Bible Versions
Bible Books

2 Peter 2 (IRVKN) Indian Revised Version - Kanana

1 ಆದರೆ ಇಸ್ರಾಯೇಲ್ ಜನರೊಂದಿಗೆ * ಧರ್ಮೋ 13:1-3; ಯೆರೆ 14:14; 23:16; ಅ. ಕೃ. 13:6; 1 ಯೋಹಾ 4:1: ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಅ. ಕೃ. 20:30; 2 ಕೊರಿ 11:13; 1 ತಿಮೊ. 4:1: ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ಯೂದ. 4; ಗಲಾ. 2:4: ರಹಸ್ಯವಾಗಿ ಒಳಗೆತರುವವರೂ § 1 ಕೊರಿ 6:20; 7:23; ಗಲಾ. 3:13; 4:5; ವಿಮೋ 15:16: ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ * ಮತ್ತಾ 10:33: ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
2 ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ರೋಮಾ. 2:24: ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.
3 ಅವರು 1 ತಿಮೊ. 6:5; ತೀತ. 1:11: ದ್ರವ್ಯಾಶೆಯುಳ್ಳವರಾಗಿ § ರೋಮಾ. 16:18; ಕೊಲೊ 2:4: ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ * ಧರ್ಮೋ 32:35; ಫಿಲಿ. 3:19: ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.
4 ಹೇಗೆಂದರೆ ಯೂದ. 6: ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ಮತ್ತಾ 25:41: ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ § ಪ್ರಕ 20:2,3,10: ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.
5 ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ * 2 ಪೇತ್ರ. 3:6; 1 ಪೇತ್ರ. 3:20; ಆದಿ 7:10, 8:14: ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ 1 ಪೇತ್ರ. 3:20: ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.
6 ಆದಿ 19:24: ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ § ಅರಣ್ಯ 26:10: ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
7 ಆದರೆ ದೇವರು ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ * ಆದಿ 19:16: ಲೋಟನನ್ನು ಕಾಪಾಡಿದನು.
8 ಏಕೆಂದರೆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ಕೀರ್ತ 119:136,158; ಯೆಹೆ. 9:4: ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು.
9 ಕರ್ತನು 1 ಕೊರಿ 10:13; ಪ್ರಕ 3:10: ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.
10 ಮುಖ್ಯವಾಗಿ § ಯೂದ. 16,18. ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು * ಯೂದ. 8. ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಯೂದ. 8. ಕೆಲವು ಪ್ರತಿಗಳಲ್ಲಿ ದೇವದೂತರು ಎಂದು ಬರೆದದೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.
11 ಯೂದ. 9: ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.
12 § ಯೂದ. 10; ಯೆರೆ 12:3: ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ * ಫಿಲಿ. 3:19: ವಿವೇಕಶೂನ್ಯ ಪ್ರಾಣಿಗಳಂತಿರುವ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.
13 ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ಅಥವಾ, ತಾತ್ಕಾಲಿಕ ಭೋಗಾನುಭವವನ್ನೇ. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು 1 ಕೊರಿ 11:21: ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು § ಕೆಲವು ಪ್ರತಿಗಳಲ್ಲಿ, ಪ್ರೇಮಭೋಜನಗಳಲ್ಲಿ ಎಂದು ಬರೆದದೆ; ಯೂದ. 12: ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.
14 ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, * 1 ಪೇತ್ರ. 4:1: ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಎಫೆ 2:3: ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.
15 ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಅರಣ್ಯ 22:5,7; ಧರ್ಮೋ 23:4; ನೆಹೆ 13:2; ಯೂದ 11: ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.
16 ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. § ಅರಣ್ಯ 22:21,23,28: ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು.
17 ಇವರು * ಯೂದ 12: ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಯೂದ 13: ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.
18 ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ 2 ಪೇತ್ರ. 1:4; 2:20: ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ § ಯೂದ 16: ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
19 ಇಂಥವರು * ಗಲಾ. 5:13; ಯಾಕೋಬ. 1:25: ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ಯೋಹಾ 8:34; ರೋಮಾ. 6:16: ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ. PEPS
20 ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ವ. 18: ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ § ಮತ್ತಾ 12:45: ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.
21 * ಯೆಹೆ. 18:24; ಲೂಕ 12:47; ಯಾಕೋಬ. 4:17: ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.
22 ಜ್ಞಾ. 26:11: “ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×