Bible Books

:

1. {ಮುಳುಗಿದ್ದ ಕೊಡಲಿ ತೇಲಾಡಿದ್ದು} PS ಒಂದು ದಿನ ಪ್ರವಾದಿಮಂಡಳಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಸ್ಥಳವು ಬಹಳ ಇಕ್ಕಟ್ಟಾಗಿದೆ.
2. ಆದುದರಿಂದ ನಾವು ಯೊರ್ದನಿಗೆ ಹೋಗಿ, ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು, ನಮ್ಮ ವಾಸಕ್ಕಾಗಿ ಒಂದು ಮನೆಯನ್ನು ಮಾಡಿಕೊಳ್ಳೋಣ” ಎಂದರು. ಎಲೀಷನು ಅವರಿಗೆ, “ಹೋಗಿಬನ್ನಿರಿ” ಎಂದು ಹೇಳಿದನು.
3. ಅವರಲ್ಲೊಬ್ಬನು, “ದಯವಿಟ್ಟು ನೀನೂ, ನಿನ್ನ ಸೇವಕರು ನಮ್ಮ ಜೊತೆಯಲ್ಲಿ ಬರಬೇಕು” ಎಂದು ಬೇಡಿಕೊಂಡನು. ಅದಕ್ಕೆ ಎಲೀಷನು, “ಬರುತ್ತೇನೆ” ಎಂದು ಹೇಳಿ ಅವರೊಡನೆ ಹೊರಟನು. PEPS
4. ಅವರು ಯೊರ್ದನಿಗೆ ಹೋಗಿ ಮರಗಳನ್ನು ಕಡಿಯುತ್ತಿರುವಾಗ,
5. ಒಬ್ಬನ ಕೊಡಲಿಯು ಕೈಜಾರಿ ನೀರೊಳಗೆ ಬಿದ್ದಿತು. ಆಗ ಅವನು, “ಅಯ್ಯೋ, ಸ್ವಾಮಿ ನಾನು ಅದನ್ನು ಸಾಲವಾಗಿ ತಂದಿದ್ದೆನು” ಎಂದು ಕೂಗಿದನು.
6. ದೇವರ ಮನುಷ್ಯನು ಅವನಿಗೆ, “ಅದು ಎಲ್ಲಿ ಬಿದ್ದಿತು?” ಎಂದು ಕೇಳಲು, ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಮುರಿದು ಅಲ್ಲಿ ಹಾಕಿದನು, ಕೂಡಲೆ ಕೊಡಲಿಯು ಮೇಲಕ್ಕೆ ಬಂದು ತೇಲಾಡಿತು.
7. ಎಲೀಷನು “ಅದನ್ನು ತೆಗೆದುಕೋ” ಎಂದು ಆಜ್ಞಾಪಿಸಲು ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು. PS
8. {ಅರಾಮ್ಯರ ಸೋಲು} PS ಅರಾಮ್ಯರ ಅರಸನು ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನು. ಅವನು ತನ್ನ ಸೇನಾಧಿಪತಿಗಳಿಗೆ, “ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ಗೊತ್ತುಮಾಡಬೇಕು” ಎಂದನು.
9. ದೇವರ ಮನುಷ್ಯನು ಇಸ್ರಾಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ, ನೀವು ಇಂಥಿಂಥ ಸ್ಥಳದಲ್ಲಿ ಹೋಗಬಾರದು. ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ” ಎಂದು ತಿಳಿಸುತ್ತಿದ್ದನು. PEPS
10. ದೇವರ ಮನುಷ್ಯನು ಸೂಚಿಸುವ ಎಲ್ಲಾ ಸ್ಥಳಗಳಿಗೂ ಇಸ್ರಾಯೇಲರ ಅರಸನು ಹೇಳಿ ಕಳುಹಿಸುತ್ತಿದ್ದನು. ಹೀಗೆ ಅವನು ಹಲವು ಸಾರಿ ಅರಾಮ್ಯರ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.
11. ಇದರ ದೆಸೆಯಿಂದ ಅರಾಮ್ಯರ ಅರಸನು ಕಳವಳಗೊಂಡು ತನ್ನ ಸೇನಾಧಿಪತಿಗಳನ್ನು ಕರೆದು ಅವರನ್ನು, “ನಮ್ಮವರಲ್ಲಿ ಇಸ್ರಾಯೇಲರ ಅರಸನ ಪಕ್ಷದವರು ಯಾರು? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಿದನು. PEPS
12. ಆಗ ಅವರಲ್ಲೊಬ್ಬನು ಅವನಿಗೆ, “ನನ್ನ ಒಡೆಯನಾದ ಅರಸನೇ, ಹಾಗಲ್ಲ, ಇಸ್ರಾಯೇಲರಲ್ಲಿ ಎಲೀಷನೆಂಬ ಒಬ್ಬ ಪ್ರವಾದಿಯಿರುತ್ತಾನೆ. ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲರ ಅರಸನಿಗೆ ತಿಳಿಸುತ್ತಾನೆ” ಎಂದನು.
13. ಅರಸನು ಇದನ್ನು ಕೇಳಿ, “ಎಲೀಷನು ಎಲ್ಲಿರುತ್ತಾನೆ ಎಂದು ವಿಚಾರಿಸಿರಿ. ನಾನು ಅವನನ್ನು ಹಿಡಿಸುತ್ತೇನೆ” ಎಂದು ಹೇಳಿದನು. “ಪ್ರವಾದಿಯು ದೋತಾನಿನಲ್ಲಿ ಇರುತ್ತಾನೆ” ಎಂದು ಅರಸನು ತಿಳಿದುಕೊಂಡನು. PEPS
14. ಆಗ ಅರಸನು ರಥರಥಾಶ್ವ ಸಹಿತವಾದ ಮಹಾಸೈನ್ಯವನ್ನು ದೋತಾನಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲಿ ಪಟ್ಟಣವನ್ನು ಸಮೀಪಿಸಿ ಅದಕ್ಕೆ ಮುತ್ತಿಗೆ ಹಾಕಿದರು.
15. ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, “ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?” ಎಂದನು.
16. ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ” ಎಂದು ಹೇಳಿ, PEPS
17. “ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ” ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಸೇವಕನಿಗೆ ಕಂಡವು.
18. ಶತ್ರುಗಳಾದ ಅರಾಮ್ಯರು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮಿ, ಜನರನ್ನು ಕುರುಡರನ್ನಾಗಿ ಮಾಡು” ಎಂದು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.
19. ಆಗ ಎಲೀಷನು ಅವರಿಗೆ, “ನೀವು ಹೋಗಬೇಕೆಂದಿದ್ದ ಪಟ್ಟಣವೂ, ದಾರಿಯೂ ಇದಲ್ಲ, ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರೆದುಕೊಂಡು ಹೋದನು. PEPS
20. ಅವರು ಸಮಾರ್ಯದೊಳಗೆ ಬಂದಾಗ ಎಲೀಷನು, “ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ” ಎಂದು ಯೆಹೋವನನ್ನು ಬೇಡಿಕೊಂಡದ್ದರಿಂದ ಆತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿದ್ದೇವೆಂದು ತಿಳಿದುಬಂತು.
21. ಇಸ್ರಾಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, “ಅಪ್ಪಾ, ನಾನು ಇವರನ್ನು ಸಂಹರಿಸಿ ಬಿಡಲೋ? ಸಂಹರಿಸಲೇ?” ಎಂದು ಕೇಳಿದನು. PEPS
22. ಅದಕ್ಕೆ ಅವನು, “ಇವರನ್ನು ನೀನು ಸಂಹರಿಸಬೇಡ, ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವೆಯೋ? ಇವರಿಗೆ ಅನ್ನಪಾನಗಳನ್ನು ಕೊಡು, ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ” ಎಂದು ಉತ್ತರಕೊಟ್ಟನು.
23. ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನ ಪಾನಗಳನ್ನು ತೆಗೆದುಕೊಂಡಾದ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆ ಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲರ ಪ್ರಾಂತ್ಯದೊಳಗೆ ಮತ್ತೆ ಬರಲೇ ಇಲ್ಲ. PS
24. {ಯೆಹೋವನು ಪಟ್ಟಣವನ್ನು ರಕ್ಷಿಸಿದ್ದು} PS ನಂತರ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.
25. ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿದ್ದುದರಿಂದ ಒಂದು ಕತ್ತೆಯ ತಲೆಗೆ ಎಂಭತ್ತು ರೂಪಾಯಿಗಳೂ, ಅರ್ಧ ಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.
26. ಒಂದು ದಿನ ಇಸ್ರಾಯೇಲರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ, ಒಬ್ಬ ಸ್ತ್ರೀಯು, “ಅರಸನೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು” ಎಂದು ಮೊರೆಯಿಟ್ಟಳು. PEPS
27. ಅರಸನು ಆಕೆಗೆ, “ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ, ದ್ರಾಕ್ಷಿ ಆಲೆಯಲ್ಲಾಗಲಿ ಏನಾದರೂ ಉಂಟೋ” ಎಂದು ಕೇಳಿ,
28. “ನಿನಗಿರುವ ದುಃಖ ಯಾವುದು” ಎಂದು ಅರಸನು ಕೇಳಿದನು. ಆಗ ಆಕೆಯು, “ಈ ಸ್ತ್ರೀಯು ನನಗೆ, ನಿನ್ನ ಮಗನನ್ನು ತೆಗೆದುಕೊಂಡು ಬಾ, ನಾವು ಹೊತ್ತು ಅವನನ್ನು ತಿಂದುಬಿಡೋಣ, ನಾಳೆ ನನ್ನ ಮಗನನ್ನು ತಿನ್ನೋಣ” ಎಂದು ಹೇಳಿದ್ದರಿಂದ,
29. ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದು ಬಿಟ್ಟೆವು. ಮರುದಿನ ನಾನು ಆಕೆಗೆ, “ಈ ಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ, ಅವನನ್ನು ಕೊಂದು ತಿನ್ನೋಣ ಅಂದಾಗ ಆಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು” ಎಂದು ಹೇಳಿದಳು. PEPS
30. ಗೋಡೆಯ ಮೇಲೆ ಹೋಗುತ್ತಿದ್ದ ಅರಸನು ಸ್ತ್ರೀಯ ಮಾತನ್ನು ಕೇಳಿದೊಡನೆ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈ ಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು.
31. ಇದಲ್ಲದೆ ಅವನು, “ನಾನು ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟುಕೊಂಡನು. PEPS
32. ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ” ಎಂದು ಹೇಳಿದನು.
33. ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, “ನೋಡು, ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು” ಎಂದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×