Bible Versions
Bible Books

Psalms 75 (ERVKN) Easy to Read Version - Kannadam

1 ರಚನೆಗಾರ : ಆಸಾಫ. ದೇವರೇ, ನಿನ್ನನ್ನು ಕೊಂಡಾಡುವೆವು! ನಿನ್ನ ಹೆಸರನ್ನು ಸ್ತ್ತುತಿಸುವೆವು; ಯಾಕಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ.
2 ದೇವರು ಇಂತೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ; ನೀತಿಯಿಂದಲೇ ತೀರ್ಪುಕೊಡುವೆ.
3 ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ.”
4 This verse may not be a part of this translation
5 This verse may not be a part of this translation
6 ಭೂಲೋಕದ ಯಾವ ಶಕ್ತಿಯೂ ಮನುಷ್ಯನನ್ನು ಉದ್ಧಾರ ಮಾಡಲಾರದು.
7 ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು.
8 ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಪಾತ್ರೆಯು ವಿಷದ್ರಾಕ್ಷಾರಸದಿಂದ ತುಂಬಿದೆ. ಆತನು ದಂಡನೆಯೆಂಬ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!
9 ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು; ಇಸ್ರೇಲರ ದೇವರನ್ನು ಸಂಕೀರ್ತಿಸುವೆನು.
10 ದುಷ್ಟರಿಂದ ಅಧಿಕಾರವನ್ನು ಕಿತ್ತುಕೊಂಡು ಒಳ್ಳೆಯವರಿಗೆ ಅದನ್ನು ಒಪ್ಪಿಸಿಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×