Bible Versions
Bible Books

2 John 1 (IRVKN) Indian Revised Version - Kanana

1 {ಪೀಠಿಕೆ} PS * 3 ಯೋಹಾ 1: ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಕೆಲವರು ಸಭೆಗೆ ಎಂದು ಅರ್ಥಮಾಡಿಕೊಳ್ಳುತ್ತಾರೆ. ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;
2 ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು 3 ಯೋಹಾ 1; 1 ಯೋಹಾ 3:18: ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, § ಯೋಹಾ 1:17; 14:6: ಸತ್ಯವನ್ನು * ಯೋಹಾ 8:32; 1 ತಿಮೊ. 2:4: ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.
3 1 ತಿಮೊ. 1:2; ಯೂದ 2: ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ. PS
4 {ದುರ್ಬೋಧಕರ ವಿಷಯದಲ್ಲಿ ಎಚ್ಚರಿಕೆ} PS ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು 3 ಯೋಹಾ 3,4: ಬಹಳ ಸಂತೋಷಪಟ್ಟೆನು.
5 ಅಮ್ಮನವರೇ, § 1 ಯೋಹಾ 2:7: ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ, ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿಮಗೆ ಬರೆಯುವವನಾಗಿ; ನಾವು * 1 ಯೋಹಾ 2:8; 3:11: ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ.
6 1 ಯೋಹಾ 5:3: ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, 1 ಯೋಹಾ 2:24: ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ.
7 ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ § ಮೂಲ: ಬರುವ. 1 ಯೋಹಾ 2:22; 4:2,3: ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ * 1 ಯೋಹಾ 2:18,26; 4:1: ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.
8 ಕೆಲವು ಪ್ರತಿಗಳಲ್ಲಿ, ನೀವು ಎಂದು ಬರೆದದೆ. ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಗಲಾ. 3:4; ಇಬ್ರಿ. 10:35: ಕಳೆದುಕೊಳ್ಳದೆ § 1 ಕೊರಿ 3:8: ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.
9 ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ * 1 ಯೋಹಾ 2:23: . ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ.
10 ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ರೋಮಾ. 16:17; ಗಲಾ. 1:8,9; 2 ಥೆಸ. 3:6,14; ತೀತ. 3:10: ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.
11 ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ. PS
12 {ಕೊನೆಯ ಮಾತುಗಳು} PS 3 ಯೋಹಾ 13: ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, § 3 ಯೋಹಾ 14: ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. * ಯೋಹಾ 15:11; 17:13; 1 ಯೋಹಾ 1:4: ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು.
13 ದೇವರು ಆರಿಸಿಕೊಂಡವರಾದ, ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ಹೇಳುತ್ತಾರೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×