Bible Versions
Bible Books

Amos 1 (KNV) Kannadam Old BSI Version

1 ತೆಕೋವದ ಕುರುಬರಲಿದ್ದ ಆಮೋಸನು ಯೆಹೂದದ ಅರಸನಾದ ಉಜ್ಜೀಯನ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ದಿನಗಳ ಲ್ಲಿಯೂ ಭೂಕಂಪಕ್ಕೆ ಎರಡು ವರುಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ನೋಡಿದ ವಾಕ್ಯಗಳು.
2 ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.
3 ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
4 ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.
5 ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್‌ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.
6 ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.
7 ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು.
8 ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.
9 ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
10 ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
11 ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
12 ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
13 ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.
14 ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
15 ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×