Bible Versions
Bible Books

Micah 3 (ERVKN) Easy to Read Version - Kannadam

1 ಆಗ ನಾನು ಹೇಳಿದ್ದೇನೆಂದರೆ, “ಯಾಕೋಬಿನ ನಾಯಕರೇ, ಇಸ್ರೇಲಿನ ಅಧಿಪತಿಗಳೇ, ನನ್ನ ಮಾತನ್ನು ಕೇಳಿರಿ. ನ್ಯಾಯ ಏನು ಎಂದು ನಿಮಗೆ ತಿಳಿದಿರಬೇಕು.
2 ನೀವು ಶಿಷ್ಟತನವನ್ನು ದ್ವೇಷಿಸಿ ದುಷ್ಟತನವನ್ನು ಪ್ರೀತಿಸುತ್ತೀರಿ! ನೀವು ಜನರ ಚರ್ಮವನ್ನು ಸುಲಿಯುತ್ತಾ ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತೆಗೆಯುತ್ತೀರಿ.
3 ನೀವು ನನ್ನ ಜನರ ದೇಹದಿಂದ ಚರ್ಮ ತೆಗೆದು ಎಲುಬುಗಳನ್ನು ತುಂಡುಮಾಡಿ ಅವರನ್ನು ನಾಶಮಾಡುತ್ತೀರಿ. ತಪ್ಪಲೆಯೊಳಗೆ ಬೇಯಿಸಲು ಮಾಂಸ ತುಂಡು ಮಾಡಿ ಹಾಕುವಂತೆ ನೀವು ಅವರ ಎಲುಬುಗಳನ್ನು ತುಂಡು ಮಾಡುತ್ತೀರಿ.
4 ನೀವು ಯೆಹೋವನಿಗೆ ಪ್ರಾರ್ಥಿಸಬಹುದು. ಆದರೆ ಆತನು ನಿಮಗೆ ಉತ್ತರಕೊಡುವದಿಲ್ಲ. ನಿಮ್ಮ ಕೆಟ್ಟ ಪಾಪಗಳ ನಿಮಿತ್ತ ತನ್ನ ಮುಖವನ್ನು ಮರೆಮಾಡಿಕೊಳ್ಳುತ್ತಾನೆ.”
5 ಕೆಲವು ಸುಳ್ಳು ಪ್ರವಾದಿಗಳೆದ್ದು ಯೆಹೋವನ ಜನರಿಗೆ ಸುಳ್ಳನ್ನು ತಿಳಿಸುತ್ತಾರೆ. ಅಂಥವರ ಬಗ್ಗೆ ಯೆಹೋವನು ಹೇಳುವದೇನೆಂದರೆ, “ಈ ಪ್ರವಾದಿಗಳ ಮಾತುಗಳು ಅವರ ಹೊಟ್ಟೆಗಳನ್ನವಲಂಬಿಸಿಯದೆ. ಜನರು ಅವರಿಗೆ ಆಹಾರ ಕೊಟ್ಟರೆ ಶಾಂತಿಯನ್ನು ವಾಗ್ದಾನ ಮಾಡುತ್ತಾರೆ. ಜನರು ಅವರಿಗೆ ಊಟ ಕೊಡದೆ ಹೋದರೆ ಯುದ್ಧವನ್ನು ವಾಗ್ದಾನ ಮಾಡುತ್ತಾರೆ.
6 ಹೀಗಿರುವದರಿಂದ ನಿಮಗೆ ರಾತ್ರಿಯಂತಿರುವದು. ನಿಮಗೆ ದರ್ಶನಗಳಾಗುವದಿಲ್ಲ. ಮುಂದೆ ಏನು ಸಂಭವಿಸುತ್ತದೆ ಎಂಬುದನ್ನು ನೀವು ನೋಡುವದಿಲ್ಲ. ಆದುದರಿಂದ ನಿಮಗೆ ಕತ್ತೆಲೆಯಂತಿದೆ. ಪ್ರವಾದಿಗಳಿಗೆ ಸೂರ್ಯನು ಮುಳುಗಿರುತ್ತಾನೆ. ಅವರಿಗೆ ಮುಂದೆ ಆಗುವಂಥದು ಕಾಣಿಸುವುದಿಲ್ಲ. ಆದುದರಿಂದ ಅವರಿಗೆ ಎಲ್ಲಾ ಕತ್ತಲೆಯಾಗಿದೆ.
7 ದೇವದರ್ಶಿಗಳು ನಾಚಿಕೆಗೊಂಡಿದ್ದಾರೆ. ಭವಿಷ್ಯ ಹೇಳುವವರು ನಾಚಿಕೆಗೊಳಗಾಗಿದ್ದಾರೆ. ಯಾಕೆಂದರೆ ದೇವರು ಅವರು ಕೂಡ ಮಾತನಾಡುವದನ್ನು ನಿಲ್ಲಿಸಿರುವದರಿಂದ ಅವರು ಏನನ್ನೂ ಹೇಳುವದಿಲ್ಲ.
8 ಯೆಹೋವನ ಆತ್ಮನು ನನ್ನಲ್ಲಿ ಅಧಿಕಾರವನ್ನೂ, ಒಳ್ಳೆಯತನವನ್ನೂ ಶಕ್ತಿಯನ್ನೂ ತುಂಬಿದ್ದಾನೆ. ಯಾಕಂದರೆ ಯಾಕೋಬನ ಅಪರಾಧಗಳನ್ನು ಅವನಿಗೆ ತಿಳಿಸುವುದಕ್ಕಾಗಿಯಷ್ಟೇ, ಇಸ್ರೇಲಿನ ಪಾಪಗಳನ್ನು ಅವನಿಗೆ ಹೇಳುವುದಕ್ಕಾಗಿಯಷ್ಟೇ.”
9 ಯಾಕೋಬಿನ ನಾಯಕರೇ, ಇಸ್ರೇಲಿನ ಪ್ರಧಾನರೇ, ನನಗೆ ಕಿವಿಗೊಡಿರಿ! ಸರಿಯಾದ ಜೀವಿತವನ್ನು ನೀವು ದ್ವೇಷಿಸುತ್ತೀರಿ. ನೆಟ್ಟಗಿರುವದನ್ನು ಡೊಂಕಾಗಿ ನೀವು ಮಾಡುವಿರಿ.
10 ಜನರನ್ನು ಕೊಲೆ ಮಾಡಿ ಚೀಯೋನನ್ನು ಕಟ್ಟುತ್ತೀರಿ. ಜನರನ್ನು ಮೋಸಮಾಡಿ ಜೆರುಸಲೇಮನ್ನು ಕಟ್ಟುತ್ತೀರಿ.
11 ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ನ್ಯಾಯಕ್ಕೆ ವಿರುದ್ಧ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ನಾಯಕರು, “ಯೆಹೋವನು ನಮ್ಮಲ್ಲಿ ವಾಸ ಮಾಡುತ್ತಿದ್ದಾನೆ. ಆದುದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
12 ನಾಯಕರೇ, ನಿಮ್ಮಿಂದಾಗಿ ಚೇಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×