Bible Versions
Bible Books

Isaiah 37 (ERVKN) Easy to Read Version - Kannadam

1 ಅರಸನಾದ ಹಿಜ್ಕೀಯನು ಎಲ್ಲಾ ವಿಷಯಗಳನ್ನು ಕೇಳಿ ಮನಸ್ಸಿನಲ್ಲಿ ಬಹಳ ದುಃಖಪಟ್ಟು ತನ್ನ ಬಟ್ಟೆಗಳನ್ನು ಹರಿದುಕೊಂಡನು. ತರುವಾಯ ಶೋಕವಸ್ತ್ರವನ್ನು ಧರಿಸಿ ದೇವಾಲಯದೊಳಕ್ಕೆ ಹೋದನು.
2 ಹಿಜ್ಕೀಯನು ಅರಮನೆಯ ಅಡಳಿತಗಾರನಾದ ಎಲ್ಯಾಕೀಮನನ್ನು, ಕಾರ್ಯದರ್ಶಿಯಾದ ಶೆಬ್ನನನ್ನು ಯಾಜಕರ ಹಿರಿಯರೊಂದಿಗೆ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಕಳುಹಿಸಿದನು. ಇವರು ತಮ್ಮ ಮನಸ್ಸಿನ ದುಗುಡವನ್ನು ಪ್ರದರ್ಶಿಸುವಂತೆ ಶೋಕವಸ್ತ್ರಗಳನ್ನು ಧರಿಸಿದ್ದರು.
3 ಇವರು ಯೆಶಾಯನಿಗೆ, “ಅರಸನಾದ ಹಿಜ್ಕೀಯನು ದಿವಸವನ್ನು ಶೋಕದ ದಿವಸವನ್ನಾಗಿ ಘೋಷಿಸಿದ್ದಾನೆ. ಇದು ದುಃಖದ ಸಮಯವಾಗಿದೆ. ಇದು ದಿನತುಂಬಿ ತಾಯಿಯ ಹೊಟ್ಟೆಯೊಳಗಿಂದ ಹೊರಬರಲು ಶಕ್ತವಾಗಿಲ್ಲದ ಕೂಸಿನಂತಿದೆ.
4 ಅಶ್ಶೂರದ ಅರಸನು ತನ್ನ ಸೇನಾದಂಡನಾಯಕನ ನಮ್ಮ ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟಮಾತುಗಳನ್ನು ಹೇಳಲು ಕಳುಹಿಸಿರುತ್ತಾನೆ. ನಿನ್ನ ದೇವರಾದ ಯೆಹೋವನು ಇದನ್ನೆಲ್ಲಾ ಕೇಳಿರುವನು. ವೈರಿಗಳು ನುಡಿದ ಮಾತುಗಳು ಸತ್ಯವಾದವುಗಳಲ್ಲ ಎಂಬದನ್ನು ಆತನು ತೋರಿಸುವನು. ಆದುದರಿಂದ ಇನ್ನೂ ಜೀವದಿಂದ ಉಳಿದಿರುವವರಿಗಾಗಿ ಪ್ರಾರ್ಥಿಸು” ಎಂದು ಹಿಜ್ಜೀಯನು ಹೇಳಿದ್ದಾನೆ ಅಂದರು.
5 This verse may not be a part of this translation
6 This verse may not be a part of this translation
7 ಇಗೋ, ನಾನು ಒಂದು ಆತ್ಮವನ್ನು ಅಶ್ಶೂರದ ವಿರುದ್ಧವಾಗಿ ಕಳುಹಿಸುತ್ತೇನೆ. ದೇಶಕ್ಕೆ ಬರಲಿರುವ ಅಪಾಯದ ಬಗ್ಗ ಎಚ್ಚರಿಕೆಯ ವರದಿಯು ರಾಜನಿಗೆ ಬರುತ್ತದೆ. ಅದನ್ನು ಕೇಳಿ ಅವನು ತನ್ನ ದೇಶಕ್ಕೆ ಹಿಂದಿರುಗುವನು. ಆಗ ಅವನ ದೇಶದಲ್ಲಿಯೇ ನಾನು ಅವನನ್ನು ಖಡ್ಗದಿಂದ ಸಂಹರಿಸುವೆನು.’“ ಎಂದು ಹೇಳಿದನು.
8 This verse may not be a part of this translation
9 This verse may not be a part of this translation
10 “ಯೆಹೂದದ ಅರಸನಾದ ಹಿಜ್ಕೀಯನಿಗೆ ನೀವು ಹೀಗೆ ಹೇಳಬೇಕು: ‘ನೀನು ನಂಬುವ ದೇವರಿಂದ ನೀನು ಮೋಸ ಹೋಗಬೇಡ. “ಜೆರುಸಲೇಮ್ ಅಶ್ಶೂರದ ಅರಸನ ಕೈಯಿಂದ ಸೋಲಿಸಲ್ಪಡಲು ದೇವರು ಅವಕಾಶ ಕೊಡುವುದಿಲ್ಲ” ಎಂದು ಹೇಳಬೇಡ.
11 ಅಶ್ಶೂರದ ಅರಸರು ಬೇರೆ ಎಲ್ಲಾ ದೇಶಗಳವರಿಗೆ ಏನು ಮಾಡಿದ್ದಾರೆಂದು ನೀವು ಕೇಳಿದ್ದೀರಿ. ಅವರು ಸಂಪೂರ್ಣವಾಗಿ ತಮ್ಮ ವೈರಿಗಳನ್ನು ನಾಶಮಾಡಿದರು. ನೀವು ರಕ್ಷಿಸಲ್ಪಡುವಿರಾ? ಇಲ್ಲ!
12 ವರ ದೇವರುಗಳು ಅವರನ್ನು ರಕ್ಷಿಸಿದರೋ? ಇಲ್ಲ! ನನ್ನ ಪೂರ್ವಿಕರು ಅವರನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್‌ನಲ್ಲಿ ವಾಸವಾಗಿದ್ದ ಎದೆನಿನ ಜನರನ್ನೂ ನಾಶಮಾಡಿದರು.
13 ಹಮಾತಿನ ಅರಸನೆಲ್ಲಿ? ಅರ್ಪಾದಿನ ಅರಸನೆಲ್ಲಿ? ಸೆಫರ್ವಯಿಮ್ ನಗರದ ಅರಸನೆಲ್ಲಿ? ಹೇನ, ಇವ್ವಾ ಎಂಬ ಪಟ್ಟಣಗಳ ಅರಸರೆಲ್ಲಿ? ಅವರೆಲ್ಲರೂ ಹತರಾಗಿದ್ದಾರೆ. ಎಲ್ಲಾ ನಾಶವಾಗಿ ಹೋದರು.
14 ಹಿಜ್ಕೀಯನು ದೂತರ ಕೈಗಳಿಂದ ಪತ್ರಗಳನ್ನು ತೆಗೆದುಕೊಂಡು ಓದಿದನು. ಅನಂತರ ನೇರವಾಗಿ ಯೆಹೋವನ ಆಲಯಕ್ಕೆ ಹೋಗಿ ಪತ್ರವನ್ನು ಯೆಹೋವನ ಮುಂದಿಟ್ಟನು.
15 ಹಿಜ್ಕೀಯನು ಯೆಹೋವನಿಗೆ ಪ್ರಾರ್ಥಿಸುತ್ತಾ ಹೇಳಿದ್ದೇನೆಂದರೆ:
16 ಇಸ್ರೇಲರ ದೇವರೇ, ಸರ್ವಶಕ್ತನಾದ ಯೆಹೋವನೇ, ನೀನು ಕೆರೂಬಿಯರ ರೆಕ್ಕೆಯ ಮೇಲೆ ಆಸೀನನಾಗಿರುವೆ. ಇಡೀ ಭೂಮಂಡಲದಲ್ಲಿರುವ ರಾಜ್ಯಗಳನ್ನೆಲ್ಲಾ ನೀನೇ ಆಳುವವನಾಗಿರುವೆ; ಹೌದು, ನೀನೊಬ್ಬನೇ ಆಳುವವನಾಗಿರುವೆ. ನೀನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುವೆ.
17 ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು ಪತ್ರವನ್ನು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ಅವಮಾನಮಾಡಿ ಬರೆದ ಪತ್ರವನ್ನು ಕೇಳಿಸಿಕೊ!
18 ಅಶ್ಶೂರದ ಅರಸರು ಎಲ್ಲಾ ಜನಾಂಗಗಳನ್ನು ನಾಶಮಾಡಿದ್ದು ನಿಜ.
19 ಅಶ್ಶೂರದ ಅರಸರು ಜನಾಂಗಗಳ ದೇವರುಗಳನ್ನು ಸುಟ್ಟುಹಾಕಿದರು. ಆದರೆ ದೇವರುಗಳು ಸತ್ಯವಾದುವುಗಳಲ್ಲ. ಅವುಗಳು ಮನುಷ್ಯರು ಕಲ್ಲಿನಿಂದ ಮತ್ತು ಮರದಿಂದ ಕೆತ್ತಿದ ವಿಗ್ರಹಗಳಾಗಿದ್ದವು. ಆದುದರಿಂದ ಅಶ್ಶೂರದ ಅರಸರು ಅವುಗಳನ್ನು ನಾಶಮಾಡಲು ಸಾಧ್ಯವಾಯಿತು.
20 ಆದರೆ ನೀನು ನಮ್ಮ ದೇವರಾದ ಯೆಹೋವನು. ಆದುದರಿಂದ ದಯಮಾಡಿ ನಮ್ಮನ್ನು ಅಶ್ಶೂರದ ಅರಸನ ಕೈಯಿಂದ ರಕ್ಷಿಸು. ಆಗ ಭೂಮಿಯ ಎಲ್ಲಾ ರಾಜ್ಯಗಳೂ ಯೆಹೋವನಾದ ನೀನೇ ದೇವರೆಂದು ತಿಳಿದುಕೊಳ್ಳುವವು.”
21 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಸಂದೇಶವನ್ನು ಕಳುಹಿಸಿದನು: “ಇಸ್ರೇಲರ ದೇವರಾದ ಯೆಹೋವನು ಹೇಳುವದೇನೆಂದರೆ: ‘ಅಶ್ಶೂರದ ಅರಸನಾದ ಸನ್ಹೇರೀಬನ ಪತ್ರದ ವಿಷಯವಾಗಿ ನೀನು ಪ್ರಾರ್ಥಿಸುವದನ್ನು ನಾನು ಕೇಳಿದೆನು.’
22 “ಸನ್ಹೇರೀಬನ ಕುರಿತು ಯೆಹೋವನ ಸಂದೇಶವಿದು: ‘ಅಶ್ಶೂರದ ಅರಸನೇ, ಚೀಯೋನಿನ ಕುಮಾರಿಯು ನಿನ್ನನ್ನು ಪ್ರಾಮುಖ್ಯವಾದವನೆಂದು ಎಣಿಸುವದಿಲ್ಲ. ಆಕೆ ನಿನ್ನನ್ನು ನೋಡಿ ಪರಿಹಾಸ್ಯ ಮಾಡುವಳು. ಜೆರುಸಲೇಮಿನ ಕುಮಾರಿಯು ನಿನ್ನ ಹಿಂದೆ ತಲೆಯಾಡಿಸುತ್ತಾ ನಿನ್ನನ್ನು ಹಾಸ್ಯ ಮಾಡುವಳು.
23 ನೀನು ಅವಮಾನಪಡಿಸಿ ಪರಿಹಾಸ್ಯ ಮಾಡಿ ವಿರೋಧವಾಗಿ ಮಾತಾಡಿದ್ದು ಯಾರಿಗೆ? ನೀನು ಇಸ್ರೇಲಿನ ಪರಿಶುದ್ಧನಿಗೆ ವಿರುದ್ಧವಾಗಿರುವೆ. ಆತನಿಗಿಂತ ನೀನೇ ಉತ್ತಮನೆಂಬ ರೀತಿಯಲ್ಲಿ ನೀನು ವರ್ತಿಸಿರುವೆ.
24 ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರಗಳನ್ನು ನಾನು ಏರಿದೆನು. ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿನೊಳಗೂ ಹೋಗಿದ್ದೇನೆ.
25 ನಾನು ಬಾವಿಗಳನ್ನು ತೋಡಿ ಹೊಸಹೊಸ ಸ್ಥಳದ ನೀರು ಕುಡಿದಿರುವೆನು. ಈಜಿಪ್ಟಿನ ನದಿಗಳನ್ನು ಬತ್ತಿಸಿ ದೇಶದಲ್ಲೆಲ್ಲಾ ಸಂಚರಿಸಿದೆನು” ಎಂದು ನೀನು ಹೇಳಿದೆ.
26 ಆದರೆ ದೇವರು ಏನು ಹೇಳುತ್ತಾನೆಂದು ಕೇಳಿದೆಯಾ? ‘ಬಹುಕಾಲದ ಹಿಂದೆ ನಾನು ಯೋಜನೆಯನ್ನು ಮಾಡಿದ್ದೆನು. ಪ್ರಾಚೀನ ಕಾಲದಿಂದ ಅದರ ವಿಷಯವಾಗಿ ಆಲೋಚನೆ ಮಾಡಿದ್ದೆನು. ಈಗ ಅದು ನೆರವೇರುವಂತೆ ಮಾಡಿದ್ದೇನೆ. ಬಲಿಷ್ಠವಾದ ನಗರಗಳನ್ನು ನಾಶಮಾಡಿ ಅವುಗಳನ್ನು ಕಲ್ಲಿನ ರಾಶಿಗಳನ್ನಾಗಿ ಮಾಡಲು ನಿನ್ನನ್ನು ಬಿಟ್ಟಿರುತ್ತೇನೆ.
27 ಪಟ್ಟಣಗಳಲ್ಲಿದ್ದ ಜನರು ನಿಸ್ಸಹಾಯಕರಾದರು ಮತ್ತು ಬಲಹೀನರಾದರು. ಅವರು ಹೆದರಿ ಗಲಿಬಿಲಿಗೊಂಡಿದ್ದರು. ಅವರು ಹೊಲದ ಹುಲ್ಲಿನಂತೆಯೂ ಸಸಿಗಳಂತೆಯೂ ಕಡಿದು ಹಾಕಲ್ಪಡಲಿದ್ದಾರೆ. ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದಾರೆ. ಅವು ಉದ್ದವಾಗಿ ಬೆಳೆಯುವ ಮೊದಲೇ ಸಾಯುವವು.
28 ನಿನ್ನ ಸೈನ್ಯದ ಬಗ್ಗೆಯೂ ನಿನ್ನ ಯುದ್ಧಗಳ ಬಗ್ಗೆಯೂ ನನಗೆ ಗೊತ್ತಿದೆ. ನೀನು ವಿಶ್ರಾಂತಿ ತೆಗೆದುಕೊಂಡದ್ದೂ ನನಗೆ ಗೊತ್ತಿದೆ. ನೀನು ಯುದ್ಧಕ್ಕೆ ಹೋದದ್ದೂ ನನಗೆ ಗೊತ್ತಿದೆ. ನೀನು ಯುದ್ಧದಿಂದ ಹಿಂತಿರುಗಿ ಮನೆಗೆ ಬಂದದ್ದೂ ನನಗೆ ಗೊತ್ತಿದೆ. ನೀನು ನನ್ನ ಮೇಲೆ ಕೋಪಗೊಂಡಿರುವುದೂ ನನಗೆ ಗೊತ್ತಿದೆ.
29 ಹೌದು, ನೀನು ನನ್ನ ವಿಷಯದಲ್ಲಿ ಕೋಪಗೊಂಡಿರುವೆ. ಗರ್ವದಿಂದ ತುಂಬಿದ ನಿನ್ನ ಪರಿಹಾಸ್ಯದ ಮಾತುಗಳನ್ನು ನಾನು ಕೇಳಿದ್ದೇನೆ. ನಾನು ನಿನ್ನ ಮೂಗಿಗೆ ಕೊಕ್ಕೆ ಸಿಕ್ಕಿಸಿ, ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ, ನೀನು ಎಲ್ಲಿಂದ ಬಂದಿದ್ದೆಯೋ ಅಲ್ಲಿಗೆ ನಿನ್ನನ್ನು ಹಿಂತಿರುಗಿಸುತ್ತೇನೆ.”‘
30 ಆಗ ಯೆಹೋವನು ಹಿಜ್ಕೀಯನಿಗೆ, “ಈ ಮಾತುಗಳೆಲ್ಲಾ ಸತ್ಯವೆಂಬುದಕ್ಕೆ ನಿನಗೊಂದು ಗುರುತನ್ನು ಕೊಡುತ್ತೇನೆ. ಬೀಜ ಬಿತ್ತಲು ನಿನಗೆ ಸಾಧ್ಯವಿರಲಿಲ್ಲ. ಆದುದರಿಂದ ವರ್ಷದಲ್ಲಿ ಕೂಳೆಬೆಳೆಯನ್ನೂ ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ನೀನು ಊಟಮಾಡುವೆ. ಆದರೆ ಮೂರನೆಯ ವರ್ಷದಲ್ಲಿ ನೀನೇ ಬಿತ್ತಿದ ಬೀಜದಲ್ಲಿ ಬೆಳೆದ ಬೆಳೆಯನ್ನು ಊಟಮಾಡುವೆ. ಬೆಳೆಯಿಂದ ನಿನಗೆ ಬೇಕಾದಷ್ಟು ಆಹಾರ ಸಂಗ್ರಹವಾಗುವದು. ನೀನು ದ್ರಾಕ್ಷಾಲತೆಗಳನ್ನು ನೆಟ್ಟು ಅದರ ಫಲಗಳನ್ನು ತಿನ್ನುವೆ.
31 “ಯೆಹೂದ ಕುಲದವರಲ್ಲಿ ತಪ್ಪಿಸಿಕೊಂಡು ಜೀವಂತವಾಗಿ ಉಳಿದವರು ಮತ್ತೆ ಅಭಿವೃದ್ಧಿಯಾಗುವರು. ತಮ್ಮ ಬೇರುಗಳನ್ನು ಆಳವಾಗಿ ಇಳಿಯಬಿಟ್ಟು ಹಣ್ಣುಗಳನ್ನು ಬಿಡುವ ಗಿಡಗಳಂತೆ ಅವರಿರುವರು.
32 ಯಾಕೆಂದರೆ ಸ್ವಲ್ಪಮಂದಿ ಮಾತ್ರವೇ ಜೀವಂತವಾಗಿ ಉಳಿಯುವರು. ಅವರು ಜೆರುಸಲೇಮಿನಿಂದ ಹೊರಟು ಹೋಗುವರು. ಉಳಿದವರು ಚೀಯೋನ್ ಪರ್ವತದಿಂದ ಬರುವರು.” ಯೆಹೋವನ ಗಾಢವಾದ ಪ್ರೀತಿಯೇ ಇದನ್ನು ಮಾಡುವದು.
33 ಆದ್ದರಿಂದ ಯೆಹೋವನು ಅಶ್ಶೂರದ ಅರಸನ ಬಗ್ಗೆ ಹೇಳುವನು: “ಅವನು ಪಟ್ಟಣದೊಳಗೆ ಬರುವದಿಲ್ಲ. ಅವನು ಒಂದು ಬಾಣವನ್ನೂ ಪಟ್ಟಣದ ಮೇಲೆ ಹಾರಿಸುವದಿಲ್ಲ. ಅವನು ತನ್ನ ಗುರಾಣಿಗಳನ್ನು ಪಟ್ಟಣಕ್ಕೆ ತರುವದಿಲ್ಲ. ಪಟ್ಟಣದ ಗೋಡೆಗಳ ಮೇಲೆ ಆಕ್ರಮಣ ಮಾಡಲು ಅವನು ದಿಬ್ಬ ಹಾಕುವದಿಲ್ಲ.
34 ಅವನು ಬಂದ ದಾರಿಯಿಂದಲೇ ಹಿಂದಕ್ಕೆ ಹೋಗುವನು. ಅವನು ಪಟ್ಟಣದೊಳಗೆ ಬರುವದಿಲ್ಲ. ಇದು ಯೆಹೋವನ ನುಡಿ.
35 ನಾನು ಪಟ್ಟಣವನ್ನು ರಕ್ಷಿಸಿ ಕಾಪಾಡುವೆನು. ನನಗೋಸ್ಕರವಾಗಿಯೇ ಇದನ್ನು ಮಾಡುವೆನು. ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಮಾಡುವೆನು.” ಅಶ್ಶೂರರ ಸೈನ್ಯವು ನಾಶಗೊಂಡದ್ದು
36 ರಾತ್ರಿ, ಯೆಹೋವನ ದೂತನು ಹೊರಟುಹೋಗಿ ಅಶ್ಶೂರದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಸಂಹರಿಸಿದನು. ಜನರು ಬೆಳಿಗ್ಗೆ ಎದ್ದಾಗ ಸುತ್ತಲೂ ಹೆಣಗಳು ಬಿದ್ದಿದ್ದವು.
37 ಅಶ್ಶೂರದ ಅರಸನಾದ ಸನ್ಹೇರೀಬನು ನಿನೆವೆಗೆ ಹಿಂದಿರುಗಿ ಅಲ್ಲಿಯೇ ಉಳಿದನು.
38 ಒಂದು ದಿವಸ ಸನ್ಹೇರೀಬನು ತನ್ನ ದೇವರಾದ ನಿಸ್ರೋಕನ ಮಂದಿರದಲ್ಲಿ ಪೂಜಿಸುತ್ತಿರುವಾಗ ಅವನ ಇಬ್ಬರು ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚರ್ ಎಂಬವರು ಅವನನ್ನು ಕತ್ತಿಯಿಂದ ಸಂಹರಿಸಿ ಅರರಾಟ್‌ಗೆ ಪಲಾಯನಗೈದರು. ಅನಂತರ ಸನ್ಹೇರೀಬನ ಮಗ ಏಸರ್‌ಹದ್ದೋನನು ಅಶ್ಶೂರದ ಹೊಸ ಅರಸನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×