Bible Language Cross References for the verse Isaiah 30:0 in KNV
- 1 ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು.
- 2 ನಾನು ನಂಬಿಗಸ್ತರಾದ ಯಾಜಕನಾದ ಊರೀಯನನ್ನು ಯೆಬೆ ರೆಕ್ಯನ ಮಗನಾದ ಜೆಕರ್ಯನನ್ನು ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.
- 3 ಅನಂತರ ನಾನು ಪ್ರವಾದಿನಿ ಯನ್ನು ಕೂಡಲು ಆಕೆಯು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ಆಗ ಕರ್ತನು ನನಗೆ--ಅವನಿಗೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು ಎಂದು ಹೇಳಿದನು.
- 4 ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
- 5 ಕರ್ತನು ಮತ್ತೊಂದಾವರ್ತಿ ನನಗೆ--
- 6 ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ
- 7 ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ
- 8 ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
- 9 ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.
- 10 ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- 11 ನಾನು ಈ ಜನರ ಮಾರ್ಗದಲ್ಲಿ ನಡೆಯದ ಹಾಗೆ ಕರ್ತನು ಬಲವಾದ ಕೈಯಿಂದ ನನಗೆ--
- 12 ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.
- 13 ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.
- 14 ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
- 15 ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
- 16 ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.
- 17 ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
- 18 ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
- 19 ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
- 20 ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
- 21 ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.
- 22 ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು
- 1 ನನ್ನ ಕಾವಲಲ್ಲಿ ನಿಂತು ಗೋಪುರದ ಮೇಲೆ ನೆಲೆಯಾಗಿದ್ದು ಆತನು ನನಗೆ ಏನು ಹೇಳುವನೋ, ನನ್ನ ತರ್ಕದ ವಿಷಯ ಏನು ಉತ್ತರ ಕೊಡಬೇಕೋ ನೋಡುವದಕ್ಕೆ ಕಾದುಕೊಂಡಿರುವೆನು.
- 2 ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು.
- 3 ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- 4 ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.
- 5 ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
- 6 ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ?
- 7 ನಿನ್ನನ್ನು ಕಚ್ಚುವವರು ಕ್ಷಣಮಾತ್ರದಲ್ಲಿ ಏಳರೋ? ನಿನ್ನನ್ನು ಪೀಡಿಸುವವರು ಎಚ್ಚರವಾಗರೋ? ಆಗ ನೀನು ಅವರಿಗೆ ಸುಲಿಗೆ ಯಾಗುವಿ.
- 8 ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.
- 9 ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
- 10 ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ.
- 11 ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.
- 12 ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!
- 13 ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
- 14 ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.
- 15 ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ!
- 16 ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು.
- 17 ಲೆಬನೋನಿನ ಹಿಂಸೆಯು ನಿನ್ನನ್ನು ಮುಚ್ಚುವದು; ಮೃಗಗಳ ಸೂರೆ ನಿನ್ನನ್ನು ಹೆದರಿಸುವದು; ಮನುಷ್ಯರ ರಕ್ತಕ್ಕಾಗಿ, ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಹಿಂಸೆಯು ನಿಮಿತ್ತವೇ.
- 18 ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
- 19 ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.
- 20 ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.