೂಪಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಹೊತ್ತು ಹಾಳಾಗಿವೆ; ಅವುಗಳಲ್ಲಿ ವಾಸಮಾಡುವವರು ಯಾರೂ ಇಲ್ಲ.
4 ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.
5 ಆದರೆ ಅವರು ಕೇಳಲಿಲ್ಲ; ತಮ್ಮ ಕೆಟ್ಟತನದಿಂದ ತಿರುಗದೆಯೂ, ಬೇರೆ ದೇವರುಗಳಿಗೆ ಧೂಪಸುಡು ವದನ್ನು ಬಿಡದೆಯೂ ಇದ್ದರು; ನನ್ನ ಮಾತಿಗೆ ಕಿವಿ ಗೊಡಲಿಲ್ಲ.