Bible Versions
Bible Books

Psalms 3 (ERVKN) Easy to Read Version - Kannadam

1 ರಚನೆಗಾರ: ದಾವೀದ. “ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ.
2 ಅನೇಕರು ನನ್ನ ಬಗ್ಗೆ ಮಾತಾಡುತ್ತಾ “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ.
3 ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. ನೀನೇ ನನ್ನ ಗೌರವಕ್ಕೆ ಆಧಾರ. ನನ್ನನ್ನು ಜಯವೀರನನ್ನಾಗಿ ಮಾಡು.
4 ನಾನು ಯೆಹೋವನಿಗೆ ಪ್ರಾರ್ಥಿಸಲು, ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು.
5 ಯೆಹೋವನು ನನ್ನನ್ನು ಕಾಪಾಡುವುದರಿಂದ ನಾನು ಸುಖವಾಗಿ ನಿದ್ರಿಸಿ ಎಚ್ಚರಗೊಳ್ಳುವೆನು.
6 ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ ನನಗೆ ಭಯವಿಲ್ಲ.
7 ಯೆಹೋವನೇ, ಎದ್ದೇಳು! ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ ಅವರ ಹಲ್ಲುಗಳು ಉದುರಿಹೋಗುತ್ತವೆ.
8 ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×