1. {ದೇವರ ದಿನವು ತಡವಾದರೂ ಅದು ಬರುವುದು ನಿಶ್ಚಯ} PS ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ.
2. * ಲೂಕ 1:70; ಅ. ಕೃ. 3:21: ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ † ಯೂದ. 17: ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ‡ 2 ಪೇತ್ರ. 1:13: ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ. PEPS
3. ಕಡೆ ದಿನಗಳಲ್ಲಿ § ಯೂದ. 18: ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,
4. * 1 ಥೆಸ. 2:19: “ಆತನ ಪ್ರತ್ಯಕ್ಷತೆಯ ವಿಷಯವಾದ † ಯೆಶಾ 5:19; ಯೆರೆ 17:15; ಯೆಹೆ. 11:3; 12:22, 27; ಮಲಾ. 2:17: ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?” ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು.
5. ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ‡ ಆದಿ 1:6, 7, 9; ಕೀರ್ತ 33:6; ಇಬ್ರಿ. 11:3: ದೇವರ ವಾಕ್ಯದ ಮೂಲಕ § ಕೀರ್ತ 24:2; 136:6: ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ.
6. * ಆದಿ 7:11, 21; 2 ಪೇತ್ರ. 2:5: ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು.
7. ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು † 2 ಥೆಸ. 1:9: ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ. PEPS
8. ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ‡ ಕೀರ್ತ 90. 4: ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.
9. § ಹಬ 2:3; ಇಬ್ರಿ. 10:37; ಪ್ರಸಂಗಿ. 8:11: ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. * ಯೆಹೆ. 18:23, 32; 33:11: ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ † 1 ತಿಮೊ. 2:4: ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ‡ ಯೆಶಾ 30. 18; ಲೂಕ 18:7; 1 ಪೇತ್ರ. 3:20: ದೀರ್ಘಶಾಂತಿಯುಳ್ಳವನಾಗಿದ್ದಾನೆ.
10. ಆದರೂ § ಮತ್ತಾ 24:42-51; ಲೂಕ 12:39-46; 1 ಥೆಸ. 5:2; ಪ್ರಕ 3:3: ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. * ಮತ್ತಾ 24:35; ಇಬ್ರಿ. 12:26, 27; ಪ್ರಕ 6:14; 20:11; 21:1: ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. † ಯೆಶಾ 34:4: ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ‡ ಕೆಲವು ಪ್ರತಿಗಳಲ್ಲಿ ಭೂಮಿಯೂ ಅದರಲ್ಲಿರುವ ಕೆಲಸಗಳೂ ಕಾಣುವವೇ? ಎಂದು ಬರೆದದೆ. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು. PS
11. {ಲೋಕಾಂತ್ಯವನ್ನು ಎದುರುನೋಡುತ್ತಾ ಪರಿಶುದ್ಧರಾಗಿ ನಡೆಯಿರಿ ಎಂಬ ಬೋಧನೆ} PS ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? § 1 ಪೇತ್ರ. 1:15: ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.
12. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ * ಅಥವಾ, ಬೇಗ ಬರುವಂತೆ ಪ್ರಯತ್ನಿಸುತ್ತಾ. ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.
13. ಆದರೂ ನಾವು ದೇವರ ವಾಗ್ದಾನದ ಪ್ರಕಾರ † ಯೆಶಾ 65:17; 66:22; ಪ್ರಕ 21:1: ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ‡ ಯೆಶಾ 60. 21; ಪ್ರಕ 21:27: ಅವುಗಳಲ್ಲಿ ನೀತಿಯು ವಾಸವಾಗಿರುವುದು. PEPS
14. § 1 ಕೊರಿ 15:58; 1 ಥೆಸ. 3:13; 5:23: ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು * ಯಾಕೋಬ 1:27; ಫಿಲಿ. 2:15: ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.
15. † ವ. 9: ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ‡ ಅ. ಕೃ. 15:25: ನಮ್ಮ ಪ್ರಿಯ ಸಹೋದರನಾದ ಪೌಲನು ಸಹ § 1 ಕೊರಿ 3:10: ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ * ರೋಮಾ. 2:4: ನಿಮಗೆ ಬರೆದಿದ್ದಾನೆ.
16. ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ † ರೋಮಾ. 8:19; 1 ಕೊರಿ 15:24; 1 ಥೆಸ. 4:15: ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ‡ ಯೆಶಾ 28:13: ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.
17. ಆದಕಾರಣ ಪ್ರಿಯರೇ, § 2 ಪೇತ್ರ. 1:12: ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ * 2 ಪೇತ್ರ. 1:10; 1:1 ಕೊರಿ 10:12: ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.
18. ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ † 2 ಪೇತ್ರ. 1:5; ಎಫೆ 4:15; ಕೊಲೊ 1:10; 2:19; 1 ಪೇತ್ರ. 2:2: ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ‡ ರೋಮಾ. 11:36: ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್. PE