Bible Language Cross References for the verse Hosea 9:0 in KNV
- 1 ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2 ಮನುಷ್ಯಪುತ್ರನೇ, ತೂರ್, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ
- 3 ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.
- 4 ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು.
- 5 ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು,
- 6 ಇದಲ್ಲದೆ ಬಯಲು ಭೂಮಿಯಲ್ಲಿ ರುವ ಅದರ ಕುಮಾರ್ತೆಯರು ಖಡ್ಗದಿಂದ ಕೊಲ್ಲಲ್ಪಡು ವರು, ಆಗ ನಾನೇ ಕರ್ತನೆಂದು ಎಲ್ಲರಿಗೂ ತಿಳಿಯುವದು.
- 7 ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.
- 8 ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು;
- 9 ತನ್ನ ಯುದ್ಧಯಂತ್ರಗಳನ್ನು ನಿನ್ನ ಗೋಡೆಗಳಿಗೆ ವಿರೋಧ ವಾಗಿ ತಾಕಿಸುವೆನು ನಿನ್ನ ಗೋಪುರಗಳನ್ನು ತನ್ನ ಕೊಡಲಿಗಳಿಂದ ಒಡೆದು ಬಿಡುವನು.
- 10 ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು.
- 11 ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ಜನರನ್ನು ಕತ್ತಿಯಿಂದ ಕೊಲ್ಲುವನು; ಬಲವಾದ ಕೋಟೆಗಳು ನೆಲಕ್ಕೆ ಬೀಳುವವು.
- 12 ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ಸರಕುಗಳನ್ನು ಕೊಳ್ಳೇ ಹೊಡೆದು, ಗೋಡೆಗಳನ್ನು ಒಡೆದು, ರಮ್ಯವಾದ ಮನೆಗಳನ್ನು ಕೆಡವಿ, ಕಲ್ಲುಗಳನ್ನೂ ಮರಗಳನ್ನೂ ದೂಳನ್ನೂ ನೀರಿನಲ್ಲಿ ಹಾಕುವರು.
- 13 ಆಗ ನಿನ್ನ ಹಾಡು ಗಳ ಶಬ್ದವನ್ನು ನಿಲ್ಲಿಸುವೆನು, ಇನ್ನು ನಿನ್ನ ಕಿನ್ನರಿಗಳ ಧ್ವನಿ ಕೇಳಲ್ಪಡುವದಿಲ್ಲ.
- 14 ನಿನ್ನನ್ನು ಬಂಡೆಯ ತುದಿ ಯಂತೆ ಮಾಡುವೆನು. ನೀನು ಅಲ್ಲಿ ಬಲೆ ಹಾಸುವ ಸ್ಥಳವಾಗುವಿ. ಇನ್ನು ನೀನು ಕಟ್ಟಲ್ಪಡುವದಿಲ್ಲ; ಯಾಕಂ ದರೆ ಕರ್ತನಾದ ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- 15 ದೇವರಾದ ಕರ್ತನು ತೂರಿಗೆ ಹೀಗೆ ಹೇಳು ತ್ತಾನೆ--ನಿಮ್ಮನ್ನು ಬೀಳುವಿಕೆಯ ಶಬ್ದದಿಂದಲೂ ಗಾಯ ಪಟ್ಟವರು ಕೂಗುವಾಗಲೂ ನಿನ್ನ ಮಧ್ಯದಲ್ಲಿ ಕೊಲೆ ಯಾಗುವಾಗಲೂ ದ್ವೀಪಗಳು ನಡುಗುವದಿಲ್ಲವೇ?
- 16 ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು.
- 17 ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ?
- 18 ಈಗ ನೀನು ಬೀಳುವ ದಿವಸದಲ್ಲಿ ದ್ವೀಪಗಳು ನಡುಗುವವು ಹೌದು, ನೀನು ಹೋಗಿಬಿಡುವದರಿಂದ ಸಮುದ್ರದಲ್ಲಿರುವ ದ್ವೀಪಗಳು ಗಾಬರಿಯಾಗುವವು.
- 19 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು.
- 20 ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವ ಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವ ಲೋಕದಲ್ಲಿ ನೆಲೆಗೊಳಿಸದ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರ ಸಹವಾಸಕ್ಕೆ ಸೇರಿಸುವೆನು.
- 21 ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
- 1 ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 2 ಮನುಷ್ಯಪುತ್ರನೇ, ಈಗ ತೂರಿನ ಬಗ್ಗೆ ನೀನು ಗೋಳಾಟವನ್ನೆತ್ತು;
- 3 ತೂರಿಗೆ ಹೇಳು--ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳಿಗೆ ಜನರ ವ್ಯಾಪಾರವನ್ನು ನಡಿಸುವ ವಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಓ ತೂರೇ, ನಾನು ಪೂರ್ಣ ಸೌಂದರ್ಯವಂತಳೆಂದು ನೀನು ಹೇಳಿದ್ದೀ.
- 4 ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ, ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯ ವನ್ನು ಸಂಪೂರ್ಣಪಡಿಸಿದ್ದಾರೆ.
- 5 ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿ ದ್ದಾರೆ, ನಿನಗೆ ಪಠಸ್ತಂಭಗಳನ್ನು ಮಾಡುವದಕ್ಕೆ ಲೆಬ ನೋನಿನಿಂದ ದೇವದಾರುಗಳನ್ನು ತಂದಿದ್ದಾರೆ.
- 6 ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ.
- 7 ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು.
- 8 ಚೀದೋ ನಿನ ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವ ವರಾಗಿದ್ದಾರೆ; ತೂರೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.
- 9 ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು.
- 10 ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.
- 11 ಅರ್ವಾದಿನವರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಮೇಲೆ ಇದ್ದರು; ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತ ಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪೂರ್ತಿಗೊಳಿಸಿದರು.
- 12 ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು.
- 13 ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.
- 14 ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು.
- 15 ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.
- 16 ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
- 17 ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.
- 18 ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ
- 19 ದಾನ್ ಮತ್ತು ಯಾವಾನ್ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು.
- 20 ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.
- 21 ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
- 22 ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
- 23 ಹಾರಾನ್, ಕನ್ನೆ, ಏದೆನ್, ಶೆಬ, ಅಶ್ಶೂರ್ ಮತ್ತು ಕಿಲ್ಮದ್ವರು ನಿನ್ನ ವ್ಯಾಪಾರಿಗಳಾಗಿದ್ದರು.
- 24 ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು.
- 25 ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಯಲ್ಲಿ ಸರಕುಗಳನ್ನು ತರುತ್ತಿದ್ದವು; ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದಿ.
- 26 ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.
- 27 ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು.
- 28 ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು.
- 29 ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು,
- 30 ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ;
- 31 ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.
- 32 ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು?
- 33 ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ.
- 34 ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು.
- 35 ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.
- 36 ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
- 1 ಕರ್ತನ ವಾಕ್ಯವು ಮತ್ತೆ ಬಂದು ನನಗೆ ಹೇಳಿದ್ದೇನಂದರೆ--
- 2 ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
- 3 ಇಗೋ, ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆ; ರಹಸ್ಯವಾದದ್ದು ಏನಿದ್ದರೂ ನಿನಗೆ ಮರೆಯಾಗಿರುವದಿಲ್ಲ.
- 4 ನಿನ್ನ ಜ್ಞಾನ ದಿಂದಲೂ ವಿವೇಕದಿಂದಲೂ ನಿನಗೆ ದ್ರವ್ಯವನ್ನುಂಟು ಮಾಡಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ.
- 5 ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ;
- 6 ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡ ದ್ದರಿಂದ;
- 7 ಇಗೋ, ನಾನು ನಿನ್ನ ಮೇಲೆ ಭಯಂಕರ ವಾದ ಜನಾಂಗಗಳ ಅಪರಿಚಿತರನ್ನು ತರುತ್ತೇನೆ; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.
- 8 ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು, ಸಮುದ್ರಗಳ ಮಧ್ಯದಲ್ಲಿ ಹತವಾದವರ ಹಾಗೆ ನೀನು ಸಾಯುವೆ.
- 9 ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ;
- 10 ನೀನು ಅನ್ಯರ ಕೈಯಿಂದ ಸುನ್ನತಿ ಹೀನರ ಮರಣಕ್ಕೆ ಗುರಿ ಯಾಗುವಿ ನಾನೇ ಇದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.
- 11 ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ,
- 12 ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.
- 13 ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
- 14 ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ.
- 15 ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.
- 16 ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
- 17 ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿ ಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಜ್ಞಾನವನ್ನು ಕೆಡಿಸಿಕೊಂಡಿ; ನಾನು ನಿನ್ನನ್ನು ನೆಲಕ್ಕೆ ಹಾಕುವೆನು. ಅರಸನ ಮುಂದೆ ಅವರು ನೋಡುವ ಹಾಗೆ ನಿನ್ನನ್ನು ಇಡುತ್ತೇನೆ;
- 18 ನಿನ್ನ ಅಪಾರವಾದ ಅಪರಾಧಗ ಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನು ಬರಮಾಡಿದೆನು, ಅದು ನಿನ್ನನ್ನು ನುಂಗಿತು; ನೋಡು ವವರೆಲ್ಲರ ಮುಂದೆ ನಿನ್ನನ್ನು ಬೂದಿ ಮಾಡುವೆನು;
- 19 ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ವಿಸ್ಮಯಗೊಳ್ಳುವರು; ನೀನು ಸಂಪೂರ್ಣ ಭೀತಿಗೊಳ ಗಾಗಿ ಇನ್ನೆಂದಿಗೂ ಇಲ್ಲದಂತಾಗುವಿ.
- 20 ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇ ನಂದರೆ,
- 21 ಮನುಷ್ಯಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
- 22 ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.
- 23 ಅದರಲ್ಲಿ ವ್ಯಾಧಿಯನ್ನೂ ಬೀದಿಗಳಲ್ಲಿ ರಕ್ತವನ್ನು ಕಳುಹಿಸುವೆನು; ಸುತ್ತಲೂ ಅದಕ್ಕೆ ವಿರುದ್ಧವಾಗಿ ಕತ್ತಿಯಿಂದ ಹತವಾದವರು ಅದರಲ್ಲಿ ಬೀಳುವರು; ಆಗ ನಾನೇ ಕರ್ತನೆಂದು ತಿಳಿಯುವರು.
- 24 ಇಸ್ರಾಯೇಲ್ ವಂಶದವರಿಗೆ ಚುಚ್ಚುವ ದತ್ತೂರಿ ಸುತ್ತಲೂ ಹೀನೈಸುವ ನೋಯಿಸುವ ಮುಳ್ಳು ಇನ್ನಿರದು; ನಾನೇ ದೇವರಾದ ಕರ್ತನೆಂದು ಅವರಿಗೆ ತಿಳಿಯುವದು.
- 25 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲ್ಯರ ಮನೆತನದವರನ್ನು ಚದರಿಹೋದ ಜನಾಂಗದಿಂದ ಒಂದುಗೂಡಿಸಿ ಅನ್ಯಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧವಾದ ಮೇಲೆ ಇಸ್ರಾ ಯೇಲ್ಯರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ದೇಶದಲ್ಲಿಯೇ ವಾಸಿಸುವರು;
- 26 ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.