Bible Versions
Bible Books

Isaiah 12 (ERVKN) Easy to Read Version - Kannadam

1 ಸಮಯದಲ್ಲಿ ನೀನು ಹೀಗನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.”
2 ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದುದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.
3 ರಕ್ಷಣೆಯೆಂಬ ಬುಗ್ಗೆಯಿಂದ ನೀರನ್ನು ತೆಗೆದುಕೋ. ಆಗ ನೀನು ಸಂತೋಷಗೊಳ್ಳುವೆ.
4 ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನ ಹೆಸರಿನ ಮಹತ್ವವನ್ನು ವರ್ಣಿಸಿರಿ! ಆತನು ಜನಾಂಗಗಳಲ್ಲಿ ಮಾಡಿದ ಕಾರ್ಯಗಳನ್ನು ಸಾರಿರಿ. ಆತನ ಹೆಸರು ಮಹೋನ್ನತವೆಂದು ಜ್ಞಾಪಕಪಡಿಸಿರಿ!” ಎಂದು ಹೇಳುವೆ.
5 ಯೆಹೋವನಿಗೆ ಸ್ತೋತ್ರಗಾನ ಹಾಡಿರಿ. ಯಾಕೆಂದರೆ ಆತನು ಮಹಾಕೃತ್ಯಗಳನ್ನು ನಡಿಸಿದ್ದಾನೆ. ದೇವರ ಬಗ್ಗೆ ಎಲ್ಲರಿಗೂ ಪ್ರಕಟಿಸಿರಿ. ಇಡೀ ಲೋಕಕ್ಕೆ ಸಾರಿರಿ. ಎಲ್ಲಾ ಜನರು ಇದನ್ನು ತಿಳಿಯಲಿ.
6 ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದುದರಿಂದ ಹರ್ಷಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×