Bible Books

:
-

1. ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ;
ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.
2. ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ;
ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.
3. ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ,
ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.
4. ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ,
ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. ಸೆಲಾ
5. ದೇವರು ಜಯಘೋಷದಿಂದ ಏರಿದ್ದಾನೆ;
ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.
6. ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ;
ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ.
7. ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು;
ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.
8. ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ;
ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.
9. ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ
ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ;
ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ.
ಆತನೇ ಸರ್ವೋನ್ನತನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×