Bible Versions
Bible Books

Psalms 53 (ERVKN) Easy to Read Version - Kannadam

1 ಮೂಢರು ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುವರು. ಅವರು ಕೆಟ್ಟುಹೋಗಿದ್ದಾರೆ; ದುಷ್ಕೃತ್ಯಗಳನ್ನು ನಡೆಸುವವರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡುವುದೇ ಇಲ್ಲ.
2 ಮನುಷ್ಯರಲ್ಲಿ ತನಗೋಸ್ಕರ ಹುಡುಕುತ್ತಿರುವ ಬುದ್ಧಿವಂತರು ಇದ್ದಾರೊ ಎಂದು ದೇವರು ಪರಲೋಕದಿಂದ ನೋಡುತ್ತಿದ್ದಾನೆ.
3 ಆದರೆ ಪ್ರತಿಯೊಬ್ಬರೂ ದೇವರಿಗೆ ವಿಮುಖರಾಗಿದ್ದಾರೆ. ಪ್ರತಿಯೊಬ್ಬನೂ ಕೆಟ್ಟುಹೋಗಿದ್ದಾನೆ. ಯಾವನೂ ಒಳ್ಳೆಯದನ್ನು ಮಾಡುತ್ತಿಲ್ಲ. ಇಲ್ಲ, ಒಬ್ಬನಾದರೂ ಮಾಡುತ್ತಿಲ್ಲ!
4 ದೇವರು ಇಂತೆನ್ನುತ್ತಾನೆ: “ಆ ದುಷ್ಟರಿಗೆ ಖಂಡಿತವಾಗಿ ಸತ್ಯವು ತಿಳಿದಿದೆ! ಆದರೆ ಅವರು ನನ್ನಲ್ಲಿ ಪ್ರಾರ್ಥಿಸುತ್ತಿಲ್ಲ. ಆಹಾರ ತಿನ್ನುವಂತೆ ಅವರು ನನ್ನ ಜನರನ್ನು ನಾಶಮಾಡಲು ಸಿದ್ಧರಾಗಿದ್ದಾರೆ.”
5 ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! ಅವರು ಇಸ್ರೇಲರ ಶತ್ರುಗಳು. ದೇವರು ಅವರನ್ನು ತಿರಸ್ಕರಿಸಿದ್ದಾನೆ. ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, ದೇವರು ದುಷ್ಟರ ಎಲುಬುಗಳನ್ನು ಚದರಿಸಿ ಬಿಡುವನು.
6 ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲಿಗೆ ಜಯವನ್ನು ತರುವನು! ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. ಯಾಕೋಬನೇ ಉಲ್ಲಾಸಿಸು! ಇಸ್ರೇಲೇ ಬಹುಸಂತೋಷಪಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×