Bible Versions
Bible Books

Daniel 9 (ERVKN) Easy to Read Version - Kannadam

1 ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಂದು ನಡೆದ ಸಂಗತಿಗಳಿವು: ದಾರ್ಯಾವೆಷನು ಅಹಷ್ವೇರೋಷನೆಂಬವನ ಮಗನು. ದಾರ್ಯವೆಷನು ಮೇದ್ಯಯ ವಂಶದವನು. ಅವನು ಕಸ್ದೀಯ ರಾಜ್ಯದ ದೊರೆಯಾದನು.
2 ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷ ದಾನಿಯೇಲನೆಂಬ ನಾನು ಕೆಲವು ಧರ್ಮಗ್ರಂಥಗಳನ್ನು ಓದುತ್ತಲಿದ್ದೆ. ಎಪ್ಪತ್ತು ವರ್ಷಗಳ ತರುವಾಯ ಜೆರುಸಲೇಮಿನ ಪುನರ್ನಿರ್ಮಾಣವಾಗುವದೆಂದು ಯೆಹೋವನು ಯೆರೆಮೀಯನಿಗೆ ಹೇಳಿದ್ದು ನನಗೆ ಧರ್ಮಗ್ರಂಥಗಳಿಂದ ತಿಳಿಯಿತು.
3 ಆಗ ನಾನು ದೇವರಾದ ನನ್ನ ಯೆಹೋವನನ್ನು ಪ್ರಾರ್ಥಿಸಿದೆ ಮತ್ತು ಆತನ ಸಹಾಯವನ್ನು ಕೋರಿದೆ. ನಾನು ಯಾವ ಆಹಾರವನ್ನೂ ಸ್ವೀಕರಿಸಲಿಲ್ಲ ಮತ್ತು ದುಃಖಸೂಚಕವಾದ ವಸ್ತ್ರಗಳನ್ನು ಧರಿಸಿಕೊಂಡೆ. ನನ್ನ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡೆ.
4 ನಾನು ಯೆಹೋವನಾದ ನನ್ನ ದೇವರನ್ನು ಪ್ರಾರ್ಥಿಸಿದೆ. ನಾನು ನನ್ನ ಎಲ್ಲ ಪಾಪಗಳ ಬಗ್ಗೆ ಆತನಿಗೆ ಹೇಳಿದೆ. ನಾನು, “ಯೆಹೋವನೇ, ನೀನು ಭಯಂಕರನಾಗಿರುವೆ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ, ಮಾಡಿದ ಪ್ರೀತಿಯ ಮತ್ತು ಕರುಣೆಯ ವಾಗ್ದಾನಗಳನ್ನು ನೀನು ನೆರವೇರಿಸುವೆ.
5 “ಆದರೆ ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ತಪ್ಪುಗಳನ್ನು ಮಾಡಿದ್ದೇವೆ. ನಾವು ನಿನಗೆ ವಿರೋಧವಾಗಿ ದಂಗೆ ಎದ್ದಿದ್ದೇವೆ. ನಾವು ನಿನ್ನ ಆಜ್ಞೆಗಳನ್ನು ಮತ್ತು ಸರಿಯಾದ ನಿರ್ಣಯಗಳನ್ನು ತೊರೆದಿದ್ದೇವೆ.
6 ಪ್ರವಾದಿಗಳು ಹೇಳಿದ್ದನ್ನು ನಾವು ಕೇಳಲಿಲ್ಲ. ಅವರು ನಿನ್ನ ಸೇವಕರಾಗಿದ್ದರು. ಪ್ರವಾದಿಗಳು ನಿನ್ನ ಪರವಾಗಿ ಹೇಳಿದರು. ಅವರು ನಮ್ಮ ರಾಜರುಗಳಿಗೆ, ನಮ್ಮ ನಾಯಕರುಗಳಿಗೆ ಮತ್ತು ನಮ್ಮ ಹಿರಿಯರಿಗೆ ಹೇಳಿದರು. ಅವರು ಇಸ್ರೇಲಿನ ಎಲ್ಲ ಜನರಿಗೆ ಹೇಳಿದರು. ಆದರೆ ನಾವು ಪ್ರವಾದಿಗಳ ಮಾತಿಗೆ ಕಿವಿಗೊಡಲಿಲ್ಲ.
7 “ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿ ಬಿಟ್ಟಿರುವೆ. ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕಾರ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.
8 “ಯೆಹೋವನೇ, ನಾವೆಲ್ಲರೂ ನಾಚಿಕೆಪಡಬೇಕು. ನಮ್ಮ ಎಲ್ಲ ರಾಜರು, ನಾಯಕರು ನಾಚಿಕೆಪಟ್ಟುಕೊಳ್ಳಬೇಕು. ನಮ್ಮ ಹಿರಿಯರು ನಾಚಿಕೆಪಡಬೇಕು. ಏಕೆಂದರೆ ನಾವು ನಿನ್ನ ವಿಷಯದಲ್ಲಿ ಪಾಪ ಮಾಡಿದ್ದೇವೆ.
9 This verse may not be a part of this translation
10 ನಾವು ನಮ್ಮ ದೇವರಾದ ಯೆಹೋವನ ಆಜ್ಞಾಪಾಲನೆ ಮಾಡಿಲ್ಲ. ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ ಕಟ್ಟಳೆಗಳನ್ನು ತಿಳಿಸಿದನು. ಆದರೆ ನಾವು ಕಟ್ಟಳೆಗಳನ್ನು ಪಾಲಿಸಲಿಲ್ಲ.
11 ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.
12 “ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಮತ್ತಾವ ನಗರಕ್ಕೂ ಆಗಿಲ್ಲ.
13 ಎಲ್ಲ ಕೇಡುಗಳು ನಮಗೆ ಉಂಟಾದವು. ಇದೆಲ್ಲಾ ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿದಂತೆಯೇ ನಡೆದುಹೋಯಿತು. ಆದರೆ ಈವರೆಗೂ ನಾವು ನಿನ್ನ ಸಹಾಯವನ್ನು ಕೇಳಲಿಲ್ಲ. ಇಂದಿಗೂ ನಾವು ಪಾಪ ಮಾಡುವದನ್ನು ನಿಲ್ಲಿಸಲಿಲ್ಲ. ಯೆಹೋವನೇ, ಇನ್ನೂ ನಾವು ನಿನ್ನ ಸತ್ಯೋಪದೇಶದ ಕಡೆಗೆ ಗಮನ ಕೊಡುತ್ತಿಲ್ಲ.
14 ಯೆಹೋವನಾದ ನೀನು ನಮಗೆ ಆಪತ್ತುಗಳನ್ನು ಸಿದ್ಧಪಡಿಸಿಟ್ಟಿದ್ದೆ. ಆಪತ್ತುಗಳು ನಮ್ಮ ಮೇಲೆ ಬರುವಂತೆ ನೀನು ಮಾಡಿದೆ. ಯೆಹೋವನಾದ ನೀನು ಎಲ್ಲವನ್ನು ನಿಷ್ಪಕ್ಷಪಾತವಾಗಿ ಮಾಡುವೆ. ಆದ್ದರಿಂದಲೇ ಇದೆಲ್ಲವನ್ನು ಮಾಡಿದೆ. ಆದರೆ ಇಂದಿಗೂ ನಾವು ನಿನ್ನ ಉಪದೇಶಕ್ಕೆ ಕಿವಿಗೊಟ್ಟಿಲ್ಲ.
15 “ನಮ್ಮ ದೇವರಾದ ಯೆಹೋವನೇ, ನೀನು ನಿನ್ನ ಶಕ್ತಿಯಿಂದ ನಮ್ಮನ್ನು ಈಜಿಪ್ಟಿನಿಂದ ಹೊರಗೆ ತೆಗೆದುಕೊಂಡು ಬಂದೆ. ನಾವು ನಿನ್ನ ಜನರಾಗಿದ್ದೇವೆ. ನೀನು ಕರುಣೆ ತೋರುವುದರಲ್ಲಿ ಇಂದಿಗೂ ಸುಪ್ರಸಿದ್ಧನಾಗಿರುವೆ. ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ಬಹಳ ಹೀನ ಕಾರ್ಯಗಳನ್ನು ಮಾಡಿದ್ದೇವೆ.
16 ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ತಾಳುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದುದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.
17 “ಯೆಹೋವನೇ, ನಿನ್ನ ಸೇವಕನಾದ ನನ್ನ ಪ್ರಾರ್ಥನೆಯನ್ನು ಕೇಳು. ಸಹಾಯ ಕೋರಿ ಮಾಡುವ ನನ್ನ ಪ್ರಾರ್ಥನೆಯನ್ನು ಲಾಲಿಸು. ನಿನ್ನ ಪವಿತ್ರ ಸ್ಥಳಕ್ಕಾಗಿ ಒಳ್ಳೆಯದನ್ನು ಮಾಡು. ಕಟ್ಟಡವನ್ನು ನಾಶಮಾಡಲಾಗಿದೆ. ಯೆಹೋವನೇ, ಒಳ್ಳೆಯ ಕಾರ್ಯಗಳನ್ನು ನಿನ್ನ ಹಿತಕ್ಕಾಗಿ ಮಾಡು.
18 ನನ್ನ ದೇವರೆ, ನನ್ನ ಪ್ರಾರ್ಥನೆಯನ್ನು ಕೇಳು. ನಿನ್ನ ಕಣ್ಣುಗಳನ್ನು ತೆರೆದು ನಮಗಾದ ಎಲ್ಲ ಕೇಡನ್ನು ನೋಡು. ನಿನ್ನ ಹೆಸರುಳ್ಳ ಪಟ್ಟಣದ ಗತಿ ಏನಾಗಿದೆ ನೋಡು. ನಾವು ಒಳ್ಳೆಯ ಜನರೆಂದು ನಾನು ಹೇಳುತ್ತಿಲ್ಲ. ನಾವು ಒಳ್ಳೆಯ ಜನರೆಂದು ಇದೆಲ್ಲವನ್ನು ಕೇಳುತ್ತಿಲ್ಲ. ನೀನು ಕರುಣಾಮಯನಾಗಿರುವುದರಿಂದಲೇ ಇದನ್ನೆಲ್ಲ ಕೇಳುತ್ತಿದ್ದೇನೆ.
19 ಯೆಹೋವನೇ, ನನ್ನ ಮೊರೆಯನ್ನು ಕೇಳು. ಯೆಹೋವನೇ, ನಮ್ಮನ್ನು ಕ್ಷಮಿಸು. ಯೆಹೋವನೇ, ನಮ್ಮ ಕಡೆಗೆ ಗಮನ ನೀಡಿ ಸಹಾಯಮಾಡು. ತಡಮಾಡದೆ ಬೇಗನ್ನೋ ದೇವಭಕ್ತರನ್ನೂ ನಾಶಮಾಡುವನು. ಾರ ವಿನಾಶವನ್ನುಂಟು ಮಾಡುವನು. ಅವನು ಕೈಕೊಂಡ ಪ್ರತಿಯೊಂದು ಕೆಲಸದಲ್ಲಿ ಸಹಾಯ ಮಾಡು. ನಿನ್ನ ಮಹಿಮೆಗಾಗಿಯೇ ಸಹಾಯಮಾಡು. ನನ್ನ ದೇವರೇ, ನಿನ್ನ ಹೆಸರಿನಿಂದ ಕರೆಯಲ್ಪಡುವ ನಿನ್ನ ನಗರಕ್ಕಾಗಿಯೂ ನಿನ್ನ ಜನರಿಗಾಗಿಯೂ ಈಗಲೇ ಸಹಾಯಮಾಡು” ಎಂದು ಪ್ರಾರ್ಥಿಸಿದೆನು.
20 ನಾನು ಪ್ರಾರ್ಥನೆಯಲ್ಲಿ ನನ್ನ ಪಾಪಗಳ ಬಗ್ಗೆ ಮತ್ತು ಇಸ್ರೇಲರ ಪಾಪಗಳ ಬಗ್ಗೆ ಹೇಳಿಕೊಂಡೆ. ನಾನು ನನ್ನ ದೇವರಾದ ಯೆಹೋವನ ಪವಿತ್ರ ಪರ್ವತಕ್ಕಾಗಿ ಪ್ರಾರ್ಥನೆ ಮಾಡುತ್ತಿದ್ದೆ.
21 ನಾನು ಪ್ರಾರ್ಥಿಸುತ್ತಿದ್ದಾಗ ಗಬ್ರಿಯೇಲನೆಂಬ ಪುರುಷನು ನನ್ನಲ್ಲಿಗೆ ಬಂದನು. ಗಬ್ರಿಯೇಲನನ್ನೇ ನಾನು ದರ್ಶನದಲ್ಲಿ ಕಂಡಿದ್ದೆನು. ಗಬ್ರಿಯೇಲನು ವೇಗವಾಗಿ ಹಾರುತ್ತಾ ಸಾಯಂಕಾಲದ ನೈವೇದ್ಯದ ಸಮಯದಲ್ಲಿ ನನ್ನ ಬಳಿಗೆ ಬಂದನು.
22 ನಾನು ತಿಳಿದುಕೊಳ್ಳಬಯಸಿದ ವಿಷಯಗಳನ್ನು ತಿಳಿದುಕೊಳ್ಳಲು ಗಬ್ರಿಯೇಲನು ನನಗೆ ಸಹಾಯ ಮಾಡಿದನು. ಗಬ್ರಿಯೇಲನು, “ದಾನಿಯೇಲನೇ, ನಾನು ನಿನಗೆ ಜ್ಞಾನವನ್ನು ಕೊಡಲು ಮತ್ತು ಅರ್ಥ ಮಾಡಿಕೊಳ್ಳಲು ನಿನಗೆ ಸಹಾಯ ಮಾಡಲು ಬಂದಿದ್ದೇನೆ.
23 ನೀನು ಪ್ರಾರ್ಥಿಸಲು ಪ್ರಾರಂಭಿಸಿದಾಗಲೇ ನನಗೆ ದೇವರ ಆಜ್ಞೆಯಾಯಿತು. ನಾನು ಅದನ್ನು ನಿನಗೆ ತಿಳಿಸಲು ಬಂದಿರುವೆನು. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನೀನು ದೈವಾಜ್ಞೆಯನ್ನು ಅರಿತುಕೊಳ್ಳುವೆ ಮತ್ತು ದರ್ಶನದ ಅರ್ಥವನ್ನು ತಿಳಿದುಕೊಳ್ಳುವೆ.
24 “ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆ ಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.
25 “ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.
26 ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು. ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.
27 “ಆಗ ಭವಿಷ್ಯತ್ತಿನ ನಾಯಕನು ಬಹುಜನರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಒಪ್ಪಂದ ಒಂದು ವಾರದವರೆಗೆ ಮುಂದುವರೆಯುವದು. ಅರ್ಧವಾರದವರೆಗೆ ಯಜ್ಞ ಮತ್ತು ನೈವೇದ್ಯಗಳನ್ನು ನಿಲ್ಲಿಸಲಾಗುವುದು. ಒಬ್ಬ ಘಾತುಕನು ಬರುವನು. ಅವನು ಬಹುವಿನಾಶಕಾರಿ ಕೆಲಸಗಳನ್ನು ಮಾಡುವನು. ಆದರೆ ಘಾತುಕನನ್ನು ಮುಗಿಸಿಬಿಡಬೇಕೆಂದು ದೇವರ ಆಜ್ಞೆಯಾಗಿದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×