Bible Versions
Bible Books

Psalms 149 (IRVKN) Indian Revised Version - Kanana

1 ಯೆಹೋವನಿಗೆ ಸ್ತೋತ್ರ!
ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ;
ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.
2 ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ;
ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.
3 ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ;
ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.
4 ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು;
ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.
5 ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ;
ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.
6 ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ,
ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.
7 ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು;
ಅನ್ಯಜನಗಳನ್ನು ದಂಡಿಸುವರು;
8 ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು;
ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು.
9 ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು;
ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು.
ಯೆಹೋವನಿಗೆ ಸ್ತೋತ್ರ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×