Bible Versions
Bible Books

2 Timothy 3 (IRVKN) Indian Revised Version - Kanana

1 {ಅಂತ್ಯ ದಿನಗಳು} PS ಆದರೆ * 1 ತಿಮೊ 4:1 ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ.
2 ಮನುಷ್ಯರು ಫಿಲಿ 2:21 ಸ್ವಾರ್ಥಚಿಂತಕರೂ, ಲೂಕ 16:14; 1 ತಿಮೊ 6:10 ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,
3 § ರೋಮಾ. 1:31 ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, * ತೀತ 1:8 ಒಳ್ಳೆಯದನ್ನು ದ್ವೇಷಿಸುವವರೂ,
4 ದ್ರೋಹಿಗಳೂ, ದುಡುಕುವವರೂ, 1 ತಿಮೊ 3:6; 6:4 ದುರಹಂಕಾರವುಳ್ಳವರೂ, ಫಿಲಿ 3:19 ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ,
5 ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.
6 ಅವರಲ್ಲಿ ಕೆಲವರು § ತೀತ 1:11 ಮನೆಗಳಲ್ಲಿ ನುಸುಳಿ, ಪಾಪಗಳಿಂದ ತುಂಬಿದವರೂ, ನಾನಾ ವಿಧವಾದ ಆಸೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಆಗಿರುತ್ತಾರೆ.
7 ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ * 1 ತಿಮೊ 2:4 ಸತ್ಯದ ಪರಿಜ್ಞಾನವನ್ನು ಹೊಂದಲಾರದವರು.
8 ವಿಮೋ 7:11 ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.
9 ಆದರೆ ಅವರು ಹೆಚ್ಚು ಮುಂದುವರಿಯಲು ಸಾಧ್ಯವಿಲ್ಲ. ವಿಮೋ 7:12; 8:18; 9:11 ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪ್ರಕಟವಾಗಿ ಬಂದ ಹಾಗೆಯೇ ಇವರದೂ ಪ್ರಕಟವಾಗುವುದು. PEPS
10 § ಫಿಲಿ 2:22 ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು, ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ ಇವುಗಳನ್ನೂ,
11 * ಅ. ಕೃ 13:14; 45, 50 ಅಂತಿಯೋಕ್ಯ, ಅ. ಕೃ 14:1,2,5 ಇಕೋನ್ಯ, ಅ. ಕೃ 14:6,19 ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, § ಕೀರ್ತ 34:19 ಅವೆಲ್ಲವುಗಳೊಳಗಿನಿಂದ * 2 ತಿಮೊ 4:17 ಕರ್ತನು ನನ್ನನ್ನು ಬಿಡಿಸಿದನು.
12 ಅ. ಕೃ 14:22 ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.
13 ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಪ್ರಕ 22:11 ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
14 § 2 ತಿಮೊ 1:13 ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬುದನ್ನು ಆಲೋಚಿಸು.
15 * 2 ತಿಮೊ 1:5 ಚಿಕ್ಕಂದಿನಿಂದಲೂ ನಿನಗೆ ಯೋಹಾ 5:39 ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ಕೀರ್ತ 119:99 ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.
16 ದೈವ ಪ್ರೇರಿತವಾದ § ರೋಮ 15:4; 2 ಪೇತ್ರ 1:20,21 ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ.
17 ಆದರಿಂದ * 1 ತಿಮೊ 6:11 ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×