Bible Versions
Bible Books

Ruth 4 (IRVKN) Indian Revised Version - Kanana

1 {ರೂತಳು ಬೋವಜನನ್ನು ಮದುವೆಯಾದದ್ದು} PS ಬೋವಜನು ಊರಬಾಗಿಲಿನ ಬಳಿಗೆ ಹೋಗಿ ಅಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಮಾರ್ಗವಾಗಿ ಹೋಗುತ್ತಿದ್ದುದನ್ನು ಕಂಡು, ಬೋವಜನು ಅವನಿಗೆ “ಬಾರಪ್ಪಾ, ಇಲ್ಲಿ ಬಂದು ಕುಳಿತುಕೋ” ಎಂದು ಕರೆಯಲು ಅವನು ಬಂದು ಕುಳಿತುಕೊಂಡನು.
2 ಇದಲ್ಲದೆ ಅವನು ಊರಿನ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದಾಗ ಅವರೂ ಬಂದು ಕುಳಿತುಕೊಂಡರು.
3 ಆಗ ಅವನು ಸಮೀಪಬಂಧುವಿಗೆ, “ಮೋವಾಬ್ ದೇಶದಿಂದ ಹಿಂದಿರುಗಿ ಬಂದಿರುವ ನವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನ ಪಾಲಿಗೆ ಬಂದ ಹೊಲವನ್ನು ಮಾರಬೇಕೆಂದಿದ್ದಾಳೆ.
4 ನಾನು ನಿನಗೆ ಹೇಳಬೇಕೆಂದಿರುವುದೇನಂದರೆ ‘ನಿನಗೆ ಅದನ್ನು ಕೊಂಡುಕೊಳ್ಳುವ ಮನಸ್ಸಿದ್ದರೆ ಇಲ್ಲಿ ಕುಳಿತಿರುವ ಊರಿನ ಹಿರಿಯರ ಮುಂದೆಯೇ ಕೊಂಡುಕೋ.’ ಇಲ್ಲದಿದ್ದರೆ ನನಗೆ ತಿಳಿಸು; ಇದು ನನಗೆ ಗೊತ್ತಾಗಬೇಕು. ನೀನೂ, ನಿನ್ನ ತರುವಾಯ ನಾನೂ ಅಲ್ಲದೆ ಅದನ್ನು ಕೊಂಡುಕೊಳ್ಳತಕ್ಕ ಬಾಧ್ಯರು ಬೇರೆ ಯಾರೂ ಇಲ್ಲ” ಎಂದು ಹೇಳಲು ಅವನು “ನಾನೇ ಕೊಂಡುಕೊಳ್ಳುತ್ತೇನೆ” ಅಂದನು.
5 ಆಗ ಬೋವಜನು “ನೀನು ನವೊಮಿಯಿಂದ ಹೊಲವನ್ನು ತೆಗೆದುಕೊಳ್ಳುವ ದಿನದಲ್ಲಿ, ಹೊಲದ ಖಾತೆಯೂ ಆಕೆಯ ಸತ್ತುಹೋದ ಮಗನ ಹೆಸರಿನಲ್ಲೇ ಉಳಿಯುದಿರುವಂತೆ, ಅವನ ಹೆಂಡತಿ ಮೋವಾಬ್ಯಳಾದ ರೂತಳನ್ನೂ ತೆಗೆದುಕೊಳ್ಳಬೇಕು” ಎಂದು ತಿಳಿಸಿದನು.
6 ಅದಕ್ಕೆ ಸಮೀಪಬಂಧುವು “ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು” ಅಂದನು. PEPS
7 ಯಾವುದಾದರೊಂದು ವಸ್ತುವನ್ನು ಬಿಡಿಸಿಕೊಳ್ಳುವಾಗಲೂ, ತೆಗೆದುಕೊಳ್ಳುವಾಗಲೂ, ಕೊಡುವಾಗಲೂ ಮಾತನ್ನು ದೃಢಪಡಿಸುವುದಕ್ಕೋಸ್ಕರ ಇಸ್ರಾಯೇಲರಲ್ಲಿ ಪೂರ್ವಕಾಲದಿಂದ ಇದ್ದ ಪದ್ಧತಿ ಯಾವುದಂದರೆ, ಕೊಡುವವನು ತೆಗೆದುಕೊಳ್ಳುವವನಿಗೆ ತನ್ನ ಪಾದರಕ್ಷೆಯನ್ನು ಬಿಚ್ಚಿ ಕೊಡಬೇಕು; ಇದರಿಂದ ಮಾತು ದೃಢವಾಯಿತೆಂದು ಇಸ್ರಾಯೇಲ್ಯರು ತಿಳಿದುಕೊಳ್ಳುವರು.
8 ಹಾಗೆಯೇ ಸಮೀಪಬಂಧುವು ಬೋವಜನಿಗೆ “ನೀನೇ ತೆಗೆದುಕೋ” ಎಂದು ಹೇಳಿ ತನ್ನ ಪಾದರಕ್ಷೆಯನ್ನು ತೆಗೆದುಕೊಟ್ಟನು. PEPS
9 ಆಗ ಬೋವಜನು ಹಿರಿಯರಿಗೂ, ಎಲ್ಲಾ ಜನರಿಗೂ “ನಾನು ಎಲೀಮೆಲೆಕ್, ಕಿಲ್ಯೋನ್, ಮಹ್ಲೋನ್ ಎಂಬುವರಿಗಿದ್ದದ್ದನ್ನೆಲ್ಲಾ ನವೊಮಿಯಿಂದ ತೆಗೆದುಕೊಂಡಿದ್ದೇನೆ;
10 ಇದಲ್ಲದೆ ಹೊಲದ ಖಾತೆಯು ಸತ್ತುಹೋದ ಮಹ್ಲೋನನ ಹೆಸರಿನಲ್ಲೇ ಉಳಿದು, ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ ಇದಕ್ಕೆ ನೀವೇ ಸಾಕ್ಷಿಗಳು” ಎಂದು ಹೇಳಿದನು.
11 ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; * ಯೆಹೋವನು ರಾಹೇಲ್, ಲೇಯಾ ಎಂಬ ಸ್ತ್ರೀಯರಿಗೆ ಯಾಕೋಬನ ಮೂಲಕ ಅನೇಕ ಮಕ್ಕಳು ಹುಟ್ಟುವಂತೆ ಮಾಡಿದನು. ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇತ್ಲೆಹೇಮಿನಲ್ಲಿ ಪ್ರಸಿದ್ಧನಾಗು.
12 ಯೆಹೋವನು ಸ್ತ್ರೀಯ ಮೂಲಕ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆಯು ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಎಫ್ರಾತ್ ಗೋತ್ರದ ಪೂರ್ವಿಕನು. ಪೆರೆಚನ ಮನೆಗೆ ಸಮಾನವಾಗಲಿ” ಅಂದರು. PEPS
13 ಬೋವಜನು ರೂತಳನ್ನು ಹೆಂಡತಿಯನ್ನಾಗಿ ಪರಿಗ್ರಹಿಸಿದ್ದರಿಂದ ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಮಗನನ್ನು ಹೆತ್ತಳು.
14 ಆಗ ಹೆಂಗಸರು ನವೊಮಿಗೆ “ಈ ಹೊತ್ತು ನಿನಗೆ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಮಗನು ಇಸ್ರಾಯೇಲ್ಯರಲ್ಲಿ ಪ್ರಖಾತ್ಯನಾಗಲಿ.
15 ಇವನು ನಿನಗೆ ನವಚೈತನ್ಯ ನೀಡಿ ಪುನರ್ಜನ್ಮ ಹೊಂದುವಂತೆ ಮಾಡುವನು, ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಕನಾಗಿರುವನು. ನಿನ್ನನ್ನು ಬಹಳವಾಗಿ ಪ್ರೀತಿಸುತ್ತಾ ಏಳು ಮಂದಿ ಮಕ್ಕಳಿಗಿಂತ ಹೆಚ್ಚಾಗಿ ನಿನ್ನನ್ನು ಪ್ರೀತಿಸಿ ಗೌರವಿಸುವ ನಿನ್ನ ಸೊಸೆಯು ಇವನನ್ನು ಹೆತ್ತಳಲ್ಲಾ” ಎಂದು ಹೇಳಿದರು. PEPS
16 ನವೊಮಿಯೇ ಮಗುವನ್ನು ಮಡಿಲಲ್ಲಿಟ್ಟುಕೊಂಡು ಸಾಕುತ್ತಿದ್ದಳು.
17 ನೆರೆಹೊರೆಯ ಹೆಂಗಸರು ನವೊಮಿಗೆ “ಒಬ್ಬ ಮಗನು ಹುಟ್ಟಿದ್ದಾನೆಂದು” ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ಇಷಯನಿಗೆ ತಂದೆಯೂ, ದಾವೀದನಿಗೆ ಅಜ್ಜನೂ ಆದನು. PS
18 {ದಾವೀದನ ವಂಶಾವಳಿ} PS ಪೆರೆಚನ ವಂಶಾವಳಿ: ಪೆರೆಚನು ಹೆಚ್ರೋನನನ್ನು ಪಡೆದನು;
19 ಹೆಚ್ರೋನನು ರಾಮನನ್ನು ಪಡೆದನು; ರಾಮನು ಅಮ್ಮೀನಾದಾಬನನ್ನು ಪಡೆದನು;
20 ಅಮ್ಮೀನಾದಾಬನು ನಹಶೋನನನ್ನು ಪಡೆದನು; ನಹಶೋನನು ಸಲ್ಮೋನನನ್ನು ಪಡೆದನು;
21 ಸಲ್ಮೋನನು ಬೋವಜನನ್ನು ಪಡೆದನು; ಬೋವಜನು ಓಬೇದನನ್ನು ಪಡೆದನು;
22 ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×