Bible Versions
Bible Books

Psalms 8 (ERVKN) Easy to Read Version - Kannadam

1 ನಮ್ಮ ಒಡೆಯನಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಅತಿಶಯವಾದದ್ದು. ನಿನ್ನ ಹೆಸರು ಪರಲೋಕದಲ್ಲೆಲ್ಲಾ ನಿನ್ನನ್ನು ಮಹಿಮೆಪಡಿಸುವುದು.
2 ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ; ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ.
3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು.
4 ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು? ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು? ಮನುಷ್ಯರು ಎಷ್ಟರವನು? ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು?
5 ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ.
6 ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ. ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ.
7 ಅವರು ಎಲ್ಲಾ ಪಶುಗಳ ಮೇಲೆಯೂ ಕಾಡುಪ್ರಾಣಿಗಳ ಮೇಲೆಯೂ ದೊರೆತನ ಮಾಡುವರು.
8 ಆಕಾಶದ ಪಕ್ಷಿಗಳ ಮೇಲೆಯೂ ಸಾಗರದ ಮೀನುಗಳ ಮೇಲೆಯೂ ದೊರೆತನ ಮಾಡುವರು.
9 ನಮ್ಮ ದೇವರಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಎಷ್ಟೋ ಅತಿಶಯವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×