Bible Versions
Bible Books

1 Samuel 4 (ERVKN) Easy to Read Version - Kannadam

1 ಸಮುವೇಲನ ಸುದ್ದಿಯು ಇಸ್ರೇಲಿನಲ್ಲೆಲ್ಲಾ ಹರಡಿತು. ಏಲಿಯು ಬಹು ವೃದ್ಧನಾದನು. ಅವನ ಮಕ್ಕಳು ಯೆಹೋವನ ಸನ್ನಿಧಿಯಲ್ಲಿ ಕೆಟ್ಟಕಾರ್ಯಗಳನ್ನು ನಡೆಸುತ್ತಲೇ ಇದ್ದರು. ಕಾಲದಲ್ಲಿ ಫಿಲಿಷ್ಟಿಯರು ಇಸ್ರೇಲರಿಗೆ ವಿರುದ್ಧವಾಗಿ ಯುದ್ಧಮಾಡಲು ಒಟ್ಟುಗೂಡಿದರು. ಇಸ್ರೇಲರು ಫಿಲಿಷ್ಟಿಯರಿಗೆ ವಿರುದ್ಧವಾಗಿ ಹೊರಟು ಎಬೆನೆಜೆರಿನಲ್ಲಿ ಪಾಳೆಯ ಮಾಡಿಕೊಂಡರು; ಫಿಲಿಷ್ಟಿಯರು ಅಫೇಕಿನಲ್ಲಿ ಪಾಳೆಯ ಮಾಡಿಕೊಂಡರು.
2 ಫಿಲಿಷ್ಟಿಯರು ಇಸ್ರೇಲರ ಮೇಲೆ ಆಕ್ರಮಣ ಮಾಡಲು ಸಿದ್ಧರಾದರು. ಹೋರಾಟ ಆರಂಭವಾಯಿತು. ಫಿಲಿಷ್ಟಿಯರು ಇಸ್ರೇಲರನ್ನು ಸೋಲಿಸಿ ಇಸ್ರೇಲಿನ ಸೈನ್ಯದಲ್ಲಿ ನಾಲ್ಕು ಸಾವಿರ ಸೈನಿಕರನ್ನು ಸಂಹರಿಸಿದರು.
3 ಇಸ್ರೇಲರ ಸೈನಿಕರು ಪಾಳೆಯಕ್ಕೆ ಹಿಂದಿರುಗಿದರು. ಇಸ್ರೇಲರ ಹಿರಿಯರು, “ಫಿಲಿಷ್ಟಿಯರು ನಮ್ಮನ್ನು ಸೋಲಿಸಲು ಯೆಹೋವನು ಅವಕಾಶ ನೀಡಿದ್ದೇಕೆ? ಶೀಲೋವಿನಿಂದ ಯೆಹೋವನ ಪವಿತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ತರಿಸೋಣ. ರೀತಿ ದೇವರು ನಮ್ಮೊಂದಿಗೆ ಯುದ್ಧರಂಗಕ್ಕೆ ಬರಲಿ. ಆತನು ನಮ್ಮನ್ನು ಶತ್ರುಗಳಿಂದ ರಕ್ಷಿಸುತ್ತಾನೆ’ ಎಂದು ಹೇಳಿದರು.
4 ಕಾರಣಕ್ಕಾಗಿ ಶೀಲೋವಿಗೆ ಜನರನ್ನು ಕಳುಹಿಸಿದರು. ಸರ್ವಶಕ್ತನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ತಂದರು. ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಅವುಗಳು ಯೆಹೋವನು ಕುಳಿತುಕೊಳ್ಳುವ ಸಿಂಹಾಸನದಂತಿದ್ದವು; ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಪೆಟ್ಟಿಗೆಯ ಜೊತೆಯಲ್ಲಿ ಬಂದರು.
5 ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಪಾಳೆಯಕ್ಕೆ ಬಂದಾಗ ಇಸ್ರೇಲರೆಲ್ಲರು ಆರ್ಭಟಿಸಿದರು. ಅವರ ಆರ್ಭಟವು ನೆಲವನ್ನು ನಡುಗಿಸಿತು.
6 ಇಸ್ರೇಲರ ಆರ್ಭಟವು ಫಿಲಿಷ್ಟಿಯರಿಗೆ ಕೇಳಿಸಿತು. “ಇಬ್ರಿಯರ ಪಾಳೆಯದಲ್ಲಿ ಆಗುತ್ತಿರುವ ಆರ್ಭಟಕ್ಕೆ ಕಾರಣವೇನು?” ಎಂದು ಅವರು ಕೇಳಿದರು. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಇಸ್ರೇಲರ ಪಾಳೆಯಕ್ಕೆ ತಂದಿರುವುದೇ ಅವರ ಆರ್ಭಟಕ್ಕೆ ಕಾರಣವೆಂದು ಫಿಲಿಷ್ಟಿಯರಿಗೆ ತಿಳಿದು ಬಂದಿತು.
7 ಫಿಲಿಷ್ಟಿಯರು ಭಯಗೊಂಡು, “ದೇವರುಗಳೇ ಅವರ ಪಾಳೆಯಕ್ಕೆ ಬಂದಿದ್ದಾರೆ! ನಾವು ತೊಂದರೆಯಲ್ಲಿದ್ದೇವೆ. ಹಿಂದೆಂದೂ ರೀತಿ ಆಗಿರಲಿಲ್ಲ!
8 ಅಯ್ಯೋ, ಮಹಾಶಕ್ತಿಶಾಲಿಗಳಾದ ದೇವರುಗಳಿಂದ ನಮ್ಮನ್ನು ರಕ್ಷಿಸುವವರು ಯಾರು! ಈಜಿಪ್ಟಿನವರಿಗೆ ಕಾಯಿಲೆಗಳನ್ನು ಬರಮಾಡಿದ ದೇವರುಗಳು ಇವರೇ ಅಲ್ಲವೇ.
9 ಫಿಲಿಷ್ಟಿಯರೇ, ಧೈರ್ಯದಿಂದಿರಿ! ಶೂರರಂತೆ ಹೋರಾಡಿ! ಇಬ್ರಿಯರು ಪುರಾತನ ಕಾಲದಲ್ಲಿ ನಮಗೆ ಗುಲಾಮರಾಗಿದ್ದರು. ಆದಕಾರಣ ಶೂರರಂತೆ ಹೋರಾಡಿರಿ, ಇಲ್ಲವಾದರೆ ನೀವು ಅವರಿಗೆ ಗುಲಾಮರಾಗುವಿರಿ!” ಎಂದು ಹೇಳಿದರು.
10 ಫಿಲಿಷ್ಟಿಯರು ಶೌರ್ಯದಿಂದ ಹೋರಾಡಿ ಇಸ್ರೇಲರನ್ನು ಸೋಲಿಸಿದರು. ಇಸ್ರೇಲರ ಪ್ರತಿಯೊಬ್ಬ ಸೈನಿಕನೂ ತನ್ನ ಪಾಳೆಯಕ್ಕೆ ಓಡಿಹೋದನು. ಇಸ್ರೇಲರಿಗೆ ಭೀಕರ ಸೋಲಾಯಿತು. ಮೂವತ್ತು ಸಾವಿರ ಇಸ್ರೇಲರು ಹತರಾದರು.
11 ದೇವರ ಪವಿತ್ರ ಪೆಟ್ಟಿಗೆಯು ಫಿಲಿಷ್ಟಿಯರ ವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರನ್ನು ಅವರು ಕೊಂದರು.
12 ದಿನದಂದು ಬೆನ್ಯಾಮೀನನ ಕುಟುಂಬದ ಒಬ್ಬ ಮನುಷ್ಯನು ದುಃಖದಿಂದ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಧೂಳನ್ನು ಹಾಕಿಕೊಂಡು, ರಣರಂಗದಿಂದ ತಪ್ಪಿಸಿಕೊಂಡು ಓಡಿಹೋದನು.
13 ಅವನು ಶೀಲೋವನ್ನು ತಲುಪಿದಾಗ ಏಲಿಯು ಪೀಠದ ಮೇಲೆ ಕುಳಿತಿದ್ದನು. ದೇವರ ಪವಿತ್ರ ಪೆಟ್ಟಿಗೆಗೆ ಏನಾಯಿತೋ ಎಂದು ಚಿಂತಿಸುತ್ತಾ ಏಲಿಯು ನಗರದ್ವಾರದಲ್ಲಿ ಕುರ್ಚಿಯ ಮೇಲೆ ಕಾಯುತ್ತಾ ಕುಳಿತಿದ್ದನು. ಆಗ ಬೆನ್ಯಾಮೀನ್ಯನು ಶೀಲೋವನ್ನು ಪ್ರವೇಶಿಸಿ ಅಲ್ಲಿನ ಕೆಟ್ಟ ಸುದ್ದಿಯನ್ನು ಹೇಳಿದನು. ನಗರದ ಜನರೆಲ್ಲರು ಜೋರಾಗಿ ಗೋಳಾಡಿದರು.
14 This verse may not be a part of this translation
15 This verse may not be a part of this translation
16 ಬೆನ್ಯಾಮೀನ್ಯನು ಏಲಿಯ ಬಳಿಗೆ ಹೋಗಿ, “ನಾನು ದಿನವೇ ರಣರಂಗದಿಂದ ಓಡಿಬಂದೆನು” ಎಂದು ಹೇಳಿದನು. ಏಲಿಯು, “ನನ್ನ ಮಗನೇ ಏನಾಯಿತು?” ಎಂದು ಕೇಳಿದನು.
17 ಬೆನ್ಯಾಮೀನ್ಯನು, “ಇಸ್ರೇಲರು ಫಿಲಿಷ್ಟಿಯರಿಂದ ಸೋತು, ಹಿಮ್ಮೆಟ್ಟಿದರು. ಇಸ್ರೇಲರ ಪಡೆಯು ಅನೇಕ ಸೈನಿಕರನ್ನು ಕಳೆದುಕೊಂಡಿತು. ನಿನ್ನ ಮಕ್ಕಳಿಬ್ಬರೂ ಸತ್ತರು. ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು” ಎಂದು ಹೇಳಿದನು.
18 ಯೆಹೋವನ ಪವಿತ್ರ ಪೆಟ್ಟಿಗೆಯ ವಿಚಾರವನ್ನು ಬೆನ್ಯಾಮೀನ್ಯನು ತಿಳಿಸಿದಾಗ, ಏಲಿಯು ಪೀಠದಿಂದ ಹಿಂದಕ್ಕೆ ಬಾಗಿಲಿನ ಸಮೀಪದಲ್ಲಿ ಬಿದ್ದನು; ಅವನ ಕುತ್ತಿಗೆಯು ಮುರಿದು ಬಿತ್ತು. ಏಲಿಯು ಮುದುಕನೂ ಬೊಜ್ಜುಳ್ಳವನೂ ಆಗಿದ್ದುದರಿಂದ ಸತ್ತನು. ಅವನು ಇಸ್ರೇಲರನ್ನು ನಲವತ್ತು ವರ್ಷ ನಡೆಸಿದನು.
19 ಏಲಿಯ ಸೊಸೆ ಅಂದರೆ ಫೀನೆಹಾಸನ ಹೆಂಡತಿಯು ಗರ್ಭಿಣಿಯಾಗಿದ್ದಳು. ಹೆರಿಗೆಯ ಸಮಯ ಸಮೀಪಿಸಿತ್ತು. ಯೆಹೋವನ ಪವಿತ್ರ ಪೆಟ್ಟಿಗೆಯು ಶತ್ರುಗಳ ವಶವಾದದ್ದನ್ನೂ ತನ್ನ ಮಾವನಾದ ಏಲಿಯು ಸತ್ತದ್ದನ್ನೂ ಗಂಡನಾದ ಫೀನೆಹಾಸನು ಸತ್ತ ಸುದ್ದಿಯನ್ನೂ ಅವಳು ಕೇಳಿದಳು. ಸುದ್ದಿಯನ್ನು ಕೇಳಿದ ತಕ್ಷಣ ಪ್ರಸವವೇದನೆಯಾಗಿ ಮಗುವನ್ನು ಹೆತ್ತಳು.
20 ಅವಳಿಗೆ ಸಹಾಯ ಮಾಡುತ್ತಿದ್ದ ಸ್ತ್ರೀಯರು, “ಚಿಂತಿಸಬೇಡ. ನೀನು ಗಂಡುಮಗುವಿಗೆ ಜನ್ಮ ನೀಡಿರುವೆ” ಎಂದು ಹೇಳಿದರು. ಆದರೆ ಏಲಿಯ ಸೊಸೆಯು ಅವರ ಮಾತಿಗೆ ಉತ್ತರಿಸಲೂ ಇಲ್ಲ, ಲಕ್ಷ್ಯ ಕೊಡಲೂ ಇಲ್ಲ.
21 ಏಲಿಯ ಸೊಸೆಯು, “ಇಸ್ರೇಲರ ವೈಭವವು ಇಲ್ಲವಾಯಿತು” ಎಂದು ಹೇಳಿದಳು. ಅವಳು ತನ್ನ ಮಗುವಿಗೆ ಈಕಾಬೋದ್ ಎಂಬ ಹೆಸರಿಟ್ಟು ಮೃತಳಾದಳು. ಯೆಹೋವನ ಪವಿತ್ರ ಪೆಟ್ಟಿಗೆಯು ಶತ್ರುವಶವಾದದ್ದರಿಂದ ಮಾವನು ಮತ್ತು ಗಂಡನು ಸತ್ತದ್ದರಿಂದ, ಆಕೆ ತನ್ನ ಮಗನಿಗೆ ಈಕಾಬೋದ್ ಎಂದು ಹೆಸರಿಟ್ಟಳು.
22 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಫಿಲಿಷ್ಟಿಯರು ತೆಗೆದುಕೊಂಡು ಹೋದದ್ದರಿಂದ ಆಕೆಯು, “ಇಸ್ರೇಲರ ವೈಭವ ಇಲ್ಲವಾಯಿತು” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×