Bible Versions
Bible Books

Psalms 133 (ERVKN) Easy to Read Version - Kannadam

1 ರಚನೆಗಾರ : ದಾವೀದ. ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು.
2 ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು ಆರೋನನ ಗಡ್ಡಕ್ಕೂ ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿಮಳ ತೈಲದಂತಿರುವುದು;
3 ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು. ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×