Bible Books

:
-

1. ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ;
ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.
2. ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ;
ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.
3. ಯೆಹೋವನು ಮಹಾದೇವರೂ,
ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.
4. ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ;
ಪರ್ವತಶಿಖರಗಳು ಆತನವೇ.
5. ಆತನೇ ಸಮುದ್ರವನ್ನು ನಿರ್ಮಿಸಿದವನು;
ಅದು ಆತನದೇ, ಒಣನೆಲವು ಆತನ ಕೈಕೆಲಸವೇ.
6. ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ
ಸಾಷ್ಟಾಂಗವೆರಗಿ ಆರಾಧಿಸೋಣ.
7. ಆತನು ನಮ್ಮ ದೇವರು;
ನಾವೋ ಆತನು ಪಾಲಿಸುವ ಪ್ರಜೆಯೂ,
ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ.
ನೀವು ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.
8. ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ * ಮೆರೀಬ ಅಂದರೆ ವಾಗ್ವಾದ. ,
ಮಸ್ಸಾದಲ್ಲಿ ಮಸ್ಸಾದಲ್ಲಿ ಅಂದರೆ ಪರೀಕ್ಷೆ, ವಿಮೋ 17:1-17, ಅರಣ್ಯ 20:1-13, ಧರ್ಮೋ 6:16, 33:8. ಮಾಡಿದ ದಿನದಂತೆ,
ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.
9. ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು;
ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.
10. ನಾನು ನಲ್ವತ್ತು ವರ್ಷ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು;
“ಈ ಜನರು ಹೃದಯದಲ್ಲಿ ತಪ್ಪಿಹೋಗುವವರು,
ನನ್ನ ಆಜ್ಞೆಗಳಿಗೆ ವಿಧೇಯರಾಗದವರು ನನ್ನ ಆಜ್ಞೆಗಳಿಗೆ ವಿಧೇಯರಾಗದವರು ಅಥವಾ ನನ್ನ ಮಾರ್ಗವನ್ನು ತಿಳಿಯದವರು. ಎಂದು ಹೇಳಿದೆನು.
11. ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು
ಕೋಪಗೊಂಡು ಪ್ರಮಾಣಮಾಡಿದೆನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×