Bible Versions
Bible Books

Amos 5 (ERVKN) Easy to Read Version - Kannadam

1 ಇಸ್ರೇಲಿನ ಜನರೇ, ಹಾಡನ್ನು ಕೇಳಿರಿ. ಇದು ನಿಮ್ಮ ಮರಣದ ಗೀತೆ.
2 ಇಸ್ರೇಲ್ ಕುಮಾರಿಯು ಬಿದ್ದಳು. ಇನ್ನು ಎಂದಿಗೂ ಆಕೆ ಏಳುವದಿಲ್ಲ. ಆಕೆ ಒಬ್ಬಂಟಿಗಳಾಗಿ ಧೂಳಿನ ಮೇಲೆ ಬಿದ್ದಿದ್ದಾಳೆ. ಆಕೆಯನ್ನು ಎಬ್ಬಿಸಲು ಯಾರೂ ಇಲ್ಲ.
3 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ. “ಸೈನ್ಯಾಧಿಕಾರಿಗಳು ಸಾವಿರ ಮಂದಿಯೊಂದಿಗೆ ಪಟ್ಟಣದ ಹೊರಗೆ ಹೋದರೆ ನೂರು ಮಂದಿಯೊಂದಿಗೆ ಹಿಂದಿರುಗುವರು. ಸೈನ್ಯಾಧಿಕಾರಿಗಳು ನೂರು ಮಂದಿಯೊಂದಿಗೆ ಹೋದರೆ ಬರೀ ಹತ್ತು ಮಂದಿಯೊಂದಿಗೆ ಹಿಂದಿರುಗುವರು.
4 ಇಸ್ರೇಲ್ ಜನಾಂಗಕ್ಕೆ ಯೆಹೋವನು ಇಂತೆನ್ನುತ್ತಾನೆ: “ನನ್ನನ್ನು ಹುಡುಕುತ್ತಾ ಬಂದು ಬದುಕವವನಾಗು.
5 ಆದರೆ ಬೇತೇಲಿನಲ್ಲಿ ಹುಡುಕಬೇಡ, ಗಿಲ್ಗಾಲಿನಲ್ಲಿ ಕಾಲಿಡಬೇಡ. ಗಡಿಯನ್ನು ದಾಟಿ ಬೇರ್ಷೆಬಕ್ಕೆ ಹೋಗಬೇಡ. ಗಿಲ್ಗಾಲಿನ ಜನರು ಕೈದಿಗಳಂತೆ ತೆಗೆಯಲ್ಪಡುವರು. ಮತ್ತು ಬೇತೇಲ್ ನಾಶ ಮಾಡಲ್ಪಡುವದು.
6 ಯೆಹೋವನ ಬಳಿಗೆ ಹೋಗು. ಆಗ ಜೀವಿಸುವಿ. ಯೆಹೋವನ ಬಳಿಗೆ ನೀನು ಹೋಗದಿದ್ದಲ್ಲಿ ಯೋಸೇಫನ ಮನೆತನಕ್ಕೆ ಬೆಂಕಿಯು ಹಿಡಿಯುವುದು. ಬೆಂಕಿಯು ಯೋಸೇಫನ ಮನೆಯನ್ನು ದಹಿಸುವದು. ಬೇತೇಲಿನಲ್ಲಿ ಅದನ್ನು ಯಾರೂ ನಂದಿಸಲಾರರು.
7 This verse may not be a part of this translation
8 This verse may not be a part of this translation
9 This verse may not be a part of this translation
10 ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಟಕಾರ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆ ಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು.
11 ನೀವು ಅನ್ಯಾಯವಾಗಿ ಜನರಿಂದ ಸುಂಕವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ.
12 ಯಾಕೆ ಹೀಗೆ? ಯಾಕೆಂದರೆ ನಿಮ್ಮ ಅನೇಕ ಪಾಪಕೃತ್ಯಗಳನ್ನು ನಾನು ಬಲ್ಲೆನು. ನೀವು ಭಯಂಕರ ಪಾಪಗಳನ್ನು ಮಾಡಿದ್ದೀರಿ. ನ್ಯಾಯವಂತರನ್ನು ಗಾಯಗೊಳಿಸಿದ್ದೀರಿ. ಅನ್ಯಾಯ ಮಾಡಲು ಹಣವನ್ನು ತೆಗೆದುಕೊಂಡಿದ್ದೀರಿ. ಬಡಜನರಿಗೆ ನ್ಯಾಯವನ್ನು ದೊರಕಿಸುವುದಿಲ್ಲ.
13 ಸಮಯದಲ್ಲಿ ಜ್ಞಾನಿಗಳಾದ ಬೋಧಕರು ಸುಮ್ಮನಿರುವರು. ಯಾಕೆಂದರೆ ಅದು ಕೆಟ್ಟ ಸಮಯವಾಗಿರುತ್ತದೆ.
14 ದೇವರು ನಿಮ್ಮೊಂದಿಗಿದ್ದಾನೆಂದು ನೀವು ಹೇಳುತ್ತೀರಿ. ಆದುದರಿಂದ ನೀವು ಕೆಟ್ಟಕಾರ್ಯವನ್ನು ಮಾಡದೆ ಒಳ್ಳೆಯ ಕೃತ್ಯಗಳನ್ನು ಮಾಡಬೇಕು. ಆಗ ನೀವು ಬದುಕುವಿರಿ. ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಯಲ್ಲಿ ಖಂಡಿತವಾಗಿಯೂ ಇರುವನು.
15 ದುಷ್ಟತನವನ್ನು ದ್ವೇಷಿಸಿ ಒಳ್ಳೇತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಾನು.
16 ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಸಾರ್ವಜನಿಕ ಸ್ಥಳಗಳಲ್ಲಿ ಜನರು ಗೋಳಾಡುವರು. ರಸ್ತೆ ಬದಿಗಳಲ್ಲಿ ಜನರು ಗೋಳಾಡುವರು. ಪಟ್ಟಣದ ನಿವಾಸಿಗಳು ತಮ್ಮೊಂದಿಗೆ ಗೋಳಾಡಲು ರೈತರನ್ನು ಆಹ್ವಾನಿಸುವರು. ಅಳುವವರನ್ನು ಬಾಡಿಗೆಗೆ ಕರೆದುಕೊಂಡು ಬರುವರು.
17 ದ್ರಾಕ್ಷಿತೋಟಗಳಲ್ಲಿ ಜನರು ಅಳುವರು ಯಾಕೆ? ಯಾಕೆಂದರೆ ನಾನು ಹಾದುಹೋಗುತ್ತಾ ನಿಮ್ಮನ್ನು ಶಿಕ್ಷಿಸುವೆನು.” ಇದು ಯೆಹೋವನ ನುಡಿ.
18 ನಿಮ್ಮಲ್ಲಿ ಕೆಲವರಿಗೆ ಯೆಹೋವನ ನ್ಯಾಯತೀರ್ಪಿನ ದಿನವನ್ನು ನೋಡುವ ಮನಸ್ಸಿದೆ. ದಿವಸವನ್ನು ಯಾಕೆ ನೀವು ನೋಡಬೇಕು? ಯೆಹೋವನ ನ್ಯಾಯಾತೀರ್ಪಿನ ದಿನವು ಬೆಳಕನ್ನಲ್ಲ, ಕತ್ತಲನ್ನು ತರುವುದು.
19 ಆಗ ನೀವು ಸಿಂಹದ ಬಾಯಿಂದ ತಪ್ಪಿಸಿಕೊಂಡು ಕರಡಿಯ ಬಾಯಿಗೆ ಬೀಳುವ ಮನುಷ್ಯನಂತಿರುವಿರಿ. ಆಗ ನೀವು ನಿಮ್ಮ ಮನೆಯ ಆಶ್ರಯಕ್ಕೆ ಓಡಿಹೋಗಿ ಗೋಡೆಗೆ ಒರಗಿ ನಿಂತಾಗ ಒಂದು ಹಾವಿನಿಂದ ಕಡಿಸಿಕೊಂಡವರಂತೆ ಇರುವಿರಿ.
20 ಯೆಹೋವನ ನ್ಯಾಯತೀರ್ಪಿನ ದಿವಸವು ಬೆಳಕಿನ ದಿವಸವಾಗಿರದೆ ಕತ್ತಲೆಯ ದಿವಸವಾಗಿರುವುದು; ಬೆಳಕಿನ ಮಿಣಕೂ ಇಲ್ಲದ ಅಂಧಕಾರದ ದಿನವಾಗಿರುವುದು.
21 “ನಿಮ್ಮ ಆರಾಧನಾ ದಿವಸಗಳನ್ನು ನಾನು ದ್ವೇಷಿಸುತ್ತೇನೆ. ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ನಿಮ್ಮ ಧಾರ್ಮಿಕ ಕೂಟಗಳಲ್ಲಿ ನಾನು ಸಂತೋಷಿಸುವದಿಲ್ಲ.
22 ನೀವು ಸರ್ವಾಂಗಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ ನಾನು ಅದನ್ನು ಸ್ವೀಕರಿಸುವುದಿಲ್ಲ. ಸಮಾಧಾನ ಯಜ್ಞದಲ್ಲಿ ಕೊಬ್ಬಿದ ಪ್ರಾಣಿಗಳನ್ನು ಬಲಿಯರ್ಪಿಸಿದರೂ ನಾನು ಅದನ್ನು ಕಣ್ಣೆತ್ತಿ ನೋಡುವದಿಲ್ಲ.
23 ನಿಮ್ಮ ಗಟ್ಟಿಯಾದ ಹಾಡುಗಳನ್ನು ನನ್ನಿಂದ ದೂರ ಮಾಡಿರಿ. ನಿಮ್ಮ ಹಾರ್ಪ್ ವಾದ್ಯಗಳ ಹಾಡುಗಳನ್ನು ನಾನು ಕೇಳುವುದಿಲ್ಲ.
24 ನಿಮ್ಮ ದೇಶದಿಂದ ನ್ಯಾಯವು ಹರಿಯುವಂತೆ ಮಾಡಿರಿ. ಎಂದಿಗೂ ಬತ್ತದ ಒರತೆಯಂತೆ ನಿಮ್ಮ ಒಳ್ಳೆತನವು ಹರಿಯಲಿ.
25 ಇಸ್ರೇಲೇ, ನೀನು ನಾಲ್ವತ್ತು ವರುಷ ಮರುಭೂಮಿಯಲ್ಲಿ ನನಗೆ ಯಜ್ಞಹೋಮಗಳನ್ನು ಸಮರ್ಪಿಸಿದ್ದಿಯೋ? ಇಲ್ಲ.
26 ಅದೇ ಸಮಯದಲ್ಲಿ ನೀನು ನಿನ್ನ ರಾಜನಾದ ಸಕ್ಕೂತನ ಮತ್ತು ಕೈವಾನನ ವಿಗ್ರಹಗಳನ್ನು ತೆಗೆದುಕೊಂಡು ಹೋದೆ. ನಕ್ಷತ್ರಗಳನ್ನು ದೇವರುಗಳನ್ನಾಗಿ ನೀನೇ ಮಾಡಿಕೊಂಡೆ.
27 ಆದುದರಿಂದ ನಿನ್ನನ್ನು ಸೆರೆಹಿಡಿಯಲ್ಪಟ್ಟವನಾಗಿ ದಮಸ್ಕದ ಆಚೆಗೆ ಕಳುಹಿಸುವೆನು.” ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×