Bible Versions
Bible Books

Hebrews 4 (IRVKN) Indian Revised Version - Kanana

1 ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ * ಇಬ್ರಿ. 12:15: ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.
2 ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಕಾಲದಲ್ಲಿ ಕೇಳಿದವರ ರೋಮಾ. 3:3: ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ 1 ಥೆಸ. 2:13: ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
3 ಈಗ ನಂಬುವವರಾದ ನಾವುಗಳೇ § ಕೀರ್ತ 95:11; ಇಬ್ರಿ. 3:11: ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ
“ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು
ನಾನು ಕೋಪದಿಂದ ಪ್ರಮಾಣ ಮಾಡಿದೆನು” ಎಂದು ಹೇಳಿದೆಯಲ್ಲಾ. PEPS
4 ಎಲ್ಲಿಯೋ ಒಂದು ಕಡೆ ಏಳನೆಯ ದಿನವನ್ನು ಕುರಿತಾಗಿ, * ಆದಿ 2:2; ವಿಮೋ 20:11; 31:17: “ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂದು” ಬರೆದದೆ.
5 ಇಬ್ರಿ. 4:3: “ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು” ಎಂದು ಭಾಗದಲ್ಲಿ ಆತನು ಪುನಃ ಹೇಳಿದ್ದಾನೆ.
6 ಆದ್ದರಿಂದ, ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದರು.
7 ಪುನಃ ಬಹುಕಾಲದ ನಂತರ ಆತನು ದಾವೀದನ ಮೂಲಕ ‘ಈ ಹೊತ್ತೇ’ ಎಂದು ಬೇರೊಂದು ದಿನವನ್ನು ಗೊತ್ತುಮಾಡಿದ್ದಾನೆ. ಹೇಗೆಂದರೆ,
ಇಬ್ರಿ. 3:7, 8: “ನೀವು ಹೊತ್ತು ದೇವರ ಸ್ವರಕ್ಕೆ ಕಿವಿಗೊಡುವುದಾದರೆ,
ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ!” ಎಂದು ಹೇಳುತ್ತಾನಷ್ಟೆ. PEPS
8 § ಯೆಹೋ. 3:10, 14-17; ಅ. ಕೃ. 7:45: ಯೆಹೋಶುವನು ಅವರನ್ನು ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ.
9 ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.
10 ಹೇಗೆಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.
11 ಆದ್ದರಿಂದ ನಾವು ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. * ಇಬ್ರಿ. 3:12: ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.
12 ಏಕೆಂದರೆ 1 ಪೇತ್ರ. 1:23: ದೇವರ ವಾಕ್ಯವು ಸಜೀವವಾದದ್ದು, ಯೆರೆ 23:29; ಅ. ಕೃ. 2:37; 1 ಥೆಸ. 2:13: ಸಕ್ರಿಯವಾದದ್ದು ಮತ್ತು ಯಾವ § ಪ್ರಕ 1:16; 2:12: ಇಬ್ಬಾಯಿ ಕತ್ತಿಗಿಂತಲೂ * ಯೆಶಾ 49:2; ಎಫೆ 6:17: ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, 1 ಕೊರಿ 14:24, 25: ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
13 2 ಪೂರ್ವ 16:9; ಯೋಬ. 34:21; ಕೀರ್ತ 33:13-15; ಜ್ಞಾ. 15:11: ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. § ಯೋಬ. 26:6: ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ. PS
14 {ಯೇಸು ಶ್ರೇಷ್ಠನಾದ ಮಹಾಯಾಜಕನು} PS * ಇಬ್ರಿ. 7:26; 9:24; ಎಫೆ 4:10: ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಇಬ್ರಿ. 2:17, 3:1; ಇಬ್ರಿ. 10:21: ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ಇಬ್ರಿ. 10:23: ನಂಬಿಕೆಯನ್ನು ದೃಢವಾಗಿ ಹಿಡಿಯೋಣ.
15 ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ § ಯೆಶಾ 53:3; ಇಬ್ರಿ. 5:2: ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. * ಇಬ್ರಿ. 2:17, 18: ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಇಬ್ರಿ. 7:26; 9:28; 2 ಕೊರಿ 5:21; 1 ಪೇತ್ರ. 2:22; 1 ಯೋಹಾ 3:5; ಯೋಹಾ 8:46; 14:30. ಪಾಪ ಮಾತ್ರ ಮಾಡಲಿಲ್ಲವಷ್ಟೇ.
16 ಆದುದರಿಂದ ಇಬ್ರಿ. 7:19, 25; 10:19; ಎಫೆ 2:18; 3:12: ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×