Bible Versions
Bible Books

Psalms 127 (ERVKN) Easy to Read Version - Kannadam

1 ರಚನೆಗಾರ : ಸೊಲೋಮೋನ. ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ. ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ.
2 ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. ಯಾಕಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.
3 ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ.
4 ಯೌವನಸ್ಥನ ಗಂಡುಮಕ್ಕಳು ಸೈನಿಕನ ಬತ್ತಳಿಕೆಯಲ್ಲಿರುವ ಬಾಣಗಳಂತಿದ್ದಾರೆ.
5 ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×