Bible Versions
Bible Books

1 John 5 (ERVKN) Easy to Read Version - Kannadam

1 ಯೇಸುವೇ ಕ್ರಿಸ್ತನೆಂದು ನಂಬುವವರು ದೇವರ ಮಕ್ಕಳಾಗಿದ್ದಾರೆ. ತಂದೆಯನ್ನು (ದೇವರನ್ನು) ಪ್ರೀತಿಸುವವನು ತಂದೆಯ ಮಕ್ಕಳನ್ನೂ ಪ್ರೀತಿಸುತ್ತಾನೆ.
2 ನಾವು ದೇವರ ಮಕ್ಕಳನ್ನು ಪ್ರೀತಿಸುತ್ತಿದ್ದೇವೆಂಬುದು ನಮಗೆ ಹೇಗೆ ತಿಳಿದಿದೆ? ನಾವು ದೇವರನ್ನು ಪ್ರೀತಿಸುತ್ತಿರುವುದರಿಂದ ಮತ್ತು ಆತನ ಆಜ್ಞೆಗಳಿಗೆ ವಿಧೇಯರಾಗಿರುವುದರಿಂದ ದೇವರ ಆಜ್ಞೆಗಳು ನಮಗೆ ತಿಳಿದಿವೆ.
3 ದೇವರನ್ನು ಪ್ರೀತಿಸುವುದು ಎಂದರೆ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದು. ದೇವರ ಆಜ್ಞೆಗಳು ನಮಗೆ ಕಠಿಣವಾದವುಗಳಲ್ಲ.
4 ಏಕೆಂದರೆ ದೇವರಿಂದ ಹೊಸದಾಗಿ ಹುಟ್ಟಿರುವ ಪ್ರತಿಯೊಬ್ಬನೂ ಲೋಕದ ವಿರುದ್ಧ ಗೆಲ್ಲುವ ಶಕ್ತಿಯನ್ನು ಹೊಂದಿದ್ದಾನೆ.
5 ಲೋಕದ ವಿರುದ್ಧ ಜಯಗಳಿಸಿದ್ದು ನಮ್ಮ ನಂಬಿಕೆಯೇ. ಆದ್ದರಿಂದ ಲೋಕದ ವಿರುದ್ಧ ಜಯಗಳಿಸುವವನು ಯಾರು? ಯೇಸುವನ್ನು ದೇವರ ಮಗನೆಂದು ನಂಬುವ ವ್ಯಕ್ತಿಯು ಮಾತ್ರ ಜಯಗಳಿಸುತ್ತಾನೆ.
6 ಬಂದಾತನೇ ಯೇಸು ಕ್ರಿಸ್ತನು. ಯೇಸು ನೀರಿನಿಂದ ಮಾತ್ರವಲ್ಲದೆ ರಕ್ತದಿಂದ ಬಂದನು. ಇದು ನಿಜವೆಂದು ನಮಗೆ ಆತ್ಮನು ತಿಳಿಸುತ್ತಾನೆ. ಏಕೆಂದರೆ ಆತ್ಮನು ಸತ್ಯಸ್ವರೂಪನಾಗಿದ್ದಾನೆ.
7 ಆದುದರಿಂದ ಯೇಸುವಿನ ಬಗ್ಗೆ ನಮಗೆ ತಿಳಿಸಲು ಮೂರು ಸಾಕ್ಷಿಗಳಿವೆ:
8 ಆತ್ಮ, ನೀರು ಮತ್ತು ರಕ್ತ. ಮೂರು ಸಾಕ್ಷಿಗಳ ಅಭಿಪ್ರಾಯವು ಒಂದೇ.
9 This verse may not be a part of this translation
10 ದೇವರ ಮಗನನ್ನು ನಂಬುವವನು ದೇವರಿಂದ ಸಾಕ್ಷೀಕರಿಸಲ್ಪಟ್ಟ ಸತ್ಯವನ್ನು ಹೊಂದಿರುತ್ತಾನೆ. ದೇವರನ್ನು ನಂಬದೆ ಇರುವವನು, ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತಾನೆ. ಏಕೆಂದರೆ ದೇವರು ತನ್ನ ಮಗನ ಬಗ್ಗೆ ನಮಗೆ ಹೇಳಿದುದನ್ನು ಅವನು ನಂಬುವುದಿಲ್ಲ.
11 ನಮಗೆ ನಿತ್ಯಜೀವವನ್ನು ತಾನು ದಯಪಾಲಿಸಿರುವುದಾಗಿ ದೇವರು ಹೇಳಿದನು. ನಿತ್ಯಜೀವವು ಆತನ ಮಗನಲ್ಲಿದೆ (ಯೇಸು).
12 ಯಾವನಲ್ಲಿ ಮಗನಿರುತ್ತಾನೋ ಅವನಲ್ಲಿ ಜೀವವಿದೆ. ಆದರೆ ಯಾವನಲ್ಲಿ ದೇವರ ಮಗನು ಇರುವುದಿಲ್ಲವೋ ಅವನಲ್ಲಿ ಜೀವವಿಲ್ಲ.
13 ದೇವರ ಮಗನಲ್ಲಿ ನಂಬಿಕೆಯಿಟ್ಟಿರುವ ನಿಮಗೆ ನಾನು ಪತ್ರವನ್ನು ಬರೆಯುತ್ತಿದ್ದೇನೆ. ಈಗ ನಿಮಗೆ ನಿತ್ಯಜೀವವಿದೆ ಎಂಬುದು ನಿಮಗೆ ಗೊತ್ತಾಗುವಂತೆ ನಾನು ಪತ್ರ ಬರೆಯುತ್ತಿದ್ದೇನೆ.
14 ನಾವು ಯಾವ ಸಂದೇಹಗಳೂ ಇಲ್ಲದೆ ದೇವರ ಬಳಿಗೆ ಬರಲು ಸಾಧ್ಯವಿದೆ. ಇದರ ಅರ್ಥವೇನೆಂದರೆ (ದೇವರ ಚಿತ್ತಕ್ಕನುಸಾರವಾಗಿ) ನಮಗೆ ಬೇಕಾದವುಗಳಿಗಾಗಿ ದೇವರನ್ನು ಕೇಳಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆ.
15 ನಾವು ದೇವರನ್ನು ಬೇಡಿಕೊಂಡಾಗಲೆಲ್ಲಾ ಆತನು ನಮ್ಮ ಬೇಡಿಕೆಗಳನ್ನು ಕೇಳುವುದರಿಂದ ಆತನಲ್ಲಿ ಬೇಡಿಕೊಂಡದ್ದನ್ನು ಆತನು ನಮಗೆ ದಯಪಾಲಿಸುತ್ತಾನೆಂಬುದು ನಮಗೆ ತಿಳಿದಿದೆ.
16 ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಸಹೋದರನಿಗಾಗಿ ಅಥವಾ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಸಹೋದರನಿಗೆ ಅಥವಾ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.
17 ನೀತಿಗೆ ವಿರುದ್ಧವಾದುದೆಲ್ಲಾ ಪಾಪವಾಗಿದೆ. ಆದರೆ ಶಾಶ್ವತ ಮರಣದ ಕಡೆಗೆ ಕೊಂಡೊಯ್ಯದಿರುವ ಪಾಪವೂ ಇದೆ.
18 ದೇವರಿಂದ ಹೊಸದಾಗಿ ಹುಟ್ಟಿದವನು ಪಾಪದಲ್ಲೇ ಮುಂದುವರಿಯುವುದಿಲ್ಲವೆಂದು ನಮಗೆ ತಿಳಿದಿದೆ. ದೇವರ ಮಗನಾದ ಯೇಸು ಅವನನ್ನು ಸುರಕ್ಷಿತವಾಗಿ ಕಾಪಾಡುತ್ತಾನೆ. ಕೆಡುಕನು ಅವನಿಗೆ ಕೇಡು ಮಾಡಲಾಗುವುದಿಲ್ಲ.
19 ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ. ಆದರೆ ಲೋಕವು ಕೆಡುಕನ ವಶದಲ್ಲಿದೆ.
20 ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.
21 ಆದ್ದರಿಂದ ಪ್ರಿಯ ಮಕ್ಕಳೇ, ನೀವು ಸುಳ್ಳುದೇವರುಗಳಿಂದ ದೂರವಾಗಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×