Bible Books

2
:

1. {ಪಕ್ಷಪಾತವನ್ನು ಕುರಿತದ್ದು} PS ನನ್ನ ಸಹೋದರರೇ, * 1 ಕೊರಿ 2:8, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ವ. 9; ಯಾಜ 19:15; ಧರ್ಮೋ 1:17; 10:17; ಜ್ಞಾ. 24:23; ರೋಮಾ. 2:11; ಎಫೆ 6:9: ಪಕ್ಷಪಾತಿಗಳಾಗಿರಬಾರದು.
2. ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ,
3. ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಬಡ ಮನುಷ್ಯನಿಗೆ ಜ್ಞಾ. 18:23: “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ,
4. ನೀವು ನಿಮ್ಮ ನಿಮ್ಮಲ್ಲಿ § ಯೋಹಾ 7:24: ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ? PEPS
5. ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು * 1 ಕೊರಿ 1:27,28; ಯೋಬ. 34:19: ಲೋಕದಲ್ಲಿನ ಬಡವರನ್ನು 2 ಕೊರಿ 8:9; ಪ್ರಕ 2:9; ಲೂಕ 12:21: ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ಯಾಕೋಬ. 1:12: ತನ್ನನ್ನು ಪ್ರೀತಿಸುವವರಿಗೆ § ಮತ್ತಾ 5:3; ಲೂಕ 6:20; 12:32: ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
6. ನೀವಾದರೋ * 1 ಕೊರಿ 11:22: ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ಅ. ಕೃ. 8:3; 16:19; 18:12: ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
7. ನೀವು ಕರೆಯಲ್ಪಟ್ಟ ಯೆಶಾ 63:19; ಆಮೋ. 9:12; ಅ. ಕೃ. 15:17: ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ? PEPS
8. ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ § ಯಾಜ 19:18: “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.
9. ಒಂದು ವೇಳೆ ಅದನ್ನು ಬಿಟ್ಟು ನೀವು * ವ. 1: ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ.
10. ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಮತ್ತಾ 5:19; ಗಲಾ. 3:10: ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ.
11. ಏಕೆಂದರೆ ವಿಮೋ 20:13,14: ವ್ಯಭಿಚಾರ ಮಾಡಬಾರದೆಂದು ಹೇಳಿದವನೇ ನರಹತ್ಯ ಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಶಾಸ್ತ್ರವನ್ನು ಮೀರಿದವನಾಗಿರುತ್ತಿ.
12. ನೀವು § ಅಥವಾ, ಬಿಡುಗಡೆಯಾದವರಿಗೆ ಇರುವ. ಯಾಕೋಬ. 1:25: ಬಿಡುಗಡೆಯನ್ನುಂಟು ಮಾಡುವ ಧರ್ಮಶಾಸ್ತ್ರದ ಪ್ರಕಾರ ತೀರ್ಪುಹೊಂದುವವರಿಗೆ ತಕ್ಕಂತೆ ಮಾತನಾಡಿರಿ ಮತ್ತು ವಿಧೇಯರಾಗಿರಿ.
13. ಏಕೆಂದರೆ * ಯೋಬ. 22:6-11; ಕೀರ್ತ 18:25; ಜ್ಞಾ. 21:13; ಲೂಕ 6:38: ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ. PS
14. {ನಂಬಿಕೆಯೊಂದೇ ಸಾಲದು ಅದರಂತೆ ನಡೆಯಬೇಕೆಂಬ ಬೋಧನೆ} PS ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ಯಾಕೋಬ. 1:22: ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ?
15. ನಿಮ್ಮಲ್ಲಿ ಯೋಬ. 31:19,20: ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ,
16. ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ “ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ” ಎಂದು § 1 ಯೋಹಾ 3:17,18: ಹೇಳಿದರೆ ಪ್ರಯೋಜನವೇನು?
17. ಹಾಗೆಯೇ ಕ್ರಿಯೆಗಳಿಲ್ಲದ ನಂಬಿಕೆಯು ನಿರ್ಜೀವವಾದದು.
18. ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” * ರೋಮಾ. 3:28; ಇಬ್ರಿ. 11:33: ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ಮತ್ತಾ 7:16,17; ಗಲಾ. 5:6: ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.
19. ಧರ್ಮೋ 6:4; 1 ಕೊರಿ 8:6: ದೇವರು ಒಬ್ಬನೇ ಎಂದು ನೀನು ನಂಬುತ್ತೀ; ಹಾಗೆ ನಂಬುವುದು ಸರಿ. ಆದರೆ § ಮತ್ತಾ 8:29; ಲೂಕ 4:33,34; ಅ. ಕೃ. 16:17; 19:15: ದೆವ್ವಗಳು ಸಹ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.
20. ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ?
21. ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ * ಆದಿ 22:9,12,16-18 ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ?
22. ಅವನ ನಂಬಿಕೆಯು ಇಬ್ರಿ. 11:17: ಕ್ರಿಯೆಗಳೊಂದಿಗೆ ಕಾರ್ಯಮಾಡಿತ್ತು ಮತ್ತು 1 ಥೆಸ. 1:3: ಕ್ರಿಯೆಗಳಿಂದಲೇ ಅವನ ನಂಬಿಕೆಯ ಉದ್ದೇಶವು ನೆರವೇರಿತು ಎಂದು ಕಾಣುತ್ತೇವಲ್ಲಾ.
23. § ಆದಿ 15:6; ರೋಮಾ. 4:3; ಗಲಾ. 3:6: “ಅಬ್ರಹಾಮನು ದೇವರನ್ನು ನಂಬಿದನು ಮತ್ತು ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು * 2 ಪೂರ್ವ 20:7; ಯೆಶಾ 41:8: ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.
24. ಆದುದರಿಂದ ಮನುಷ್ಯನು, ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲ ಎಂದು ನೋಡುತ್ತೀರಿ.
25. ಅದೇ ರೀತಿಯಾಗಿ ವೇಶ್ಯೆಯಾದ ಇಬ್ರಿ. 11:31: ರಾಹಾಬಳು ಯೆಹೋ. 2:1-22; 6:23: ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ?
26. ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿದೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×