Bible Versions
Bible Books

Psalms 110 (ERVKN) Easy to Read Version - Kannadam

1 ರಚನೆಗಾರ : ದಾವೀದ. ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.
2 ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು. ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು.
3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿ ಬರುವರು. ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.
4 ಯೆಹೋವನು ನನಗೆ, “ನೀನು ಸದಾಕಾಲ ಮೆಲ್ಕಿಜೆದೇಕ ನಂತಹ ಯಾಜಕನಾಗಿರುವೆ” ಎಂದು ವಾಗ್ದಾನ ಮಾಡಿದ್ದಾನೆ. ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ.
5 ನನ್ನ ಯೆಹೋವನು ನಿನ್ನ ಬಲಗಡೆಯಲ್ಲಿದ್ದಾನೆ. ಆತನು ಕೋಪಗೊಂಡಾಗ ಇತರ ರಾಜರುಗಳನ್ನು ಸೋಲಿಸಿ ಬಿಡುವನು.
6 ಆತನು ಜನಾಂಗಗಳಿಗೆ ತೀರ್ಪುಮಾಡುವನು. ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. ಬಲಿಷ್ಠರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು.
7 ರಾಜನು ಮಾರ್ಗದಲ್ಲಿ ತೊರೆಯ ನೀರನ್ನು ಕುಡಿದು ಬಲಹೊಂದುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×