Bible Versions
Bible Books

Psalms 53 (IRVKN) Indian Revised Version - Kanana

1 ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ;
ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ;
ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು
ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,
3 ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ;
ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.
4 ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ?
* ಅಥವಾ ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ;
ದೇವರನ್ನು ಪ್ರಾರ್ಥಿಸುವುದಿಲ್ಲ.
5 ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ,
ಅವರು ಪಕ್ಕನೆ ಭಯಭ್ರಾಂತರಾದರು;
ಅಥವಾ ನಿಮಗೆ ಮುತ್ತಿಗೆಹಾಕಿದವರನ್ನು. ದುಷ್ಟರನ್ನು ದೇವರು ಸಂಹರಿಸಿ
ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ.
ಅಥವಾ ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅವಮಾನಪಡಿಸಿದ್ದೀರಿ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.
6 ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ.
ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ,
ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು;
ಇಸ್ರಾಯೇಲರು ಹರ್ಷಿಸುವರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×