Bible Versions
Bible Books

Exodus 17 (IRVKN) Indian Revised Version - Kanana

1 {ದೇವರು ಬಂಡೆಯೊಳಗಿಂದ ನೀರನ್ನು ಬರಮಾಡಿದ್ದು} PS ತರುವಾಯ ಇಸ್ರಾಯೇಲರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಮೇರೆಗೆ “ಸೀನ್” ಎಂಬ ಮರುಭೂಮಿಯಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿಯೂ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ. PEPS
2 ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು. PEPS
3 ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?” ಎಂದರು. PEPS
4 ಆಗ ಮೋಶೆ ಯೆಹೋವನಿಗೆ ಮೊರೆಯಿಟ್ಟು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲ” ಎಂದನು.
5 ಅದಕ್ಕೆ ಯೆಹೋವನು ಮೋಶೆಗೆ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು ಜನರ ಮುಂದೆ ಹೊರಟು, ನಾನು ತೋರಿಸುವ ಸ್ಥಳಕ್ಕೆ ಹೋಗು.
6 ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
7 ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಸ್ಥಳಕ್ಕೆ * ಮಸ್ಸಾ ಅಂದರೆ ಪರೀಕ್ಷೆ. ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಅಂದರೆ ತರ್ಕ ಅಥವಾ ವಾಗ್ವಾದ. ಮೆರೀಬಾ ಎಂತಲೂ ಹೆಸರಿಟ್ಟನು. PS
8 {ಅಮಾಲೇಕ್ಯರನ್ನು ಸೋಲಿಸಿದ್ದು} PS ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಾಯೇಲರ ಸಂಗಡ ಯುದ್ಧಮಾಡಿದರು.
9 ಆಗ ಮೋಶೆಯು ಯೆಹೋಶುವನು ಇಸ್ರಾಯೇಲರ ಸೇನಾಧಿಪತಿ. 33:11 ಅನ್ನು ನೋಡಿರಿ. ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರೊಡನೆ ಯುದ್ಧಮಾಡಬೇಕು. ನಾನು ನಾಳೆ ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು” ಎಂದು ಹೇಳಿದನು.
10 ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರೊಡನೆ ಯುದ್ಧಮಾಡಿದನು. ಮೋಶೆಯೂ, ಆರೋನನೂ ಮತ್ತು ಹೂರನು ಗುಡ್ಡದ ಮೇಲೆ ಏರಿ ಹೋದರು.
11 ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿದಾಗ ಇಸ್ರಾಯೇಲರು ಬಲಗೊಳ್ಳುವರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಬಲಗೊಳ್ಳುವರು.
12 ಮೋಶೆಯ ಕೈಗಳು ಭಾರವಾದಾಗ, ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದು ಇಟ್ಟರು. ಮೋಶೆಯು ಅದರ ಮೇಲೆ ಕುಳಿತುಕೊಂಡನು. ಆರೋನನು ಒಂದು ಕಡೆಯಲ್ಲಿಯೂ, ಹೂರನು ಇನ್ನೊಂದು ಕಡೆಯಲ್ಲಿಯೂ ನಿಂತುಕೊಂಡು ಮೋಶೆಯ ಕೈಗಳನ್ನು ಎತ್ತಿ ಹಿಡಿಯಲು ಸಹಾಯ ಮಾಡಿದರು. ಹೀಗೆ ಅವನ ಕೈಗಳು ಸೂರ್ಯನು ಮುಳುಗುವವರೆಗೆ ಕೆಳಗಿಳಿಸದೆ ಇದ್ದರು.
13 ಯೆಹೋಶುವನು ಅಮಾಲೇಕ್ಯರನ್ನು ಮತ್ತು ಅವರ ಭಟರನ್ನು ಖಡ್ಗದಿಂದ ಸೋಲಿಸಿದನು. PEPS
14 ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು. PEPS
15 ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ § ಯೆಹೋವನು ನನ್ನ ಜಯಧ್ವಜ. ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು.
16 ಮೋಶೆಯು, “ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನಕ್ಕೆ ವಿರೋಧವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಣೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು” ಎಂದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×