Bible Versions
Bible Books

Numbers 25 (ERVKN) Easy to Read Version - Kannadam

1 ಇಸ್ರೇಲರು ಅಖಾಸಿಯದ ಸಮೀಪದಲ್ಲಿ ಇಳಿದುಕೊಂಡಿದ್ದರು. ಅವರು ಅಲ್ಲಿದ್ದಾಗ ಮೋವಾಬ್ ಸ್ತ್ರೀಯರೊಡನೆ ಲೈಂಗಿಕ ಪಾಪಗಳನ್ನು ಮಾಡತೊಡಗಿದರು.
2 This verse may not be a part of this translation
3 This verse may not be a part of this translation
4 ಯೆಹೋವನು ಮೋಶೆಗೆ, “ನೀನು ಜನರ ನಾಯಕರನ್ನೆಲ್ಲ ಬಂಧಿಸಿ ಯೆಹೋವನ ಮುಂದೆ ಬಹಿರಂಗವಾಗಿ ಅವರನ್ನು ನೇಣುಗಂಬಕ್ಕೆ ಏರಿಸು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರೇಲರಿಂದ ತೊಲಗಿಸಬೇಕು” ಎಂದು ಹೇಳಿದನು.
5 ಆದಕಾರಣ ಮೋಶೆ ಇಸ್ರೇಲರ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಪ್ರತಿಯೊಬ್ಬನು, ಸುಳ್ಳುದೇವರಾದ ಪೆಗೋರದ ಬಾಳನನ್ನು ಆರಾಧಿಸುವಂತೆ ಜನರನ್ನೂ ಪ್ರೋತ್ಸಾಹಿಸಿದವರನ್ನು ಕಂಡು ಹಿಡಿದು ನೀವು ಅವರನ್ನು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.
6 ಆಗ ಮೋಶೆ ಮತ್ತು ಇಡೀ ಇಸ್ರೇಲ್ ಸಮುದಾಯವು ಒಟ್ಟಾಗಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಅಳುತ್ತಿದ್ದರು. ಅಷ್ಟರಲ್ಲಿ ಇಸ್ರೇಲ್ ಮನುಷ್ಯನೊಬ್ಬನು ಮಿದ್ಯಾನ್ ಸ್ತ್ರೀಯೊಬ್ಬಳನ್ನು ತನ್ನ ಸಂಬಂಧಿಕರ ಬಳಿಗೆ ಕರೆದುಕೊಂಡು ಬಂದನು. ಮೋಶೆಯ ಮತ್ತು ಎಲ್ಲಾ ಜನರ ಕಣ್ಣೆದುರಿನಲ್ಲೇ ಅವನು ಹೀಗೆ ಮಾಡಿದನು.
7 ಕೂಡಲೇ ಯಾಜಕನಾಗಿದ್ದ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಸಭೆಯ ನಡುವೆಯಿಂದೆದ್ದು ಈಟಿಯನ್ನು ತೆಗೆದುಕೊಂಡು
8 ಇಸ್ರೇಲನನ್ನು ಹಿಂಬಾಲಿಸಿ ಮಲಗುವ ಕೋಣೆಯೊಳಗೆ ಹೋಗಿ ಅವನನ್ನೂ ಮಿದ್ಯಾನ್ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರೇಲರಿಗುಂಟಾದ ವ್ಯಾಧಿ ನಿಂತುಹೋಯಿತು.
9 ವ್ಯಾಧಿಯಿಂದ ಒಟ್ಟು ಇಪ್ಪತ್ತನಾಲ್ಕು ಸಾವಿರ ಜನರು ಸತ್ತುಹೋದರು.
10 This verse may not be a part of this translation
11 This verse may not be a part of this translation
12 ಆದಕಾರಣ ನಾನು ಅವನ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆಂದು ಎಲ್ಲರಿಗೂ ತಿಳಿಸು;
13 ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತು ಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.
14 ಮಿದ್ಯಾನ್ ಸ್ತ್ರೀಯೊಡನೆ ಕೊಲ್ಲಲ್ಪಟ್ಟವನು ಸಿಮೆಯೋನ್ ಕುಲದವರಲ್ಲಿ ಗೋತ್ರಪ್ರಧಾನನಾಗಿದ್ದ ಜಿಮ್ರೀ. ಇವನು ಸಾಲೂ ಎಂಬವನ ಮಗ.
15 ಹತಳಾದ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ. ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಜೂರ್ ಎಂಬವನ ಮಗಳು.
16 ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
17 “ನೀನು ಮಿದ್ಯಾನ್ಯರನ್ನು ವೈರಿಗಳೆಂದು ಪರಿಗಣಿಸಿರುವುದರಿಂದ ಅವರನ್ನು ಸಂಹರಿಸಬೇಕು.
18 ಯಾಕೆಂದರೆ ಅವರು ನಿಮ್ಮನ್ನು ವೈರಿಗಳೆಂದು ಪರಿಗಣಿಸಿ ಪೆಗೋರನ ಘಟನೆಯಲ್ಲಿ ನಿಮ್ಮನ್ನು ಮೋಸಗೊಳಿಸಿದರು. ಮಿದ್ಯಾನಿನ ನಾಯಕನೊಬ್ಬನ ಮಗಳೂ ತಮ್ಮ ರಕ್ತಸಂಬಂಧಿಯೂ ಆಗಿದ್ದ ಕೊಜ್ಬೀಯ ವಿಷಯದಲ್ಲಿಯೂ ಅವರು ನಿಮ್ಮನ್ನು ಮೋಸಗೊಳಿಸಿದರು. ಪೆಗೋರಿನ ಘಟನೆಯಿಂದ ಇಸ್ರೇಲರಿಗೆ ಕಾಯಿಲೆ ಉಂಟಾದಾಗ ಸ್ತ್ರೀಯೂ ಸತ್ತಳು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×