Bible Versions
Bible Books

Nehemiah 11 (IRVKN) Indian Revised Version - Kanana

1 {ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದವರ ಪಟ್ಟಿ} PS ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.
2 ಮತ್ತು ಸ್ವಇಚ್ಛೆಯಿಂದ ಯೆರೂಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು. PEPS
3 ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ ಸಂಸ್ಥಾನ ಪ್ರಧಾನರು ಯಾರಾರೆಂದರೆ: ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರು, ಸೊಲೊಮೋನನ ಸೇವಕರ ವಂಶದವರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. PEPS
4 ಯೆರೂಸಲೇಮಿನಲ್ಲಿ, ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಲ್ಲಿ ಕೆಲವರು ವಾಸವಾಗಿದ್ದರು. ಯೆಹೂದ ಕುಲದವರಲ್ಲಿ: ಅತಾಯನು, ಇವನು ಉಜ್ಜೀಯನ ಮಗ; ಇವನು ಜೆಕರ್ಯನ ಮಗ; ಇವನು ಅಮರ್ಯನ ಮಗ; ಇವನು ಶೆಫಟ್ಯನ ಮಗ; ಇವನು ಮಹಲಲೇಲನ ಮಗ, ಇವನು ಪೆರೆಚ್ ಸಂತಾನದವನು.
5 ಇನ್ನೊಬ್ಬನು ಮಾಸೇಯ, ಇವನು ಬಾರೂಕನ ಮಗ; ಇವನು ಕೊಲ್ಹೋಜೆಯ ಮಗ; ಇವನು ಹಜಾಯನ ಮಗ; ಇವನು ಅದಾಯನ ಮಗ; ಇವನು ಯೋಯಾರೀಬನ ಮಗ; ಇವನು ಜೆಕರ್ಯನ ಮಗ, ಇವನು ಶೇಲಹನ ಸಂತಾನದವನು.
6 ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರ ಆರುವತ್ತೆಂಟು ಮಂದಿ. PEPS
7 ಬೆನ್ಯಾಮೀನ್ ಕುಲದವರಲ್ಲಿ: ಸಲ್ಲು, ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ.
8 ರಣವೀರರಾದ ಗಬ್ಬೈ ಮತ್ತು ಸಲ್ಲೈ ಹಾಗು ಒಂಭೈನೂರಿಪ್ಪತ್ತೆಂಟು ಮಂದಿ.
9 ಜಿಕ್ರಿಯನ ಮಗನಾದ ಯೋವೇಲನು ಇವರ ನಾಯಕನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಎರಡನೆಯ ಪುರಾಧಿಕಾರಿಯಾಗಿದ್ದನು.
10 ಯಾಜಕರಲ್ಲಿ: ಯೋಯಾರೀಬನ ಮಗನಾದ ಯೆದಾಯ, ಮತ್ತು ಯಾಕೀನ್,
11 ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ, ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ, ದೇವಾಲಯದ ಅಧಿಪತಿಯೂ ಆದ ಸೆರಾಯ ಇವರು.
12 ಮತ್ತು ದೇವಾಲಯದ ಸೇವೆ ನಡೆಸುತ್ತಿದ್ದ ಇವರ ಬಂಧುಗಳು ಒಟ್ಟು ಎಂಟುನೂರ ಇಪ್ಪತ್ತೆರಡು ಮಂದಿ. ಇವರಲ್ಲದೆ ಅದಾಯನೆಂಬುವನು ಇನ್ನೊಬ್ಬನು. ಇವನು ಯೆರೋಹಾಮನ ಮಗ; ಇವನು ಪೆಲಲ್ಯನ ಮಗ; ಇವನು ಅಮ್ಚೀಯನ ಮಗ; ಇವನು ಜೆಕರ್ಯನ ಮಗ; ಇವನು ಪಷ್ಹೂರನ ಮಗ; ಇವನು ಮಲ್ಕೀಯನ ಮಗ.
13 ಗೋತ್ರಪ್ರಧಾನರಾದ ಅದಾಯನ ಬಂಧುಗಳು ಇನ್ನೂರ ನಲ್ವತ್ತೆರಡು ಮಂದಿ. ಅಮಷ್ಷೈ ಎಂಬುವನು ಮತ್ತೊಬ್ಬನು. ಇವನು ಅಜರೇಲನ ಮಗ; ಇವನು ಅಹಜೈಯನ ಮಗ; ಇವನು ಮೆಷಿಲ್ಲೇಮೋತನ ಮಗ; ಇವನು ಇಮ್ಮೇರನ ಮಗ.
14 ರಣವೀರರಾಗಿದ್ದ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕನು. PEPS
15 ಲೇವಿಯರಲ್ಲಿ: ಹಷ್ಷೂಬನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಬುನ್ನೀ ವಂಶದವನೂ ಆದ ಶೆಮಾಯನು.
16 ಲೇವಿಗೋತ್ರ ಪ್ರಧಾನರಲ್ಲಿ: ದೇವಾಲಯದ ಹೊರಗಿನ ಕಾರ್ಯಗಳ ಮೇಲ್ವಿಚಾರಕನಾದ ಶಬ್ಬೆತೈ, ಯೋಜಾಬಾದ್ ಎಂಬುವವರು,
17 ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಆಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ದ ಎಂಬುವವರು,
18 ಪರಿಶುದ್ಧ ನಗರದಲ್ಲಿದ್ದ ಎಲ್ಲಾ ಲೇವಿಯರು ಒಟ್ಟು ಇನ್ನೂರ ಎಂಭತ್ತನಾಲ್ಕು ಮಂದಿ.
19 ದ್ವಾರಪಾಲಕರಲ್ಲಿ; ಅಕ್ಕೂಬ್, ಟಲ್ಮೋನರೂ ಮತ್ತು ಬಾಗಿಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ ಒಟ್ಟು ನೂರ ಎಪ್ಪತ್ತೆರಡು ಮಂದಿ. PEPS
20 ಉಳಿದ ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸಮಾಡುತ್ತಿದ್ದರು.
21 ದೇವಾಲಯದ ಸೇವಕರು ಓಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು. ಚೀಹ, ಗಿಷ್ಪ ಎಂಬುವವರು ಇವರ ನಾಯಕರಾಗಿದ್ದರು.
22 ದೇವಾಲಯದ ಕೆಲಸದ ಸಂಬಂಧವಾಗಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯನ ಮಗನೂ, ಹಷಬ್ಯನ ಮೊಮ್ಮಗನೂ, ಮತ್ತನ್ಯನ ಮರಿಮಗನೂ, ಮೀಕನ ವಂಶದವನಾದ ಆದ ಉಜ್ಜೀಯು ಯೆರೂಸಲೇಮಿನಲ್ಲಿದ್ದ ಲೇವಿಯರ ನಾಯಕನಾಗಿದ್ದನು.
23 ಗಾಯಕರ ಅನುದಿನದ ಖರ್ಚಿಗಾಗಿ ಒಂದು ನಿಯಮ ಇತ್ತು.
24 ಮೆಷೇಜಬೇಲನ ಮಗನೂ, ಜೆರಹನ ಸಂತಾನದವನೂ, ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರ್ಯಭಾರಿಯಾಗಿದ್ದನು. PEPS
25 ಭೂಸ್ವಾಸ್ಥ್ಯವಿದ್ದವರು ವಾಸಿಸುತ್ತಿದ್ದ ಊರುಗಳು: ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್ ಇವುಗಳೂ ಮತ್ತು ಇವುಗಳ ಗ್ರಾಮಗಳು,
26 ಯೇಷೂವ, ಮೋಲಾದ, ಬೇತ್ಪೆಲೆಟ್ ಇವುಗಳೂ ಮತ್ತು ಇವುಗಳ ಗ್ರಾಮಗಳು,
27 ಹಚರ್‌ ಷೂವಾಲ್ ಹಾಗು ಬೇರ್ಷೆಬ ಇವುಗಳೂ ಮತ್ತು ಇವುಗಳ ಗ್ರಾಮಗಳು,
28 ಚಿಕ್ಲಗ್, ಮೆಕೋನವೂ ಇವುಗಳೂ ಮತ್ತು ಇವುಗಳ ಗ್ರಾಮಗಳು,
29 ಏನ್ರಿಮ್ಮೋನ್, ಚೊರ್ರ, ಯರ್ಮೂತ್ ಇವುಗಳೂ ಮತ್ತು ಇವುಗಳ ಗ್ರಾಮಗಳು,
30 ಜನೋಹ, ಅದುಲ್ಲಾಮ್ ಇವುಗಳ ಮತ್ತು ಇವುಗಳ ಗ್ರಾಮಗಳು ಮತ್ತು ಲಾಕೀಷ್ ಇದರ ಪ್ರಾಂತ್ಯಗಳು, ಅಜೇಕವೂ ಅದರ ಗ್ರಾಮಗಳು ಯೆಹೂದ ಕುಲದವರ ನಿವಾಸ ಸ್ಥಾನಗಳಾಗಿದ್ದವು. ಅವರು ಬೇರ್ಷೆಬದಿಂದ ಹಿನ್ನೋಮ್ ಕಣಿವೆಯವರೆಗೂ ವಾಸಮಾಡುತ್ತಿದ್ದರು. PEPS
31 ಬೆನ್ಯಾಮೀನ್ ಕುಲದವರು ಗೆಬ ಊರಿನಿಂದ, ಮಿಕ್ಮಾಷ್, ಅಯ್ಯಾ ಹಾಗು ಬೇತೇಲ್ ಎಂಬ ಗ್ರಾಮಗಳವರೆಗೂ ವಾಸಮಾಡುತ್ತಿದ್ದರು.
32 ಅನಾತೋತ್, ನೋಬ್, ಅನನ್ಯ,
33 ಹಾಚೋರ್, ರಾಮಾ, ಗಿತ್ತಯಿಮ್,
34 ಹಾದೀದ್, ಚೆಬೋಯಿಮ್, ನೆಬಲ್ಲಾಟ್,
35 ಲೋದ್, ಓನೋ, ಗೇಹರಾಷೀಮ್ ಎಂಬ ಗ್ರಾಮಗಳೂ ಬೆನ್ಯಾಮೀನ್ ಕುಲದವರ ನಿವಾಸ ಸ್ಥಾನಗಳಾಗಿದ್ದವು.
36 ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರೊಂದಿಗೂ, ಕೆಲವರು ಬೆನ್ಯಾಮೀನ್ಯರೊಂದಿಗೂ ವಾಸಮಾಡುತ್ತಿದ್ದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×