Bible Versions
Bible Books

Habakkuk 3 (ERVKN) Easy to Read Version - Kannadam

1 ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ:
2 ಯೆಹೋವನೇ, ನಾನು ನಿನ್ನ ವಿಚಾರ ಕೇಳಿದೆನು. ಯೆಹೋವನೇ, ನೀನು ಹಿಂದಿನ ಕಾಲದಲ್ಲಿ ಮಾಡಿದ ಮಹತ್ಕಾರ್ಯಗಳು ನನ್ನನ್ನು ಚಕಿತಗೊಳಿಸಿದೆ. ನಮ್ಮ ಕಾಲದಲ್ಲಿಯೂ ಮಹಾಕಾರ್ಯಗಳನ್ನು ಮಾಡಬೇಕೆಂದು ಪ್ರಾರ್ಥಿಸುತ್ತೇನೆ. ದಯಮಾಡಿ, ಘಟನೆಗಳು ನಮ್ಮ ದಿವಸಗಳಲ್ಲೂ ನೆರವೇರುವಂತೆ ಮಾಡು. ಅದರ ಜೊತೆಯಲ್ಲಿ ನಮ್ಮ ಮೇಲೆ ಕರುಣೆ ತೋರಿಸಲು ಮರೆಯಬೇಡ.
3 ತೇಮಾನಿನಿಂದ ಯೆಹೋವನು ಬರುತ್ತಿದ್ದಾನೆ. ಪರಿಶುದ್ಧನಾದವನು ಪಾರಾನ್ ಪರ್ವತದಿಂದ ಬರುತ್ತಿದ್ದಾನೆ. ಯೆಹೋವನ ಮಹಿಮೆಯು ಆಕಾಶಮಂಡಲವನ್ನು ಮುಚ್ಚುತ್ತದೆ. ಅವನ ಸ್ತೋತ್ರವು ಭೂಲೋಕವನ್ನು ತುಂಬುತ್ತದೆ.
4 ಬೆಳಕಿನ ಕಿರಣಗಳು ಆತನ ಕೈಯಿಂದ ಹೊಳೆಯುತ್ತದೆ. ಅದು ಹೊಳೆಯುವಂಥ ಪ್ರಕಾಶಮಾನವಾದ ಹೊಳಪು. ಕೈಗಳಲ್ಲಿ ಅಂಥಾ ಶಕ್ತಿಯು ಅಡಕವಾಗಿದೆ.
5 ರೋಗವು ಆತನ ಮುಂದಿನಿಂದ ಹೋಗುತ್ತಿದೆ. ನಾಶಕನು ಆತನನ್ನು ಹಿಂಬಾಲಿಸುತ್ತಿದ್ದಾನೆ.
6 ಯೆಹೋವನು ನಿಂತು ಪ್ರಪಂಚದ ನ್ಯಾಯ ತೀರಿಸಿದನು. ಎಲ್ಲಾ ಜನಾಂಗಗಳ ಜನರ ಕಡೆಗೆ ನೋಡಿದನು. ಅವರು ಭಯದಿಂದ ನಡುಗಿದರು. ತಲಾಂತರಗಳಿಂದ ಪರ್ವತಗಳು ಸ್ಥಿರವಾಗಿ ನಿಂತಿದ್ದವು. ಆದರೆ ಅದೇ ಪರ್ವತಗಳು ತುಂಡುತುಂಡಾಗಿ ಬಿದ್ದವು. ಪುರಾತನ ಕಾಲದ ಬೆಟ್ಟಗಳು ಬಿದ್ದುಹೋದವು. ದೇವರು ಅದೇ ರೀತಿಯಾಗಿ ಯಾವಾಗಲೂ ಇದ್ದನು.
7 ಕೂಷಾನಿನ ನಗರಗಳು ಸಂಕಟದಲ್ಲಿರುವುದನ್ನು ಕಂಡೆನು. ಮಿದ್ಯಾನಿನ ಮನೆಗಳು ಹೆದರಿ ನಡುಗುತ್ತಿದ್ದವು.
8 ಯೆಹೋವನೇ, ನೀನು ನದಿಗಳ ಮೇಲೆ ಕೋಪಗೊಂಡಿದ್ದೀಯೋ? ತೊರೆಗಳ ಮೇಲೆ ನೀನು ಕೋಪಗೊಂಡಿದ್ದೀಯೋ? ಸಮುದ್ರದ ಮೇಲೆ ನೀನು ಕೋಪಗೊಂಡಿದ್ದೀಯೋ? ನೀನು ನಿನ್ನ ಕುದುರೆಗಳ ಮೇಲೆ ಮತ್ತು ರಥಗಳ ಮೇಲೆ ಸವಾರಿ ಮಾಡಿದಾಗ ಕೋಪಗೊಂಡಿದ್ದೀಯೋ?
9 This verse may not be a part of this translation
10 ಪರ್ವತಗಳು ನಿನ್ನನ್ನು ನೋಡಿ ನಡುಗಿದವು. ನೆಲದ ಮೇಲಿಂದ ನೀರು ಹರಿದುಹೋಯಿತು. ಭೂಮಿಯ ಮೇಲೆ ತನಗಿದ್ದ ಶಕ್ತಿ ಹೋದುದ್ದನ್ನು ನೋಡಿ ಸಮುದ್ರವು ಗಟ್ಟಿಯಾಗಿ ಶಬ್ದ ಮಾಡಿತು.
11 ಸೂರ್ಯಚಂದ್ರರು ತಮ್ಮ ಪ್ರಕಾಶವನ್ನು ಕಳಕೊಂಡವು. ನಿನ್ನ ಹೊಳೆಯುವ ಮಿಂಚುಗಳನ್ನು ನೋಡಿ ಅವು ಪ್ರಕಾಶಿಸುವದನ್ನು ನಿಲ್ಲಿಸಿದವು. ಮಿಂಚುಗಳು ಗಾಳಿಯಲ್ಲಿ ತೂರಿಬರುವ ಭರ್ಜಿ, ಬಾಣಗಳಂತಿದ್ದವು.
12 “ಸಿಟ್ಟಿನಿಂದ ನೀನು ಭೂಮಿಯ ಮೇಲೆ ನಡೆದೆ. ಮತ್ತು ಜನಾಂಗಗಳನ್ನು ಶಿಕ್ಷಿಸಿದೆ.
13 ನಿನ್ನ ಜನರನ್ನು ರಕ್ಷಿಸಲು ನೀನು ಬಂದೆ. ನೀನು ಆರಿಸಿದ್ದ ರಾಜನನ್ನು ಜಯದ ಕಡೆಗೆ ನಡಿಸುವುದಕ್ಕಾಗಿ ಬಂದೆ. ಪ್ರತೀ ದುಷ್ಟ ಕುಟುಂಬದ ನಾಯಕನನ್ನು ನೀನು ಸಂಹರಿಸಿದೆ. ಭೂಲೋಕದಲ್ಲಿದ್ದ ಪ್ರಮುಖನಿಂದಿಡಿದು ಪ್ರಮುಖನಲ್ಲದವನವರೆಗೂ ನೀನು ಹತಿಸಿದೆ.
14 ವೈರಿಗಳ ಸೈನ್ಯವನ್ನು ಮೋಶೆಯ ಕೋಲಿನಿಂದ ನಿಲ್ಲಿಸಿದೆ. ಸೈನಿಕರು ಬಿರುಗಾಳಿಯಂತೆ ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ರಸ್ತೆಯ ಮೇಲೆ ಇದ್ದ ಒಬ್ಬ ಬಡ ಮನುಷ್ಯನನ್ನು ದೋಚಿದ ಪ್ರಕಾರ ನಮ್ಮನ್ನು ಸುಲಭದಲ್ಲಿ ಗೆಲ್ಲುವೆವೆಂದು ಅವರು ನೆನೆಸಿದ್ದರು.
15 ಆದರೆ ನೀನು ನಿನ್ನ ಕುದುರೆಗಳನ್ನು ಸಮುದ್ರದೊಳಗಿಂತ ನಡಿಸಿದಿ. ಅವುಗಳು ಮಹಾ ಸಮುದ್ರವನ್ನು ಕದಡಿಬಿಟ್ಟವು.
16 ವಿಷಯವನ್ನು ಕೇಳಿದಾಗ ನನ್ನ ಶರೀರವೆಲ್ಲಾ ನಡುಗಿತು. ಆಶ್ಟರ್ಯದಿಂದ ನಾನು ಸಿಳ್ಳುಹಾಕಿದೆ. ನನ್ನ ಎಲುಬುಗಳ ಬಲಹೀನತೆಯಿಂದ ನಾನು ನಡುಗುವವನಾಗಿ ನಿಂತೆನು. ಅವರು ಜನರ ಮೇಲೆ ಬೀಳಲು ಬರುವಾಗ ನಾನು ಅವರು ನಾಶನದ ದಿವಸವನ್ನು ಎದುರು ನೋಡುತ್ತಿದ್ದೇನೆ.
17 ಅಂಜೂರದ ಮರಗಳಲ್ಲಿ ಅಂಜೂರದ ಹಣ್ಣು ಬೆಳೆಯದಿದ್ದರೂ ದ್ರಾಕ್ಷಿಹಣ್ಣುಗಳು ಬಳ್ಳಿಗಳಲ್ಲಿ ಬೆಳೆಯದಿದ್ದರೂ ಎಣ್ಣೇ ಮರಗಳಲ್ಲಿ ಆಲೀವ್ ಕಾಯಿಗಳು ಬೆಳೆಯದಿದ್ದರೂ ಹೊಲದಲ್ಲಿ ಪೈರು ಬೆಳೆಯದಿದ್ದರೂ ಹಟ್ಟಿಯಲ್ಲಿ ಕುರಿಗಳು ಯಾವುದೂ ಇಲ್ಲದಿದ್ದರೂ ಕೊಟ್ಟಿಗೆಯೊಳಗೆ ಪಶುಗಳು ಯಾವದೂ ಇಲ್ಲದಿದ್ದರೂ
18 ನಾನು ಯೆಹೋವನಲ್ಲಿ ಸಂತೋಷಿಸುವೆನು. ನನ್ನ ರಕ್ಷಕನಾದ ದೇವರಲ್ಲಿ ಸಂತೋಷಪಡುವೆನು.
19 ನನ್ನ ಒಡೆಯನಾದ ಯೆಹೋವನು ನನಗೆ ಬಲವನ್ನು ಕೊಡುವನು. ಜಿಂಕೆಯಂತೆ ವೇಗವಾಗಿ ಓಡಲು ನನಗೆ ಸಹಾಯ ಮಾಡುವನು. ಪರ್ವತಗಳಲ್ಲಿ ನನ್ನನ್ನು ಸುರಕ್ಷಿತವಾಗಿ ನಡಿಸುವನು. ಸಂಗೀತ ನಿರ್ದೇಶಕನಿಗೆ. ತಂತಿವಾದ್ಯಗಳಿಂದ ಹಾಡತಕ್ಕದ್ದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×