Bible Versions
Bible Books

Isaiah 7 (IRVKN) Indian Revised Version - Kanana

1 {ಆಹಾಜನಿಗೆ ಯೆಶಾಯನ ಬೋಧನೆ} PS ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ.
2 ಅರಾಮ್ಯರು ಎಫ್ರಾಯೀಮ್ಯರೊಂದಿಗೆ * ಎಫ್ರಾಯೀಮ್ಯರೊಂದಿಗೆ ಅಂದರೆ ಇಸ್ರಾಯೇಲ್ಯರ ಉತ್ತರ ರಾಜ್ಯ. ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು. PEPS
3 ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಪ್ರಕಾರ ಹೇಳಬೇಕು,
4 ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’ ” PEPS
5 ಅರಾಮ್ಯರೂ, ಎಫ್ರಾಯೀಮ್ಯರೂ ಮತ್ತು ರೆಮಲ್ಯನ ಮಗನೂ ನಿನ್ನ ವಿಷಯವಾಗಿ ದುರಾಲೋಚನೆ ಮಾಡಿ,
6 “ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ” ಎಂದುಕೊಂಡಿದ್ದಾರೆ.
7 ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಇದು ನೆರವೇರುವುದಿಲ್ಲ; ಇದು ಆಗುವುದೇ ಇಲ್ಲ.
8 ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ.
ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.
9 ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ.
ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ. PS
10 {ಇಮ್ಮಾನುವೇಲನ ಮುಂಗುರುತು} PS ಮತ್ತೆ ಯೆಹೋವನು ಆಹಾಜನಿಗೆ,
11 “ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು.
12 ಆಗ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದನು. PEPS
13 ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?
14 ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
15 ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳಿವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವನು. PEPS
16 “ಏಕೆಂದರೆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು.
17 ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.”
18 ಕಾಲದಲ್ಲಿ
ಐಗುಪ್ತದ ನದಿಗಳ ಕಟ್ಟಕಡೆಯಿಂದ ಬರುವ ನೊಣಕ್ಕೂ,
ಅಶ್ಶೂರ ದೇಶದ ದುಂಬಿಗಳಿಗೂ ಯೆಹೋವನು ಸಿಳ್ಳುಹಾಕುವನು.
19 ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ,
ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು. PEPS
20 ಆಗ ಕರ್ತನು ಯೂಫ್ರೆಟಿಸ್ ನದಿಯ ಆಚೆಗಿರುವ
ಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು.
21 ಕಾಲದಲ್ಲಿ ಮನುಷ್ಯನು ಒಂದು ಹಸುವಿನ ಕರುವನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
22 ಅವು ಸಮೃದ್ಧಿಯಾಗಿ ಹೆಚ್ಚು ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು.
ಏಕೆಂದರೆ ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿಂದು ಜೀವಿಸುವನು.
23 ಆಗ ಸಾವಿರ ರೂಪಾಯಿ ಸಾವಿರ ರೂಪಾಯಿ ಅಂದರೆ 11.5 ಕಿಲೋಗ್ರಾಂ. ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ,
ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.
24 ದೇಶವೆಲ್ಲಾ ಮುಳ್ಳು ಮತ್ತು ದತ್ತೂರಿಗಳ ಪೊದೆಯಾಗಿರುವುದಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.
25 ಗುದ್ದಲಿಯಿಂದ ಅಗೆಯುತ್ತಿದ್ದ ಯಾವ ಗುಡ್ಡಕ್ಕೂ ನೀನು ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೇ ಇರುವಿ.
ಆದರೆ ಅದು ದನಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×