Bible Versions
Bible Books

Psalms 23 (ERVKN) Easy to Read Version - Kannadam

1 ಯೆಹೋವನೇ ನನಗೆ ಕುರುಬನು. ನನಗೆ ಕೊರತೆಯೇ ಇಲ್ಲ.
2 ಆತನು ನನ್ನನ್ನು ಹಸಿರುಗಾವಲುಗಳಲ್ಲಿ ತಂಗಿಸುವನು. ಪ್ರಶಾಂತವಾದ ನೀರಿನ ತೊರೆಗಳ ಬಳಿಯಲ್ಲಿ ನನ್ನನ್ನು ನಡೆಸುವನು.
3 ಆತನು ತನ್ನ ಹೆಸರಿಗೆ ತಕ್ಕಂತೆ ನನ್ನ ಪ್ರಾಣಕ್ಕೆ ಚೈತನ್ಯ ನೀಡಿ ನೀತಿ ಮಾರ್ಗದಲ್ಲಿ ನನ್ನನ್ನು ನಡೆಸುವನು.
4 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ನನ್ನೊಂದಿಗಿರುವುದರಿಂದ ಭಯಪಡುವುದಿಲ್ಲ. ನಿನ್ನ ದೊಣ್ಣೆಯೂ ಊರುಗೋಲೂ ನನ್ನನ್ನು ಸಂತೈಸುತ್ತವೆ.
5 ವೈರಿಗಳ ಎದುರಿನಲ್ಲಿ ನೀನು ನನಗೆ ಜೌತಣವನ್ನು ಸಿದ್ಧಪಡಿಸಿರುವೆ; ನನ್ನ ತಲೆಗೆ ಎಣ್ಣೆಯನ್ನು ಹಚ್ಚಿರುವೆ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತಿದೆ.
6 ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಕೃಪೆಯೂ ನನ್ನೊಂದಿಗಿರುತ್ತವೆ. ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲೇ ವಾಸಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×