Bible Versions
Bible Books

Hebrews 10 (IRVKN) Indian Revised Version - Kanana

1 ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ * ಇಬ್ರಿ. 8:5; ಕೊಲೊ 2:17: ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಇಬ್ರಿ. 9:9: ಎಂದಿಗೂ ಪರಿಪೂರ್ಣತೆಗೆ ತರಲಾರದು.
2 ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.
3 ಈಗಲಾದರೋ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ ಇಬ್ರಿ. 9:7; ಯಾಜ 16:21: ಪಾಪಗಳ ಜ್ಞಾಪಕವಾಗುವುದುಂಟು,
4 ಯಾಕೆಂದರೆ § ವ. 11. ಯೆಶಾ 1:11-15; ಮೀಕ. 6:6-8: ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.
5 ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ,
* ಕೀರ್ತ 40. 6-8 “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ,
ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,
6 ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ.
7 ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ
ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು.
8 ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.
9 ತರುವಾಯ ಆತನು ವ. 7: “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.
10 ಯೇಸು ಕ್ರಿಸ್ತನು ಇಬ್ರಿ. 7:27; 9:12: ಒಂದೇ ಸಾರಿ § ಮತ್ತಾ 26:26; ಮಾರ್ಕ 14:22; ಲೂಕ 22:19; 1 ಕೊರಿ 11:24: ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ * ಇಬ್ರಿ. 10:5; 2:11; 13:12: ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು. PEPS
11 ಇದಲ್ಲದೆ ಪ್ರತಿಯೊಬ್ಬ ಯಾಜಕನು ಅರಣ್ಯ 28:3: ಪ್ರತಿದಿನ ಸೇವೆಮಾಡುತ್ತಾ, ಇಬ್ರಿ. 9:9; 10:1, 4: ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.
12 ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ § ಇಬ್ರಿ. 1:3; ಮಾರ್ಕ 16:19: ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
13 * ಕೀರ್ತ 110:1; ಇಬ್ರಿ. 1:13. 1 ಕೊರಿ 15:25-28: ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು.
14 ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ವ. 1: ಪರಿಪೂರ್ಣರನ್ನಾಗಿ ಮಾಡಿದ್ದಾನೆ. PEPS
15 ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಾತನಾಗಿ,
16 ಯೆರೆ 31:33; ಇಬ್ರಿ. 8:10; ರೋಮಾ. 11:27: “ಆ ದಿನಗಳು ಬಂದ ಮೇಲೆ
ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,
ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು,
ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,
17 § ಯೆರೆ 31:34; ಇಬ್ರಿ. 8:12: “ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ.
18 ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ. PS
19 {ಯೇಸುವಿನ ಮೂಲಕ ದೇವಸನ್ನಿಧಾನವನ್ನು ಯೋಗ್ಯರಾಗಿ ಸೇರೋಣ} PS 19-20 * ಇಬ್ರಿ. 9:8; ಯೋಹಾ 10:9; 14:6. ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಇಬ್ರಿ. 9:3: ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಇಬ್ರಿ. 4:16: ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.
20 NIL
21 ಮತ್ತು § ಜೆಕ. 6:11-13; ಇಬ್ರಿ. 2:17; 4:14: ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.
22 ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, * ಇಬ್ರಿ. 9:14: ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯೆಹೆ. 36:25; ಇಬ್ರಿ. 12:24. 2 ಕೊರಿ 7:1; 1 ಪೇತ್ರ 1:2: ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.
23 ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಇಬ್ರಿ. 4:14: ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ § ಇಬ್ರಿ. 11:11; 1 ಕೊರಿ 1:9: ವಾಗ್ದಾನ ಮಾಡಿದಾತನು ನಂಬಿಗಸ್ತನು.
24 ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ * ಇಬ್ರಿ. 3:13: ಒಬ್ಬರನ್ನೊಬ್ಬರು ಹುರಿದುಂಬಿಸೋಣ.
25 ಅ. ಕೃ. 2:42: ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ರೋಮಾ. 13:11-13; ಯಾಕೋಬ 5:8: ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ. PEPS
26 ನಾವು § ಇಬ್ರಿ. 6:4; 2 ಪೇತ್ರ. 2:20, 21: ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ * ಅರಣ್ಯ 15:30; ಧರ್ಮೋ 17:12: ಬೇಕೆಂದು ಪಾಪಮಾಡಿದರೆ ಇಬ್ರಿ. 6:6; 1 ಯೋಹಾ 5:16: ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
27 ಬದಲಿಗೆ, ಅತ್ಯಂತ ಇಬ್ರಿ. 2:3; 12:25: ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ § ಯೆಶಾ 26:11; ಚೆಫ. 1:18; 3:8. 2 ಥೆಸ. 1:8: ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.
28 * ಧರ್ಮೋ 17:2-6: ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಅರಣ್ಯ 35:30. ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.
29 ಹೀಗಿರುವಲ್ಲಿ, ಇಬ್ರಿ. 6:6: ದೇವಕುಮಾರನನ್ನು ತುಳಿದು, § ಇಬ್ರಿ. 9:13, 14: ತನ್ನನ್ನು ಶುದ್ಧೀಕರಿಸಿದ * ಇಬ್ರಿ. 13:20; ಜೆಕ. 9:11: ಒಡಂಬಡಿಕೆಯ ರಕ್ತವನ್ನು ಮೂಲ. ಸಾಧಾರಣವೆಂದೆಣಿಸಿ. ಅಶುದ್ಧವೆಂದೆಣಿಸಿ, ಮೂಲ. ಕೃಪೆಯ ಆತ್ಮನನ್ನು. ದೇವರ ಕೃಪಾವರವಾಗಿರುವ ಆತ್ಮನನ್ನು § ಮತ್ತಾ 12:31, 32; ಎಫೆ 4:30. ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?
30 * ಧರ್ಮೋ 32:35; ರೋಮಾ. 12:19: “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ ಧರ್ಮೋ 32:36; ಕೀರ್ತ 50. 4: “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.
31 ಯೆಶಾ 33:14; ಲೂಕ 12:5: ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು. PEPS
32 ಹೀಗಿರಲಾಗಿ § ಇಬ್ರಿ. 6:4: ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ * ಫಿಲಿ. 1:30. ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
33 ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ 1 ಕೊರಿ 4:9: ಹಾಸ್ಯಕ್ಕೆ ಗುರಿಯಾದಿರಿ. ಇಬ್ರಿ. 13:3; ಮತ್ತಾ 25:36; 2 ತಿಮೊ. 1:16: ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.
34 ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ § 1 ಪೇತ್ರ. 1:14: ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ * ಮತ್ತಾ 5:12: ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.
35 ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಇಬ್ರಿ. 2:2; 11:26: ಮಹಾ ಪ್ರತಿಫಲ ಉಂಟು.
36 ನೀವು ಇಬ್ರಿ. 13:21: ದೇವರ ಚಿತ್ತವನ್ನು ನೆರವೇರಿಸಿದ ಮೇಲೆ § ಇಬ್ರಿ. 11:39: ವಾಗ್ದಾನವನ್ನು ಹೊಂದಬೇಕಾದರೆ * ಇಬ್ರಿ. 12:1-7; ಲೂಕ 21:19; ರೋಮಾ. 2:7; 12:12; ಮತ್ತಾ 10:22: ನಿಮಗೆ ತಾಳ್ಮೆಯು ಅವಶ್ಯವಾಗಿದೆ.
37 ಹಬ 2:3, 4: “ಬರುವಾತನು ಹಗ್ಗಾ. 2:6; ಲೂಕ 18:8: ಇನ್ನು ಸ್ವಲ್ಪ ಕಾಲದಲ್ಲಿ
ಬರುವನು ತಡಮಾಡುವುದಿಲ್ಲ.
38 ಆದರೆ ನನ್ನವನಾಗಿರುವ § ರೋಮಾ. 1:17; ಗಲಾ. 3:11: ನೀತಿವಂತನು ನಂಬಿಕೆಯಿಂದಲೇ ಬದುಕುವನು,
ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”
39 ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×