Bible Versions
Bible Books

Hosea 8 (ERVKN) Easy to Read Version - Kannadam

1 “ಯೆಹೋವನಾಲಯದ ಕಾವಲುಗಾರನಂತೆ ತುತ್ತೂರಿಯನ್ನು ತುಟಿಗಳಲ್ಲಿಟ್ಟು ಊದು. ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ ಒಡಂಬಡಿಕೆಯನ್ನು ಮುರಿದಿದ್ದಾರೆ.
2 ನಮ್ಮ ದೇವರೇ, ಇಸ್ರೇಲಿನಲ್ಲಿರುವ ನಾವು ನಿನ್ನನ್ನು ಅರಿತಿದ್ದೇವೆ’ ಎಂದು ಅವರು ಕಿರುಚುವರು.
3 ಆದರೆ ಇಸ್ರೇಲ್ ಒಳ್ಳೇದನ್ನು ನಿರಾಕರಿಸಿತು. ಆದುದರಿಂದ ಶತ್ರುಗಳು ಅವರನ್ನು ಓಡಿಸಿದರು.
4 ಇಸ್ರೇಲರು ತಮಗಾಗಿ ಅರಸನನ್ನು ಆರಿಸಿಕೊಂಡರು. ಆದರೆ ಸಲಹೆಗಳಿಗಾಗಿ ನನ್ನ ಬಳಿಗೆ ಬರಲಿಲ್ಲ. ಇಸ್ರೇಲರು ತಮ್ಮ ನಾಯಕರನ್ನು ಆರಿಸಿಕೊಂಡರು. ಆದರೆ ನಾನು ತಿಳಿದಿರುವ ನಾಯಕರನ್ನು ಆರಿಸಿಕೊಳ್ಳಲಿಲ್ಲ. ಇಸ್ರೇಲರು ತಮಗೆ ವಿಗ್ರಹಗಳನ್ನು ತಯಾರಿಸಲು ತಮ್ಮ ಬೆಳ್ಳಿಬಂಗಾರವನ್ನು ಉಪಯೋಗಿಸಿದರು. ಆದುದರಿಂದ ಅವರು ನಾಶವಾಗುವರು.
5 This verse may not be a part of this translation
6 This verse may not be a part of this translation
7 ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.
8 ಇಸ್ರೇಲ್ ನಾಶವಾಯಿತು. ಅವರು ಯಾರಿಗೂ ಬೇಡವಾದ ಪಾತ್ರೆಯನ್ನು ಬಿಸಾಡಿದಂತೆ ಜನಾಂಗಗಳ ಮಧ್ಯದಲ್ಲಿ ಚದರಿಸಲ್ಪಟ್ಟರು.
9 ಎಫ್ರಾಯೀಮನು ತನ್ನ ಪ್ರೇಮಿಗಳ ಬಳಿಗೆ ಹೋದನು. ಕಾಡುಕತ್ತೆಯಂತೆ ಅಶ್ಶೂರ್ಯದ ಕಡೆಗೆ ಅಡ್ಡಾಡುತ್ತಾ ಹೋದನು.
10 ಜನಾಂಗಗಳ ಮಧ್ಯೆ ಇರುವ ತನ್ನ ಪ್ರೇಮಿಗಳ ಕಡೆಗೆ ಇಸ್ರೇಲು ಹೋದನು. ಆದರೆ ನಾನು ಇಸ್ರೇಲರನ್ನು ಒಟ್ಟು ಸೇರಿಸುವೆನು. ಆದರೆ ಅದರ ಮೊದಲು ಬಲಿಷ್ಠ ರಾಜನ ಕೈಯಿಂದ ಅವರ ಸಂಕಟ ಅನುಭವಿಸಬೇಕು.
11 ಎಫ್ರಾಯೀಮ್ ಹೆಚ್ಚೆಚ್ಚಾಗಿ ಯಜ್ಞವೇದಿಕೆಗಳನ್ನು ಕಟ್ಟಿಸಿದನು. ಅದು ಪಾಪವಾಗಿತ್ತು. ವೇದಿಕೆಗಳ ಮೇಲೆಯೇ ಅವರು ಪಾಪಮಾಡಿದರು.
12 ಎಫ್ರಾಯೀಮನಿಗೆ ನಾನು ಹತ್ತು ಸಾವಿರ ವಿಧಿನಿಯಮಗಳನ್ನು ಬರೆದರೂ ಅವನು ಅವುಗಳನ್ನು ಬೇರೆಯವರಿಗಾಗಿ ಬರೆದದೆ ಎಂದು ತಿಳಿದುಕೊಳ್ಳುವನು.
13 ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.
14 ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು. ಆದರೆ ಅದರ ನಿರ್ಮಾಣಿಕನನ್ನು ಮರೆತರು. ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ; ಆದರೆ ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿಯನ್ನು ಕಳುಹಿಸುವೆನು. ಬೆಂಕಿಯು ಅರಮನೆಗಳನ್ನು ನಾಶಮಾಡುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×