Bible Versions
Bible Books

Psalms 126 (ERVKN) Easy to Read Version - Kannadam

1 ಯೆಹೋವನು ನಮ್ಮನ್ನು ಸೆರೆಯಿಂದ ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸು ಕಂಡವರಂತಿದ್ದೆವು!
2 ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು. “ಯೆಹೋವನು ಇಸ್ರೇಲರಿಗೆ ಮಹತ್ಕಾಕಾರ್ಯಗಳನ್ನು ಮಾಡಿದ್ದಾನೆ” ಎಂದು ಅನ್ಯಜನಾಂಗಗಳು ಮಾತಾಡಿಕೊಂಡರು.
3 ಹೌದು, ನಾವು ಸಂತೋಷದಿಂದ್ದೇವೆ ಯಾಕಂದರೆ ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದನು.
4 ಯೆಹೋವನೇ, ಬತ್ತಿಹೋದ ತೊರೆಗಳು ನೀರಿನಿಂದ ಮತ್ತೆ ತುಂಬಿ ಹರಿಯುವಂತೆ ನಮ್ಮನ್ನು ಬಿಡಿಸು.
5 ಅಳುತ್ತಾ ಬೀಜವನ್ನು ಬಿತ್ತುವವನು ಹರ್ಷದಿಂದ ಕೊಯ್ಯುವನು.
6 ಅಳುತ್ತಾ ಹೊಲಕ್ಕೆ ಬೀಜವನ್ನು ಹೊತ್ತುಕೊಂಡು ಹೋಗುವವನು ಹರ್ಷದಿಂದ ಸಿವುಡುಗಳನ್ನು ಹೊತ್ತುಕೊಂಡು ಬರುವನು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×