Bible Versions
Bible Books

Amos 8 (ERVKN) Easy to Read Version - Kannadam

1 ಯೆಹೋವನು ನನಗೆ ಇದನ್ನು ತೋರಿಸಿದನು: ನಾನು ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳನ್ನು ಕಂಡೆನು.
2 ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳು” ಎಂದು ಹೇಳಿದೆನು. ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ.
3 ನನ್ನ ಆಲಯದಲ್ಲಿ ಹಾಡುವ ಹಾಡುಗಳು ಮರಣದ ಶೋಕಗೀತೆಗಳಾಗುವವು. ಇವು ಕರ್ತನಾದ ಯೆಹೋವನ ನುಡಿಗಳು. ಸತ್ತ ಹೆಣಗಳು ಎಲ್ಲೆಲ್ಲಿಯೂ ಬಿದ್ದುಕೊಂಡಿರುವವು. ಜನರು ಮೌನದಿಂದಿದ್ದು ಸತ್ತವರನ್ನು ಎತ್ತಿ ರಾಶಿಗೆ ಬಿಸಾಡುವರು.”
4 ನನ್ನ ಮಾತುಗಳನ್ನು ಕೇಳಿರಿ! ಜನರೇ, ನೀವು ಬಡವರ ಮೇಲೆ ನಡೆದಾಡುತ್ತೀರಿ. ದೇಶದ ಬಡಜನರನ್ನು ನಾಶಮಾಡುತ್ತೀರಿ.
5 ವರ್ತಕರಾದ ನೀವು ಹೇಳುವದೇನೆಂದರೆ, “ಅಮಾವಾಸ್ಯೆ ಯಾವಾಗ ಮುಗಿಯುವುದು? ಆಗ ನಾವು ಧಾನ್ಯವನ್ನು ಮಾರಾಟ ಮಾಡುವೆವು. ಸಬ್ಬತ್ ಯಾವಾಗ ಮುಗಿಯುವುದು? ಆಗ ನಾವು ನಮ್ಮ ಗೋದಿಯನ್ನು ಮಾರಾಟಮಾಡಲು ತರುವೆವು. ಅದರ ಬೆಲೆಯನ್ನು ಅಧಿಕಗೊಳಿಸಿ ಅಳತೆಯನ್ನು ಕಡಿಮೆ ಮಾಡುವೆವು. ತ್ರಾಸನ್ನು ಕಡಿಮೆ ಮಾಡಿ ಜನರಿಗೆ ಮೋಸ ಮಾಡುವೆವು.
6 ಬಡಜನರಿಗೆ ಸಾಲ ಸಂದಾಯ ಮಾಡಲು ಸಾಧ್ಯವಾಗದಿರುವದರಿಂದ ಅವರನ್ನು ನಾವು ಗುಲಾಮರನ್ನಾಗಿ ತೆಗೆದುಕೊಳ್ಳೋಣ. ಒಂದು ಜೊತೆ ಚಪ್ಪಲಿಯ ಕ್ರಯಕೊಟ್ಟು ಅವರನ್ನು ಖರೀದಿಸೋಣ. ಮತ್ತು ನೆಲದಲ್ಲಿ ಬಿದ್ದ ಗೋದಿಯನ್ನು ಒಟ್ಟು ಸೇರಿಸಿ ಮಾರೋಣ.”
7 ಯೆಹೋವನು “ಯಾಕೋಬನ ಮಹಿಮೆ” ಎಂಬ ತನ್ನ ಹೆಸರಿನ ಮೇಲೆ ಆಣೆಯಿಟ್ಟು ವಾಗ್ದಾನ ಮಾಡಿದ್ದಾನೆ. “ಆ ಜನರು ಮಾಡಿದ ಕೃತ್ಯಗಳನ್ನು ನಾನು ಎಂದಿಗೂ ಮರೆಯುವುದಿಲ್ಲ.
8 ಅದರ ಸಲುವಾಗಿ ಇಡೀ ದೇಶವು ಅಲುಗಾಡುವದು. ಸತ್ತವರಿಗಾಗಿ ದೇಶದ ಪ್ರತಿ ನಿವಾಸಿಯೂ ರೋಧಿಸುವನು. ಈಜಿಪ್ಟಿನ ನೈಲ್ ನದಿಯ ರೀತಿಯಲ್ಲಿ ದೇಶವು ತಿರುಗು ಮುರುಗಾಗುವುದು.”
9 ಯೆಹೋವನು ಹೀಗನ್ನುತ್ತಾನೆ, “ಆ ದಿವಸಗಳಲ್ಲಿ ನಡು ಮಧ್ಯಾಹ್ನದಲ್ಲಿಯೇ ಸೂರ್ಯನನ್ನು ಮುಳುಗುವಂತೆ ಮಾಡುವೆನು. ಶುಭ್ರವಾದ ಹಗಲಿನಲ್ಲಿ ಕತ್ತಲು ಉಂಟಾಗುವಂತೆ ಮಾಡುವೆನು.
10 ನಿಮ್ಮ ಸಂತಸದ ದಿವಸಗಳನ್ನು ಸತ್ತವರಿಗಾಗಿ ರೋದಿಸುವ ದಿವಸಗಳನ್ನಾಗಿ ಮಾಡುವೆನು. ನಿಮ್ಮ ಹಾಡುಗಳೆಲ್ಲಾ ಶೋಕಗೀತೆಯಾಗುವವು. ಎಲ್ಲರೂ ಶೋಕಬಟ್ಟೆಯನ್ನು ಧರಿಸುವಂತೆ ಮಾಡುವೆನು. ಪ್ರತಿ ತಲೆಯನ್ನು ಬೋಳು ತಲೆಯನ್ನಾಗಿ ಮಾಡುವೆನು. ಒಬ್ಬನೇ ಮಗನನ್ನು ಕಳೆದುಕೊಳ್ಳುವಾಗ ರೋದಿಸುವ ಹಾಗೆ ಗಟ್ಟಿಯಾಗಿ ರೋದಿಸುವಂತೆ ಮಾಡುತ್ತೇನೆ. ಅದರ ಅಂತ್ಯ ಕಹಿಯಾಗಿರುವುದು.”
11 ಯೆಹೋವನು ಹೇಳುವುದೇನೆಂದರೆ, “ನಿಮ್ಮ ದೇಶದಲ್ಲಿ ಹಸಿವೆಯ ದಿವಸಗಳನ್ನು ಬರಮಾಡುವೆನು. ಜನರು ರೊಟ್ಟಿಗಾಗಿ ಹಸಿಯುವುದಿಲ್ಲ. ನೀರಿಗಾಗಿ ಬಾಯಾರುವದಿಲ್ಲ. ಇಲ್ಲ! ಜನರು ಯೆಹೋವನ ವಾಕ್ಯಕ್ಕಾಗಿ ಹಸಿವೆಯುಳ್ಳವರಾಗುವರು.
12 ಮೃತ್ಯುಸಮುದ್ರದಿಂದ ಹಿಡಿದು ಮೆಡಿಟರೇನಿಯನ್ ಸಮುದ್ರದ ತನಕ ಜನರು ಅಡ್ಡಾಡುವರು. ಉತ್ತರದಿಂದ ಪೂರ್ವದಿಕ್ಕಿನ ತನಕ ಜನರು ಹಿಂದೆ ಮುಂದೆ ಹೋಗುತ್ತಾ ಹುಡುಕುವರು. ಯೆಹೋವನ ಸಂದೇಶಕ್ಕಾಗಿ ಹಾತೊರೆಯುವರು. ಆದರೆ ಅವರು ಕಂಡುಕೊಳ್ಳುವುದಿಲ್ಲ.
13 This verse may not be a part of this translation
14 This verse may not be a part of this translation
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×