Bible Versions
Bible Books

Psalms 4 (IRVKN) Indian Revised Version - Kanana

1 ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ;
ಸದುತ್ತರವನ್ನು ದಯಪಾಲಿಸು.
ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ,
ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು.
2 ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ,
ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ?
ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ
3 ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ.
ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.
4 ಭಯಪಡಿರಿ, ಪಾಪಮಾಡಬೇಡಿರಿ;
ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. ಸೆಲಾ
5 ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ;
ಯೆಹೋವನಲ್ಲಿಯೇ ಭರವಸವಿಡಿರಿ.
6 “ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ.
ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.
7 ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ
ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.
8 ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು.
ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×