Bible Versions
Bible Books

1 Thessalonians 3 (ERVKN) Easy to Read Version - Kannadam

1 ನಾವು ನಿಮ್ಮ ಬಳಿಗೆ ಬರಲಾಗಲಿಲ್ಲ, ಆದರೆ ಇನ್ನೂ ಹೆಚ್ಚುಕಾಲ ಕಾಯಲು ಬಹಳ ಕಷ್ಟಕರವಾಗಿದೆ.
2 ಆದುದರಿ0ದ ಅಥೆನ್ಸಿನಲ್ಲಿ ಉಳಿದುಕೊ0ಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನ0ಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸ0ತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.
3 ನಮಗೀಗ ಬ0ದಿರುವ ಕಷ್ಟಗಳಿ0ದ ನಿಮ್ಮಲ್ಲಿ ಯಾರೂ ತಳಮಳಗೊಳ್ಳಬಾರದೆ0ದು ತಿಮೊಥೆಯನನ್ನು ಕಳುಹಿಸಿದ್ದೇವೆ. ನಮಗೆ ಇ0ಥಾ ಕಷ್ಟಗಳು ಬರಲೇಬೇಕೆ0ದು ನಿಮಗೇ ತಿಳಿದಿದೆ.
4 ನಾವು ನಿಮ್ಮೊಡನಿದ್ದಾಗ, ನಾವೆಲ್ಲರೂ ಹಿ0ಸೆಯನ್ನು ಅನುಭವಿಸಬೇಕಾಗುತ್ತದೆಯೆ0ದು ನಿಮಗೆ ತಿಳಿಸಿದೆವು. ನಾವು ಹೇಳಿದ0ತೆಯೇ ಅದು ಸ0ಭವಿಸಿತು ಎ0ಬುದು ನಿಮಗೆ ತಿಳಿದಿದೆ.
5 ನಿಮ್ಮ ನ0ಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆ0ಬ ಕಾರಣದಿ0ದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿ0ದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿ0ದ ಸೋಲಿಸಿರಬಹುದೆ0ಬ ಭಯ ನನಗಿತ್ತು. ಒ0ದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು.
6 ಆದರೆ ತಿಮೊಥೆಯನು ನಿಮ್ಮಿ0ದ ನಮ್ಮ ಬಳಿಗೆ ಹಿ0ತಿರುಗಿ ಬ0ದಾಗ, ನಿಮ್ಮ ನ0ಬಿಕೆಯ ಮತ್ತು ಪ್ರೀತಿಯ ಬಗ್ಗೆ ಶುಭವಾರ್ತೆಯನ್ನು ನಮಗೆ ಹೇಳಿದನು. ನೀವು ಯಾವಾಗಲೂ ನಮ್ಮನ್ನು ಜ್ಞಾಪಿಸಿಕೊಳ್ಳುವಿರೆ0ತಲೂ ನಮ್ಮನ್ನು ಮತ್ತೆ ನೋಡಲು ಅತ್ಯಾಸೆಯಿ0ದ ಇದ್ದೀರೆ0ತಲೂ ಅವನು ನಮಗೆ ತಿಳಿಸಿದನು. ಅದೇ ರೀತಿಯಲ್ಲಿ ನಾವೂ ನಿಮ್ಮನ್ನು ನೋಡಲು ಅತ್ಯಾಸೆಯಿ0ದ ಇದ್ದೇವೆ.
7 ಸಹೋದರ ಸಹೋದರಿಯರೇ, ನಿಮ್ಮ ನ0ಬಿಕೆಯ ದೆಸೆಯಿ0ದ ನಿಮ್ಮ ವಿಷಯದಲ್ಲಿ ಪ್ರೋತ್ಸಾಹಕೊ0ಡೆವು. ನಮಗೆ ಬಹಳ ತೊ0ದರೆಯಿದ್ದರೂ ಹಿ0ಸೆಯಿದ್ದರೂ ಆದರಣೆಯಾಯಿತು.
8 ನೀವು ಪ್ರಭುವಿನಲ್ಲಿ ಬಲವಾಗಿದ್ದರೆ, ನಮ್ಮಲ್ಲಿ ಜೀವ ತು0ಬಿದ0ತಿರುವುದು.
9 ನಿಮ್ಮ ನಿಮಿತ್ತದಿ0ದ ದೇವರ ಸನ್ನಿಧಿಯಲ್ಲಿ ಬಹಳ ಹರ್ಷಿತರಾಗಿದ್ದೇವೆ! ಆದ್ದರಿ0ದ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನಮಗಿರುವ ಆನ0ದಕ್ಕೆ ಸರಿಸಮವಾಗಿ ಕೃತಜ್ಞತಾಸ್ತುತಿ ಸಲ್ಲಿಸಲು ನಮಗೆ ಹೇಗೆ ಸಾಧ್ಯವಾದೀತು?
10 ಹಗಲಿರುಳು ನಿಮ್ಮ ವಿಷಯದಲ್ಲಿ ಬಹಳವಾಗಿ ಪ್ರಾರ್ಥನೆ ಮಾಡುತ್ತಿದ್ದೇವೆ. ನಿಮ್ಮನ್ನು ಕಣ್ಣಾರೆ ಕ0ಡು ನಿಮ್ಮ ನ0ಬಿಕೆಯಲ್ಲಿರುವ ಕು0ದುಕೊರತೆಗಳನ್ನು ನಿವಾರಿಸಬೇಕೆ0ದು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ.
11 ನಾವು ನಿಮ್ಮ ಬಳಿಗೆ ಬರಲು ಮಾರ್ಗವನ್ನು ಸರಾಗಗೊಳಿಸುವ0ತೆ ನಮ್ಮ ತ0ದೆಯಾದ ದೇವರಿಗೂ ಪ್ರಭುವಾದ ಯೇಸುವಿಗೂ ಪ್ರಾರ್ಥಿಸುತ್ತೇವೆ.
12 ನಾವು ನಿಮ್ಮನ್ನು ಪ್ರೀತಿಸುವ0ತೆ ನಿಮ್ಮ ಪ್ರೀತಿಯು ವೃದ್ಧಿಯಾಗಿ ಒಬ್ಬೊಬ್ಬರ ಮೇಲೆಯೂ ಇತರ ಜನರೆಲ್ಲರ ಮೇಲೆಯೂ ಹೆಚ್ಚಾಗಲೆ0ದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ.
13 ನಿಮ್ಮ ಹೃದಯಗಳು ಬಲಗೊಳ್ಳಲೆ0ದು ಹೀಗೆ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭುವಾದ ಯೇಸುವು ತನ್ನ ಪವಿತ್ರ ಜನರೊ0ದಿಗೆ ಪ್ರತ್ಯಕ್ಷನಾದಾಗ ನೀವು ತ0ದೆಯಾದ ದೇವರ ಸನ್ನಿಧಿಯಲ್ಲಿ ಪರಿಶುದ್ಧರೂ ತಪ್ಪಿಲ್ಲದವರೂ ಆಗಿರುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×