Bible Versions
Bible Books

Psalms 76 (ERVKN) Easy to Read Version - Kannadam

1 ಯೆಹೂದದ ಜನರು ದೇವರನ್ನು ಬಲ್ಲವರೇ ಸರಿ! ಇಸ್ರೇಲಿನ ಜನರು ಆತನ ನಾಮವನ್ನು ಗೌರವಿಸುವರು.
2 ಆತನ ಬೀಡಾರವು ಸಾಲೇಮಿನಲ್ಲಿದೆ. ಆತನ ಆಲಯವು ಸಿಯೋನ್ ಬೆಟ್ಟದ ಮೇಲಿದೆ.
3 ಸ್ಥಳದಲ್ಲಿ ದೇವರು ಬಿಲ್ಲುಬಾಣಗಳನ್ನೂ ಗುರಾಣಿಗಳನ್ನೂ ಖಡ್ಗಗಳನ್ನೂ ಇತರ ಯುದ್ಧಾಯುಧಗಳನ್ನೂ ನುಚ್ಚುನೂರು ಮಾಡಿದ್ದಾನೆ.
4 ದೇವರೇ, ಶತ್ರುಗಳನ್ನು ಸೋಲಿಸಿ ಬೆಟ್ಟಗಳಿಂದ ಇಳಿದು ಬರುವಾಗ ನೀನು ತೇಜೋಮಯನಾಗಿರುವೆ.
5 ಸೈನಿಕರು ತಾವೇ ಶಕ್ತಿವಂತರೆಂದುಕೊಂಡಿದ್ದರು. ಆದರೆ ಈಗ ಅವರು ಬಯಲುಗಳಲ್ಲಿ ಸತ್ತುಬಿದ್ದಿದ್ದಾರೆ. ಅವರು ಧರಿಸಿಕೊಂಡಿದ್ದವುಗಳನ್ನೆಲ್ಲ ಸುಲಿಗೆ ಮಾಡಲಾಗಿದೆ. ಸೈನಿಕರಲ್ಲಿ ಯಾರೂ ತಮ್ಮನ್ನು ಸಂರಕ್ಷಿಸಿಕೊಳ್ಳಲಾಗಲಿಲ್ಲ.
6 ಯಾಕೋಬನ ದೇವರು ಸೈನಿಕರನ್ನು ಗದರಿಸಲು ರಥಾಶ್ವಗಳ ಸೇನೆಯು ಮೂರ್ಛೆಗೊಂಡಿತು.
7 ದೇವರೇ, ನೀನು ಭಯಂಕರನೇ ಸರಿ! ನೀನು ಕೋಪಗೊಂಡಿರುವಾಗ ನಿನಗೆ ವಿರೋಧವಾಗಿ ಯಾರು ನಿಂತುಕೊಳ್ಳಬಲ್ಲರು?
8 ಯೆಹೋವನು ಎದ್ದುನಿಂತು ತನ್ನ ನ್ಯಾಯತೀರ್ಪನ್ನು ಪ್ರಕಟಿಸಿದನು.
9 ದೇವರು ಲೋಕದ ದೀನರನ್ನು ರಕ್ಷಿಸಿದನು. ಆತನು ಪರಲೋಕದಿಂದ ತೀರ್ಮಾನ ನೀಡುತ್ತಿರಲು ಭೂಲೋಕವೆಲ್ಲಾ ಭಯದಿಂದ ಸ್ತಬ್ಧವಾಯಿತು.
10 ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು.
11 ದೇವರಾದ ಯೆಹೋವನಿಗೆ ಹರಕೆಗಳನ್ನು ಮಾಡಿದವರೇ, ನಿಮ್ಮ ಹರಕೆಗಳನ್ನು ಸಲ್ಲಿಸಿರಿ. ಸರ್ವಭೂನಿವಾಸಿಗಳೇ, ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ.
12 ಆತನು ಮಹಾನಾಯಕರುಗಳನ್ನು ಸೋಲಿಸುವನು. ಭೂರಾಜರುಗಳೆಲ್ಲಾ ಆತನಿಗೆ ಭಯಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×