Bible Versions
Bible Books

Psalms 129 (ERVKN) Easy to Read Version - Kannadam

1 “ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು” ಇಸ್ರೇಲೇ, ಶತ್ರುಗಳ ಬಗ್ಗೆ ನಮಗೆ ಹೇಳು.
2 “ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು” ಆದರೆ ಅವರೆಂದೂ ಗೆಲ್ಲಲಿಲ್ಲ.
3 ನನ್ನ ಬೆನ್ನಿನ ಮೇಲೆ ಹೊಡೆದು ಹೊಲವನ್ನು ಉಳುವಂತೆ ಗಾಯ ಮಾಡಿದರು.
4 ಆದರೆ ನೀತಿಸ್ವರೂಪನಾದ ಯೆಹೋವನು ಹಗ್ಗಗಳನ್ನು ಕತ್ತರಿಸಿ ದುಷ್ಟರಿಂದ ನನ್ನನ್ನು ಬಿಡುಗಡೆ ಮಾಡಿದನು.
5 ಚೀಯೋನನ್ನು ದ್ವೇಷಿಸಿದ ಜನರು ಸೋತುಹೋದರು. ಅವರು ಹೋರಾಟವನ್ನು ನಿಲ್ಲಿಸಿ ಓಡಿಹೋದರು.
6 ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದರು. ಅದು ಬೆಳೆಯುವುದಕ್ಕಿಂತ ಮೊದಲೇ ಒಣಗಿ ಹೋಗುವುದು.
7 ಅದನ್ನು ಕೊಯ್ಯುವವನ ಹಿಡಿಯೂ ತುಂಬುವುದಿಲ್ಲ ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.
8 ಅವರ ಸಮೀಪದಲ್ಲಿ ನಡೆದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ” ಎಂದು ಹೇಳುವುದಿಲ್ಲ. “ಯೆಹೋವನ ಹೆಸರಿನಲ್ಲಿ ನಿಮಗೆ ಆಶೀರ್ವಾದವಾಗಲಿ” ಎಂದು ಜನರು ಅವರನ್ನು ಆಶೀರ್ವದಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×