1 ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. ಇಡೀ ರಾತ್ರಿ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ.
2 ಸೇವಕರೇ, ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದ ಕಡೆಗೆ ಎತ್ತಿ ಯೆಹೋವನನ್ನು ಕೊಂಡಾಡಿರಿ.
3 ಯೆಹೋವನು ನಿಮ್ಮನ್ನು ಚೀಯೋನಿನಿಂದ ಆಶೀರ್ವದಿಸಲಿ. ಆತನು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಮಾಡಿದನು.