Bible Versions
Bible Books

Psalms 11 (ERVKN) Easy to Read Version - Kannadam

1 ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ?
2 ದುಷ್ಟರು ಬೇಟೆಗಾರರಂತಿದ್ದಾರೆ; ಅವರು ಕತ್ತಲೆಯಲ್ಲಿ ಅವಿತುಕೊಂಡಿರುವರು; ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು.
3 ಅಸ್ತಿವಾರಗಳೇ ನಾಶವಾಗುತ್ತಿದ್ದರೆ ನೀತಿವಂತನು ಏನು ಮಾಡಲಾದೀತು?
4 ಯೆಹೋವನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ. ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ.
5 ಯೆಹೋವನು ನೀತಿವಂತರಿಗಾಗಿ ಹುಡುಕುವನು. ಆದರೆ ಅತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು.
6 ಆತನು ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ.
7 ಯಾಕಂದರೆ ಯೆಹೋವನು ನೀತಿಸ್ವರೂಪನಾಗಿದ್ದಾನೆ. ಆತನು ನ್ಯಾಯವನ್ನು ಪ್ರೀತಿಸುತ್ತಾನೆ. ನೀತಿವಂತರು ಆತನ ಮುಖವನ್ನು ನೋಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×