Bible Versions
Bible Books

Isaiah 56 (ERVKN) Easy to Read Version - Kannadam

1 ಯೆಹೋವನು ಹೇಳುವದೇನೆಂದರೆ: “ಎಲ್ಲರಿಗೂ ನ್ಯಾಯವಂತರಾಗಿರಿ; ಎಲ್ಲರಿಗೂ ಒಳ್ಳೆಯವರಾಗಿರಿ; ಯಾಕೆಂದರೆ ನನ್ನ ರಕ್ಷಣೆಯು ಬೇಗನೆ ಬರಲಿದೆ; ಇಡೀ ಲೋಕಕ್ಕೆಲ್ಲಾ ನನ್ನ ನೀತಿಯು ಬೇಗನೆ ವ್ಯಕ್ತವಾಗುವುದು.
2 ಸಬ್ಬತ್ತಿನ ವಿಷಯದಲ್ಲಿ ದೇವರ ಕಟ್ಟಳೆಗಳನ್ನು ಅನುಸರಿಸುವವರು ಆಶೀರ್ವಾದ ಹೊಂದುವರು. ದುಷ್ಟಕಾರ್ಯಗಳನ್ನು ಮಾಡದವನು ಸಂತೋಷದಿಂದಿರುವನು.
3 ಯೆಹೂದ್ಯರಲ್ಲದ ಜನರು ಯೆಹೋವನ ಬಳಿಗೆ ಬರುವರು. ಅವರು, “ಯೆಹೋವನು ನಮ್ಮನ್ನು ತನ್ನ ಜನರೊಂದಿಗೆ ಸ್ವೀಕರಿಸುವದಿಲ್ಲ” ಎಂದು ಹೇಳಬಾರದು. ಕಂಚುಕಿಯು, “ನಾನು ಕೆಲಸಕ್ಕೆ ಬಾರದ ಒಣಗಿದ ಮರ.” ಎಂದು ಹೇಳಬಾರದು.
4 This verse may not be a part of this translation
5 This verse may not be a part of this translation
6 “ಅನ್ಯದೇಶದವರಲ್ಲಿ ಕೆಲವರು ಯೆಹೋವನನ್ನು ಅನುಸರಿಸುವರು. ಆತನನ್ನು ಸೇವಿಸಿ ಆತನ ನಾಮವನ್ನು ಪ್ರೀತಿಸುವರು. ಅವರು ಯೆಹೋವನ ಸೇವಕರಾಗುವುದಕ್ಕಾಗಿ ಆತನೊಂದಿಗೆ ಸೇರಿಕೊಳ್ಳುವರು. ಸಬ್ಬತ್‌ದಿವಸವನ್ನು ಆರಾಧನೆ ಮಾಡುವ ವಿಶೇಷ ದಿವಸವೆಂದು ನೆನಸಿ ಒಡಂಬಡಿಕೆಯನ್ನು ಪರಿಪಾಲಿಸುವರು.
7 ನಾನು ಅವರನ್ನು ನನ್ನ ಪವಿತ್ರಪರ್ವತಕ್ಕೆ ತರುವೆನು: ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಸಂತೋಷಪಡಿಸುವೆನು. ಅವರು ಅರ್ಪಿಸುವ ಸರ್ವಾಂಗಹೋಮಗಳನ್ನೂ ಯಜ್ಞಗಳನ್ನೂ ನಾನು ಮೆಚ್ಚಿಕೊಳ್ಳುವೆನು. ಯಾಕೆಂದರೆ ನನ್ನ ಆಲಯವು ಎಲ್ಲಾ ಜನಾಂಗದವರಿಗೆ ಪ್ರಾರ್ಥನಾಲಯವೆಂದು ಕರೆಯಲ್ಪಡುವದು.”
8 ಇದು ನನ್ನ ಒಡೆಯನಾದ ಯೆಹೋವನ ಮಾತುಗಳು. ಇಸ್ರೇಲ್ ಜನರು ತಮ್ಮ ದೇಶದಿಂದ ಹೊರಗೆ ಹಾಕಲ್ಪಟ್ಟರು. ಆದರೆ ಯೆಹೋವನು ಅವರನ್ನು ಮತ್ತೆ ಬರಮಾಡುತ್ತಾನೆ. ಆತನು, “ಈ ಜನರನ್ನು ನಾನು ಮತ್ತೆ ಒಟ್ಟುಗೂಡಿಸುತ್ತೇನೆ” ಎಂದು ಹೇಳುತ್ತಾನೆ.
9 ಕಾಡುಗಳಲ್ಲಿಯೂ ಹೊಲಗಳಲ್ಲಿಯೂ ಇರುವ ಪ್ರಾಣಿಗಳೇ, ಬಂದು ತಿನ್ನಿರಿ!
10 ಕಾವಲುಗಾರರೆಲ್ಲಾ ಕುರುಡರಾಗಿದ್ದಾರೆ. ತಾವು ಮಾಡುತ್ತಿರುವುದು ಅವರಿಗೆ ತಿಳಿಯದು. ಅವರು ಬೊಗಳದ ನಾಯಿಗಳಂತಿರುವರು. ಅವುಗಳು ನೆಲದ ಮೇಲೆ ಬಿದ್ದುಕೊಂಡು ಮಲಗುವವು. ಅವುಗಳಿಗೆ ಮಲಗುವುದೆಂದರೆ ತುಂಬಾ ಪ್ರೀತಿ.
11 ಅವರು ಹಸಿದ ನಾಯಿಗಳಂತಿದ್ದಾರೆ. ಅವರು ಎಂದಿಗೂ ತೃಪ್ತಿ ಹೊಂದುವವರಲ್ಲ. ಕುರುಬರಿಗೆ ತಾವು ಮಾಡುವುದೇ ತಿಳಿಯದು. ಅವರು ತಮ್ಮ ಕುರಿಗಳ ಹಾಗೆ ದಾರಿತಪ್ಪಿದ್ದಾರೆ. ಅವರೆಲ್ಲಾ ಅತ್ಯಾಶೆಯುಳ್ಳವರು; ತಮ್ಮನ್ನು ತೃಪ್ತಿಪಡಿಸುವದೇ ಅವರ ಕೆಲಸ.
12 ಅವರು ಬಂದು, “ನಾನು ಸ್ವಲ್ಪ ದ್ರಾಕ್ಷಾರಸ ಕುಡಿಯುತ್ತೇನೆ. ಅಥವಾ ನಾನು ಸ್ವಲ್ಪ ಮದ್ಯವನ್ನು ಕುಡಿಯುತ್ತೇನೆ. ನಾನು ನಾಳೆಯೂ ಹೀಗೆ ಮಾಡುವೆನು. ನಾನು ಇನ್ನೂ ಹೆಚ್ಚಾಗಿ ಕುಡಿಯುವೆನು” ಎಂದು ಹೇಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×